Asianet Suvarna News Asianet Suvarna News

ಒಬಿಸಿ ಮೀಸಲಿಗಾಗಿ ರಾಜ್ಯಾದ್ಯಂತ ವೀರಶೈವ-ಲಿಂಗಾಯತ ಪ್ರತಿಭಟನೆ

ವೀರಶೈವ-ಲಿಂಗಾಯತ ಸಮುದಾಯದ ಎಲ್ಲ ಪಂಗಡಗಳನ್ನು ಕೇಂದ್ರದ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರಿಸುವಂತೆ ಆಗ್ರಹಿಸಿ ‘ಅಖಿಲ ಭಾರತ ವೀರಶೈವ ಮಹಾಸಭಾ’ ವತಿಯಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. 

In Karnataka Lingayat Community Held Protest For Obc Reservation gvd
Author
Bangalore, First Published Aug 2, 2022, 4:30 AM IST | Last Updated Aug 2, 2022, 4:30 AM IST

ಬೆಂಗಳೂರು (ಆ.02): ವೀರಶೈವ-ಲಿಂಗಾಯತ ಸಮುದಾಯದ ಎಲ್ಲ ಪಂಗಡಗಳನ್ನು ಕೇಂದ್ರದ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರಿಸುವಂತೆ ಆಗ್ರಹಿಸಿ ‘ಅಖಿಲ ಭಾರತ ವೀರಶೈವ ಮಹಾಸಭಾ’ ವತಿಯಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ ಇತರ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಕೋರಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ವೀರಶೈವ ಲಿಂಗಾಯತದಲ್ಲಿ 92ಕ್ಕೂ ಹೆಚ್ಚು ಒಳ ಪಂಗಡಗಳಿವೆ. ಕೇಂದ್ರ ಸರ್ಕಾರ 16 ಉಪ ಪಂಗಡಗಳನ್ನು ಮಾತ್ರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಿದೆ. ಇನ್ನುಳಿದ ಉಪ ಪಂಗಡಗಳನ್ನು ಪಟ್ಟಿಯಿಂದ ಹೊರಗಿಟ್ಟಿದೆ. ಇದರಿಂದ ಸಮಾಜದಲ್ಲಿ ಕೆಲವರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ವೀರಶೈವ ಲಿಂಗಾಯತರಲ್ಲಿನ ಎಲ್ಲ ಉಪ ಪಂಗಡಗಳನ್ನು ಒಬಿಸಿ ಪಟ್ಟಿಗೆ ಸೇರಿಸಬೇಕು. ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದರು. ಅಖಿಲ ಭಾರತ ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಈಶ್ವರ್‌ಖಂಡ್ರೆ, ಮುಂದಿನ ಒಂದು ತಿಂಗಳ ಒಳಗೆ ಒಬಿಸಿ ಪಟ್ಟಿಗೆ ಸೇರಿಸಲು ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಕೆಇಎ ಎದುರು ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳಿಂದ ಮುಂದುವರಿದ ಪ್ರತಿಭಟನೆ

ಸಂವಿಧಾನದ 15(4) ಮತ್ತು 16(4) ಅನುಚ್ಛೇದಗಳು ಇತರ ಹಿಂದುಳಿದ ವರ್ಗಗಳ ಮೀಸಲಾತಿಗೆ ಅವಕಾಶ ಕಲ್ಪಿಸಿಕೊಡುತ್ತವೆ. ಸಾಮಾನ್ಯವಾಗಿ ರಾಜ್ಯ ಹಿಂದುಳಿದ ಪಟ್ಟಿಯಲ್ಲಿರುವ ಜಾತಿ/ಪಂಗಡಗಳನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲಾಗುತ್ತದೆ. ಕರ್ನಾಟಕ ರಾಜ್ಯದಲ್ಲಿ ಕಳೆದ 60 ವರ್ಷಗಳಿಂದ ವೀರಶೈವ-ಲಿಂಗಾಯತ ಸಮುದಾಯವು ರಾಜ್ಯದ ಇತರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿದ್ದರೂ, ಈ ವರ್ಗವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸದಿರುವುದು ದುರದೃಷ್ಟಕರ ಎಂದು ಪ್ರತಿಭಟನಾಕಾರರು ಹೇಳಿದರು.

ವೀರಶೈವ ಲಿಂಗಾಯತ ಸಮಗ್ರ ವರದಿ: ವೀರಶೈವ-ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಇತರೆ ಹಿಂದುಳಿದ ವರ್ಗಗಳ ಓಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಆಗ್ರಹಿಸಿ ವೀರಶೈವ-ಲಿಂಗಾಯತ ಮಹಾಸಭಾ ಕಾರ್ಯಕರ್ತರು ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು. ವಿಜಯಪುರದ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವೀರಶೈವ ಮಹಾಸಭಾದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಹೊತ್ತು ಪ್ರತಿಭಟನೆ ನಡೆಸಿದರು. 

ಸುಬ್ರಹ್ಮಣ್ಯದಲ್ಲಿ ಭಾರಿ ಮಳೆ: ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣುಪಾಲು

ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರಾರ‍ಯಲಿ ನಡೆಸಿ, ಬೇಡಿಕೆ ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು. ಬಾಗಲಕೋಟೆಯಲ್ಲಿ ಶಾಸಕ ವೀರಣ್ಣ ಚರಂತಿಮಠ ಹಾಗೂ ಶ್ರೀ ನೇತೃತ್ವದಲ್ಲಿ ಬೃಹತ್‌ ಮೆರವಣಿಗೆಯ ಮೂಲಕ ಪದಾಧಿಕಾರಿಗಳು ಜಿಲ್ಲಾಡಳಿತದವರೆಗೆ ತೆರಳಿ ಮನವಿ ಸಲ್ಲಿಸಿದರು.

Latest Videos
Follow Us:
Download App:
  • android
  • ios