Asianet Suvarna News Asianet Suvarna News

ನಮ್ಮ ಸರ್ಕಾರ ಬಂದರೆ ಕಾರ‍್ಯಕರ್ತರು ನಾಯಕರಿಗೂ ಸ್ಥಾನಮಾನ: ರಾಹುಲ್‌ ಗಾಂಧಿ

: ಕರ್ನಾಟದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಶಾಸಕರಿಗೆ ಮಾತ್ರವಲ್ಲ ಬ್ಲಾಕ್‌ ಮಟ್ಟದಿಂದ ರಾಜ್ಯಮಟ್ಟದವರೆಗೂ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರನ್ನು ಗುರುತಿಸಿ ಸರ್ಕಾರದ ವಿವಿಧ ಹುದ್ದೆಗಳಿಗೆ ನಾಮ ನಿರ್ದೇಶನ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದರು.

If our government comes, workers and leaders will have status says Rahul gandhi at bengaluru rav
Author
First Published Apr 17, 2023, 7:56 AM IST

ಬೆಂಗಳೂರು (ಏ.17) : ಕರ್ನಾಟದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಶಾಸಕರಿಗೆ ಮಾತ್ರವಲ್ಲ ಬ್ಲಾಕ್‌ ಮಟ್ಟದಿಂದ ರಾಜ್ಯಮಟ್ಟದವರೆಗೂ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರನ್ನು ಗುರುತಿಸಿ ಸರ್ಕಾರದ ವಿವಿಧ ಹುದ್ದೆಗಳಿಗೆ ನಾಮ ನಿರ್ದೇಶನ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದರು.

ನಗರದ ಕ್ವೀನ್ಸ್‌ ರಸ್ತೆಯ ಕಾಂಗ್ರೆಸ್‌ ಭವನದ ಹಿಂಭಾಗ ನಿರ್ಮಿಸಿರುವ ‘ಇಂದಿರಾ ಗಾಂಧಿ ಭವನ(Indira gandhi bhavan)’ ಮತ್ತು ‘ಭಾರತ್‌ ಜೋಡೋ ಸಭಾಂಗಣ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಪಕ್ಷದ ಎಲ್ಲ ಕಾರ್ಯಕರ್ತರು, ನಾಯಕರು ಒಟ್ಟಾಗಿ ಶ್ರಮಿಸಿ. 150 ಸೀಟುಗಳೊಂದಿಗೆ ಸಂಪೂರ್ಣ ಬಹುಮತದೊಂದಿಗೆ ನಾವು ಅಧಿಕಾರಕ್ಕೆ ಬರಬೇಕು ಎಂದರು.

ಬೆಂಗಳೂರು: ಕಾಂಗ್ರೆಸ್ಸಿನ ‘ಇಂದಿರಾ ಗಾಂಧಿ ಭವನ’ ಉದ್ಘಾಟನೆ

ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಶಾಸಕರು, ಸಚಿವರು ಮಾತ್ರವಲ್ಲ ಬ್ಲಾಕ್‌ ಮಟ್ಟದಿಂದ ರಾಜ್ಯಮಟ್ಟದವರೆಗೂ ಪಕ್ಷಕ್ಕಾಗಿ ದುಡಿದ ನಾಯಕರು, ಕಾರ್ಯಕರ್ತರನ್ನು ಗುರುತಿಸಿ ಸರ್ಕಾರದ ಮಟ್ಟದ ಸಂಸ್ಥೆಗಳಿಗೆ ನಾಮನಿರ್ದೇಶ ಮಾಡಿ ಶಕ್ತಿ ತುಂಬಲಾಗುವುದು ಎಂದು ಹೇಳಿದರು. ಇದಕ್ಕೆ ತಮ್ಮ ಭಾಷಣದಲ್ಲಿ ಸಹಮತ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಇದು ಕೇವಲ ಆಶ್ವಾಸನೆಯಲ್ಲ. ನಾಯಕರು, ಕಾರ್ಯಕರ್ತರಿಗೆ ದನಿ ನೀಡಲು ಇಂತಹದ್ದೊಂದು ಮಹತ್ವದ ಬದಲಾವಣೆ ತರುವ ನಿಯಮವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೂಪಿಸುವುದಾಗಿ ತಿಳಿಸಿದರು.

ಭಾರತ್‌ ಜೋಡೋ ಯಾತ್ರೆಯಲ್ಲಿ ರಾಜ್ಯ ಕಾಂಗ್ರೆಸ್‌ನ ಎಲ್ಲ ನಾಯಕರೂ ಒಟ್ಟಾಗಿ, ಒಗ್ಗಟ್ಟಾಗಿ ಕಠಿಣ ಶ್ರಮದಿಂದ ಕೆಲಸ ಮಾಡಿದರು. ಅದೇ ಒಗ್ಗಟ್ಟಿನ ದಾರಿಯಲ್ಲೇ ಚುನಾವಣೆಯನ್ನೂ ಎದುರಿಸಿದರೆ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಜತೆಗೆ ಪಕ್ಷದ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಕಾರ್ಯಕ್ರಮಗಳನ್ನು ಪ್ರತಿ ಮನೆ ಮನೆಗೂ ತಲುಪಿಸುವ ಕೆಲಸವನ್ನು ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌, ಮಾಜಿ ಸಚಿವರಾದ ಕೆ.ಎಚ್‌.ಮುನಿಯಪ್ಪ, ಎಚ್‌.ಕೆ.ಪಾಟೀಲ್‌, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್‌, ಚಂದ್ರಪ್ಪ ಉಪಸ್ಥಿತರಿದ್ದರು.

ಪೌರ ನೌಕರರು, ಬೀದಿ ವ್ಯಾಪಾರಿ ಜೊತೆ ರಾಹುಲ್‌ ಗಾಂಧಿ ಸಂವಾದ

 ಪೌರಕಾರ್ಮಿಕರು ಹಾಗೂ ಬೀದಿ ಬದಿ ವ್ಯಾಪಾರಿಗಳೊಂದಿಗೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಸಂವಾದ ನಡೆಸಿದ್ದಾರೆ.

ಕೋಲಾರದಲ್ಲಿ ಭಾನುವಾರ ಜೈ ಭಾರತ್‌ ಸಮಾವೇಶದಲ್ಲಿ ಪಾಲ್ಗೊಂಡು ನಂತರ ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿ, ಜೆ.ಪಿ.ನಗರದ ಶಿವಾನಂದ ಶರ್ಮ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಬೆಂಗಳೂರಿನ ಪೌರಕಾರ್ಮಿಕರು ಹಾಗೂ ಬೀದಿ ಬದಿ ವ್ಯಾಪಾರಿಗಳೊಂದಿಗೆ ಸಂಚಾರ ನಡೆಸಿದರು. ಅವರ ಸಮಸ್ಯೆ ಆಲಿಸಿದರು. ಬಳಿಕ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಪೌರಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದರು.

ರಾಹುಲ್‌ ಗಾಂಧಿ ಮುಂದೆ ಮುಖ್ಯಮಂತ್ರಿ ನಿಲುವು ಪ್ರಕಟಿಸಿದ ಮಲ್ಲಿಕಾರ್ಜುನ ಖರ್ಗೆ!

ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Follow Us:
Download App:
  • android
  • ios