Asianet Suvarna News Asianet Suvarna News

ಆರೋಗ್ಯ ಸೇವೆಗಳು ಸಮರ್ಪಕವಾಗಿ ಜನರಿಗೆ ಸಲ್ಲದಿದ್ದರೆ ಸಹಿಸಲ್ಲ: ಅಧಿಕಾರಿಗಳ ವಿರುದ್ಧ ದಿನೇಶ್ ಗುಂಡೂರಾವ್ ಗರಂ

ಗುಣಮಟ್ಟದ ಆರೋಗ್ಯ ಸೇವೆಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. 

If health services are not adequately provided to the people it will not be tolerated says dinesh gundu rao gvd
Author
First Published Jun 20, 2024, 9:29 PM IST

ಬೆಂಗಳೂರು (ಜೂ.20): ಗುಣಮಟ್ಟದ ಆರೋಗ್ಯ ಸೇವೆಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಆರೋಗ್ಯ ಇಲಾಖೆಯ ಉಪನಿರ್ದೇಶಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಸಭೆ ನಡೆಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 

ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಜಾರಿಯಲ್ಲಿರುವ ಆರೋಗ್ಯ ಸೇವೆಗಳು ಹೆಚ್ಚು ಪ್ರಗತಿ ಕಂಡಿಲ್ಲ. ಹಲವು ಸೇವೆಗಳು ನಿರೀಕ್ಷಿತ ಮಟ್ಟದಲ್ಲಿ ಅನುಷ್ಠಾನಗೊಂಡಿಲ್ಲ. ಕಳೆದ ವರ್ಷದ ಅವಧಿಯಲ್ಲಿ ಹಲವು ಬಿಲ್ ಗಳು ಪಾವತಿಯಾಗದೇ ಬಾಕಿ ಇರಿಸಿಕೊಂಡಿರುವ ಬಗ್ಗೆ ಅಧಿಕಾರಿಗಳಿಗೆ ಚಾಟಿ ಬೀಸಿದರು. ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ದೊರೆಯುವ ಅನುದಾನವನ್ನ ಸಮರ್ಪಕವಾಗಿ ಬಳಿಸಿಕೊಂಡಿಲ್ಲ ಎಂದಾದರೆ, ಆರೋಗ್ಯ ಸೇವೆಗಳು ಸಮರ್ಪಕವಾಗಿ ತಲುಪಲು ಹೇಗೆ ಸಾಧ್ಯ ಎಂದು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಚುರುಕು ಮುಟ್ಟಿಸಿದರು.‌

ಲಭ್ಯವಿರುವ ಹಣಕಾಸಿನ ಸರಿಯಾಗಿ ಖರ್ಚು ಮಾಡದಿದ್ದರೆ ಏನು ಪ್ರಯೋಜನ.. ಟೆಂಡರ್ ಪ್ರಕ್ರಿಯೆಗಳನ್ನ ಮಾರ್ಚ್ ವರೆಗೆ  ಎಕೆ ಎಳೆದುಕೊಂಡು ಹೋಗುತ್ತಿದ್ದೀರಿ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದರು.‌. ಯಾವ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಲ್ಲ ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ನಾನು ಹಿಂಜರಿಯಲ್ಲ. ಯಾರ ಮೂಲಾಜು ನಮಗಿಲ್ಲ. ಯಾರ ಒತ್ತಡದಿಂದಲೂ ನಾನು ಒಬ್ಬ ಅಧಿಕಾರಿಯನ್ನೂ ನೇಮಿಸಿಲ್ಲ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಲಹೆ ಮೇರೆಗೆ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನ ನೀಡಲಾಗಿದೆ. 

ಅಂಬೂರ್ ಬಿರಿಯಾನಿ ಹೊಟೇಲ್ ಕಟ್ಟಡ ಕುಸಿತ: ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ

ಹೀಗಾಗಿ ನಿಮ್ಮ ಕಾರ್ಯದಕ್ಷತೆ ತೋರದಿರುವ ಅಧಿಕಾರಿಗಳ ವಿರುದ್ಧ  ನಿರ್ದಾಕ್ಷಿಣ್ಯ ನಿರ್ಧಾರಗಳನ್ನ ತೆಗೆದುಕೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ಅವರು ಎಚ್ಚರಿಕೆ ನೀಡಿದರು.  ಜಿಲ್ಲಾಸ್ಪತ್ರೆಗಳಲ್ಲಿ ಕಾರ್ಯವೈಳರಿ, ಇ - ಆಫೀಸ್, ಟೆಲಿ ಐಸಿಯು, ಆಯುಷ್ಮಾನ್ ಭಾರತ್ ಯೋಜನೆಯ ರೆಫರೆಲ್ ಪದ್ದತಿಗಳ ಬಗ್ಗೆ ಚರ್ಚಿಸಲು ಸಭೆ ಆಯೋಜಿಸುವಂತೆ ಇದೇ ವೇಳೆ ಸಚಿವರು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಎನ್.ಎಚ್.ಎಮ್. ಎಂ.ಡಿ ನವೀನ್ ಭಟ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Latest Videos
Follow Us:
Download App:
  • android
  • ios