ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. 5 ಜಿಲ್ಲೆಯ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. ಹಲವು ಕಾರ್ಯಕ್ರಮಗಳು ರದ್ದಾಗಿದೆ. ಇತ್ತ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಿದ್ದರೆ, ಬೆಂಗಳೂರು ಸೇರಿದಂತೆ ಇತರೆಡೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು (ಆ.28) ದೇಶದ ಹಲವು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಭೂಕುಸಿತ, ಪ್ರವಾಹ ಸೃಷ್ಟಿಯಾಗಿದೆ. ಹಲವು ಸಾವು ಸಂಭವಿಸಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಇತ್ತ ಕರ್ನಾಟಕದಲ್ಲೂ ಭಾರಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆ ಬೆನ್ನಲ್ಲೇ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಿದ್ದರೆ,ಬೆಂಗಲೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆ ಪರಿಣಾಮ ರಾಜ್ಯದ 5 ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಕೊಂಡಿದೆ. ಆಗಸ್ಟ್ ಅಂತ್ಯದಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ : ದಕ್ಷಿಣ ಕನ್ನಡದ ಕೆಲ ತಾಲೂಕು ಸೇರಿ ರಾಜ್ಯದ 3 ಜಿಲ್ಲೆಯ ಶಾಲಾ ಕಾಲೇಜಿಗೆ ಇಂದು ರಜೆ

ಐದು ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಣೆ

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ 5 ಜಿಲ್ಲೆಯ ಶಾಲಾ ಕಾಲೇಜಿಗೆ ಇಂದು (ಆಗಸ್ಟ್ 28) ರಜೆ ಘೋಷಿಸಲಾಗಿದೆ. ಈ ಪೈಕಿ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇನ್ನುಳಿದಂತೆ ಉಡುಪಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಯಾದಗಿರಿ ಶಾಲಾ ಕಾಲೇಜಿಗೆ ರಜೆ ಘೋಷಣೆ

ಯಾದಗಿರಿ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ನಿರಂತರ ಮಳೆ ಹಿನ್ನೆಲೆ ಶಾಲಾ-ಕಾಲೇಜು, ಅಂಗನವಾಡಿಗೆ ರಜೆ ಘೋಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಯಾದಿಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಆದೇಶ ಮಾಡಿದ್ದಾರೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗಲು ಆಗದಂತ ಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ವಿದ್ಯಾರ್ಥಿಗಳ‌ ಆರೋಗ್ಯದ ಹಿದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ.

ರೀಲ್ಸ್ ಮಾಡಲು ಹೋಗಿ ರಕ್ಷಣೆಗೂ ಮೊದಲೇ ಕೊಚ್ಚಿ ಹೋದ ಯೂಟ್ಯೂಬರ್, ವಿಡಿಯೋ

ಬೀದರ್ ತಾಲೂಕಿನ ಔರಾದ್ ಶಾಲಾ ಕಾಲೇಜಿಗೆ ಇಂದು ರಜೆ

ಭಾರಿ ಮಳೆಯಾಗುತ್ತಿರುವ ಕಾರಣ ಬೀದರ್ ಜಿಲ್ಲೆಯ ಔರಾದ್ ಶಾಲಾ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. ತಹಸೀಲ್ದಾರ ಮಹೇಶ ಪಾಟೀಲ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆಗೆ ಮುನ್ನಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.