ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಎಚ್ಚರಿಕೆಯನ್ನೂ ನೀಡಲಾಗಿದೆ. ಇದೀಗ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಗೆ ವಾಹನ ಸವಾರರು ಪರಾಡಿದ್ದಾರೆ. ಹವಾಮಾನ ಇಲಾಖೆ ಸೂಚನೆ ಏನು?
ಬೆಂಗಳೂರು (ಜು.19) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇತ್ತ ಬೆಂಗಳೂರಿನಲ್ಲಿ ಇಂದು (ಜು.19) ಜಿಟಿ ಜಿಟಿ ಮಳೆಯಾಗುತ್ತಿದೆ. ಮಧ್ಯಾಹ್ನದಿಂದ ಬೆಂಗಳೂರಿನ ಹಲವು ಭಾಗದಲ್ಲಿ ಮಳೆಯಾಗುತ್ತಿದೆ. ಸಂಜೆ ವೇಳೆಗೆ ಮಳೆ ಪ್ರಮಾಣ ಹೆಚ್ಚಾಗಿದೆ. ಮಲ್ಲೇಶ್ವರಂ, ಮೆಜೆಸ್ಟಿಕ್, ವಿಧಾನಸೌಧ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ. ಹಲೆವೆಡೆ ಟ್ರಾಫಿಕ್ ಜಾಮ್ ಸಂಭವಿಸಿದೆ.
ಮುಳ್ಳಯನಗಿರಿ ಪ್ರವಾಸಿ ತಾಣದಲ್ಲಿ ಮಳೆಯಿಂದ ಕಾರು-ಜೀಪ್ ಡಿಕ್ಕಿ
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ವೀಕೆಂಡ್ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ. ಮುಳ್ಳಯನಗಿರಿಯಲ್ಲಿ ಧಾರಾಕಾರವಾಗಿ ಮಳೆಯಾಗಿದೆ. ಭಾರಿ ಮಳೆ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮುಳ್ಳಯನಗಿರಿಗೆ ತೆರಳಿದ್ದಾರೆ. ಕಾರು-ಬೈಕ್-ಟಿಟಿ ಸೇರಿ 1850 ವಾಹನಗಳು ಗಿರಿಭಾಗಕ್ಕೆ ಭೇಟಿ ನೀಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಹಾಗೂ ಭಾರಿ ಮಳಯಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು-ಜೀಪ್ ಮುಖಾಮುಖಿ ಡಿಕ್ಕಿಯಾಗಿದೆ. ಕಾರು ಮುಳ್ಳಯ್ಯನಗಿರಿಯಿಂದ ಕೆಳಗೆ ಇಳಿಯುವಾಗ ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರು-ಜೀಪ್ ನ ಮುಂಭಾಗ ಜಖಂ ಆಗಿದೆ.
ಮುಳ್ಳಯನ ಗಿರಿಯಲ್ಲಿ ವಾಹನ ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಗಿರಿಧಾಮಕ್ಕೆ ಪ್ರವೇಶ ಪಡೆದ ಕಾರಣ ಪೊಲೀಸರು ಸಂಚಾರ ನಿಯಂತ್ರಣಕ್ಕೆ 2 ಗಂಟೆ ಗಿರಿ ಪ್ರವೇಶ ನಿರ್ಬಂಧಿಸಲಾಗಿತ್ತು. ಸುರಿಯುತ್ತಿರೋ ಮಳೆ ಮಧ್ಯೆ ವಾಹನ ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ.
ಉತ್ತರಕನ್ನಡಲ್ಲಿ 24 ಗಂಟೆ ಭಾರಿ ಮಳೆ, ಹಲವರ ಸ್ಥಳಾಂತರ
ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುತ್ತಿದೆ. ಮುಂದಿನ 24 ಗಂಟೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಮನವಿ ಮಾಡಿದ್ದಾರೆ. ಅಘನಾಶಿನಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದ ಸಾಧ್ಯತೆ ಹಿನ್ನೆಲೆ ನದಿ ಪತ್ರದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ಮಣ್ಣಿನ ಸವಕಳಿ ಹೆಚ್ಚಾಗುವ ಹಿನ್ನೆಲೆ ಬೆಟ್ಟದ ತಪ್ಪಲಿನ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಕ್ಕೆ ಸೂಚಿಸಲಾಗಿದೆ. ಕಡಲ ತೀರ, ನದಿ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
