ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು (ಅ.14): ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ರಾಜ್ಯದ ಇತರ ಕಡೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜಿಲ್ಲಾಧಿಕಾರಿಗಳಿಗೆ ಮಳೆ‌ ಮುನ್ಸೂಚನೆ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ,ಬೀದರ್,ಧಾರವಾಡ,ಗದಗ,ಹಾವೇರಿ, ಕಲಬುರಗಿ, ಬಿಜಾಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ಮೈಸೂರು ಜಿಲ್ಲಾಧಿಕಾರಿಗಳಿಗೆ‌ ಹವಮಾನ ಇಲಾಖೆ ಮಾಹಿತಿ ನೀಡಿದೆ. ಮೇಲ್ಮೈ ಸುಳಿಗಾಳಿಯ ಪ್ರಭಾವ ರಾಜ್ಯ ಹಾಗೂ ರಾಜಧಾನಿಯಲ್ಲಿ ಇನ್ನೂ ಕೆಲವು ದಿನಗಳ ಕಾಲ ಇರಲಿದೆ. ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಬಹುದು ಎಂದು ಎಚ್ಚರಿಸಲಾಗಿದೆ. ಹೀಗಾಗಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಲ್ಲಿ ಹವಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನಗಳ ಮಳೆ ಇರಲಿದ್ದು, ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಕರಾವಳಿ ಭಾಗದಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಯಲ್ಲೋ ಅಲರ್ಟ್ ನೀಡಲಾಗಿದೆ.

Add Asianetnews Kannada as a Preferred SourcegooglePreferred

ಮುಂಗಾರು ಬೆಳೆನಷ್ಟ, ಕೈ ಹಿಡಿಯುವುದೇ ಹಿಂಗಾರು..!

ರಾಜ್ಯ ರಾಜಧಾನಿ ಬೆಂಗಳೂರಿಗೆ (Bengaluru) ಇನ್ನು 5 ದಿನ ಮಳೆ ಇರಲಿದ್ದು, ಶುಕ್ರವಾರ ಮಾತ್ರ ಯಲ್ಲೋ ಅಲರ್ಟ್ (Yellow Alert) ನೀಡಲಾಗಿದೆ. ಕೆಲವೊಮ್ಮೆ ಗುಡುಗು-ಮಿಂಚಿನ ಮಳೆಯಾಗುವ ಸಾಧ್ಯತೆ ಇದ್ದು, ರಾಜಕಾಲುವೆ , ತಗ್ಗು ಪ್ರದೇಶಗಳಲ್ಲಿರುವ (Rain) ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ.ೆ ಇನ್ನು ಬೆಂಗಳೂರಿನಿಂದ ಬೆಳ್ಳಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದು, ನಗರ ಮೆಜೆಸ್ಟಿಕ್, ವಿಜಯನಗರ, ಕಾರ್ಪೋರೇಷನ್, ಮೈಸೂರ್ ಬ್ಯಾಂಕ್ ಸರ್ಕಲ್, ಸೇರಿದಂತೆ ಹಲವೆಡೆ ತುಂತುರು ಮಳೆ ಈಗಾಗಳೇ ಆರಂಭವಾಗಿದೆ.