ಕಲಬುರಗಿ: ರಾಜಕೀಯಕ್ಕೆ ಬರುವ ಯಾವುದೇ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ರಾಜಕೀಯದ ಹೊರತಾಗಿಯೂ ಸಮಾಜ ಸೇವೆ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. 

ಕಲಬುರಗಿ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಅರಮನೆ ಮೂಲಕ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಲಾಗುತ್ತಿದೆ. 

ನನ್ನನ್ನು ಪ್ರವಾಸೋದ್ಯಮ ರಾಯಭಾರಿಯಾಗಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿವೆ ಎಂದರು.