Asianet Suvarna News Asianet Suvarna News

ಕರ್ನಾಟಕದಲ್ಲಿ 3 ದಿನ ಬಿರುಗಾಳಿ ಸಹಿತ ಮಳೆ ಅಲರ್ಟ್, ಕೆಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ!

ಕರ್ನಾಟಕದಲ್ಲಿ ಇನ್ನೂ 3 ದಿನ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಎಚ್ಚರಿಸಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ, ಕೊಡುಗು ಸೇರಿದಂತೆ ಮಲೆನಾಡಿನಲ್ಲಿ ಭಾರಿ ಮಳೆಗೆ ಹಲವು ಪ್ರದೇಶಗಳು ಮುಳುಗಡೆಯಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ.

IMD Predicts heavy rain next 3 days in Karnataka few district announce holidays for schools ckm
Author
First Published Jun 27, 2024, 8:42 AM IST

ಬೆಂಗಳೂರು(ಜೂ.27) ಕರ್ನಾಟಕದ ಹಲವು ಜಿಲ್ಲೆಗಲ್ಲಿ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಯಲ್ಲಿ ಮಳೆಯಿಂದ ಹಲವು ಅನಾಹುತಗಳು ಸಂಭವಿಸಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಇನ್ನು ಮೂರು ದಿನ ಕರ್ನಾಟಕದಲ್ಲ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಸಿದೆ.  ಜೂನ್ 29ರ ವರೆಗೆ ಕೆಲ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ. 

ನಿನ್ನೆ ರಾತ್ರಿಯಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದೆ. ಇಂದು ಸಂಜೆ ಸಾಧಾರಣ ಮಳೆಯಾಗುವು ಸಾಧ್ಯತೆ ಇದೆ. ಭಾರಿ ಮಳೆ ಮುನ್ಸೂಚನೆ ಇರುವ ಕಾರಣ ಎಚ್ಚರವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಂತರ ಪ್ರದೇಶದಲ್ಲಿ ಮಳೆಯಾಗಲಿದೆ ಎಂದಿದೆ.

ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಅವಘಡ: ಧರೆ ಕುಸಿದು ಮಣ್ಣಿನಡಿ ಸಿಲುಕಿದ ಮಕ್ಕಳು..!

ಉತ್ತರ ಒಳನಾಡು ಪ್ರದೇಶಗಳಿಗೆ ಇಂದು ಕೂಡ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ. ಆದರೆ ದಕ್ಷಿಣ ಹಾಗೂ ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಕೊಡಗು ಹಾಗೂ ದಕ್ಷಿಣ ಕನ್ನಡದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಅವಘಡಗಳು ಸಂಭವಿಸಿದೆ.  

ನಿನ್ನೆ ರಾಜ್ಯದಲ್ಲಿ ಎಷ್ಟೆಷ್ಟು ಮಳೆ..!?
ಮಂಗಳೂರು 152.9mm
ಶಿವಮೊಗ್ಗ- 150.5mm
ಗೋಣಿಕೊಪ್ಪಲು- 91.0mm
ಮೂಡಿಗೆರೆ 38.0mm

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಎಲ್ಲಾ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.  ಕೊಡಗು ಡಿಡಿಪಿಐ ರಂಗಧಾಮಪ್ಪ ಮಹತ್ವದ ನಿರ್ಧಾರ ಘೋಷಿಸಿದ್ದಾರೆ.  ಇಂದು ಒಂದು ದಿನ ರಜೆ ಘೋಷಣೆ ಮಾಡಲಾಗಿದೆ.  

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ: 4 ಜನ ಬಲಿ, ಇಂದೂ ಕೂಡ ರೆಡ್‌ ಅಲರ್ಟ್‌..!

ಇತ್ತ ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ  ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ಇಂದು ಇಂದು ದ.ಕ‌ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
 

Latest Videos
Follow Us:
Download App:
  • android
  • ios