Asianet Suvarna News Asianet Suvarna News

ಭಾರಿ ಮಳೆಯಿಂದ ಕೆರೆಯಂತಾಗಿರುವ ಬೆಂಗಳೂರಿಗೆ ಯೆಲ್ಲೋ ಅಲರ್ಟ್, ಮುಂದಿನ 3 ಗಂಟೆ ಎಚ್ಚರಿಕೆ!

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಹಲವು ಭಾಗಗಳು ಜಲಾವೃತಗೊಂಡಿದೆ. ಮನೆಗಳಿಗೆ ನೀರು ನುಗ್ಗಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಸೂಚನೆ ನೀಡಿದೆ. ಮುಂದಿನ ಮೂರು ಗಂಟೆ ಯೆಲ್ಲೋ ಅಲರ್ಟ್ ಘೋಷಿಸಿದೆ.
 

IMD Issues yellow alert for heavy rain and storm in Bengaluru and rural ckm
Author
First Published Aug 5, 2024, 11:07 PM IST | Last Updated Aug 5, 2024, 11:07 PM IST

ಬೆಂಗಳೂರು(ಆ.05) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇಂದು ಸಂಜೆಯಿಂದ ಬೆಂಗಳೂರಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ರಸ್ತೆಗಳು ಕೆರೆಯಂತಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಸಂಚಾರ, ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಸೂಚನೆ ನೀಡಿದೆ. ಮುಂದಿನ ಮೂರು ಗಂಟೆ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಲಾಗಿದೆ.

ಇಂದು ಸಂಜೆಯಿಂದಲೇ ಬೆಂಗಳೂರಿನಲ್ಲಿ ಮಳೆ ಅಬ್ಬರ ಜೋರಾಗಿತ್ತು. ನಿರಂತರವಾಗಿ ಸುರಿದ ಮಳೆಯಿಂದ ಶಾಂತಿನಗರ ಬಸ್ ನಿಲ್ದಾಣ ಮುಂಭಾಗದಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿತ್ತು. ಕೋರಮಂಗಲಕ್ಕೆ ತೆರಳುವ ರಸ್ತೆ ತುಂಬಿ ತುಳುಕಿದೆ. ಪಕ್ಕದಲ್ಲಿರುವ ಮೋರಿ ಬ್ಲಾಕ್ ಆಗಿರುವ ಕಾರಣ ನೀರು ಹರಿಯಲು ಸಾಧ್ಯವಾಗದೆ ರಸ್ತೆ ಮೇಲೆ ಹರಿದಿದೆ. ಇತ್ತ ವಿಲ್ಸಡನ್ ಗಾರ್ಡನ್‌ನಲ್ಲೂ ಇದೇ ಪರಿಸ್ಥಿತಿ ಮುಂದುವರಿದಿದೆ.

ತುಂಗಭದ್ರಾ ಜಲಾಶಯದಿಂದ 98 ಟಿಎಂಸಿ ನೀರು ನದಿಪಾಲು!

ಬ್ರಿಗೇಡ್ ರಸ್ತೆ ತುಂಬಾ ನೀರು ನಿಂತುಕೊಂಡಿದೆ. ರಸ್ತೆ ನೀರಿನಲ್ಲಿ ನೀರು ತುಂಬಿಕೊಂಡ ಕಾರಣ ವಾಹನ ಸವರಾರರು ಪರದಾಡಿದ್ದಾರೆ. ನಾಗವಾರ ಜಂಕ್ಷನ್‌ನಲ್ಲಿ ಮಳೆಯಿಂದಾಗಿ ನೀರು ತುಂಬಿಕೊಂಡಿದೆ. ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ನೀರು ತುಂಬಿಕೊಂಡಿದೆ. ಭಾರಿ ಮಳೆಯಿಂದ ಹಲವು ಮನೆಗಳಿಗೆ ನೀರು ನುಗ್ಗಿದೆ. ಮೆಜೆಸ್ಟಿಕ್ ರೈಲ್ವೆ ಸ್ಟೇಶನ್ ಒಳಗಡೆ ನೀರು ಸೋರಿಕೆಯಾಗಿ ಜನರು ಪರದಾಡಿದ್ದಾರೆ.  

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 3 ಗಂಟೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ತುಮಕೂರು, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. 30-40 ಕಿಮೀ ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಸೂಚಿಸಿದೆ.

ಕನಕಪುರ : ಭಾರಿ ಮಳೆಯಿಂದ ಗಡಿಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾವೇರಿ ನದಿ
 

Latest Videos
Follow Us:
Download App:
  • android
  • ios