Asianet Suvarna News Asianet Suvarna News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ನಿಲ್ದಾಣ ಲೋಕಾರ್ಪಣೆ: ರಾಮಲಿಂಗಾರೆಡ್ಡಿ, ಮುನಿಯಪ್ಪ ಭಾಗಿ

ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಬೆಂಗಳೂರುಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಬಸ್ ಗಳಿಗೆ ಹಸಿರು ನಿಶಾನೆ ತೋರಿದರು.
 

Inauguration of BMTC Bus Stand at Kempegowda International Airport gvd
Author
First Published Dec 30, 2023, 11:59 PM IST

ದೊಡ್ಡಬಳ್ಳಾಪುರ (ಡಿ.30): ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಬೆಂಗಳೂರುಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಬಸ್ ಗಳಿಗೆ ಹಸಿರು ನಿಶಾನೆ ತೋರಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು ಇದು ಎಲ್ಲಾ ವಿಮಾನ ನಿಲ್ದಾಣ ಗಳಿಗಿಂತ ವಿಭಿನ್ನವಾಗಿದೆ ಮತ್ತು ಅತಿ ದೊಡ್ದ ವಿಮಾನ ನಿಲ್ದಾಣವಾಗಿದೆ. 

ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಂಚಾರ ಮಾಡಲು ಬಿಎಂಟಿಸಿ ಮತ್ತು ವಾಯುವಜ್ರದ ಎಲೆಕ್ಟ್ರಿಕ್ ಬಸ್ ಗಳ ಸೇವೆಯನ್ನು ಕಲ್ಪಿಸಿದ್ದು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ ಗಳನ್ನು ನೀಡಲು ಸಚಿವರು ಒಪ್ಪಿಗೆ ನೀಡಿದರು. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಬಸ್ ಗಳ ಅನನುಕೂಲತೆ ಇರುವುದರಿಂದ ಅಲ್ಲಿಗೆ ಸಂಪರ್ಕ ಕಲ್ಪಿಸಲು ಸಾರಿಗೆ ಸಚಿವರಿಗೆ ಮನವಿ ನೀಡಲಾಯಿತು. 

ಸುಳ್ಳುಗಾರ, ವಚನಭ್ರಷ್ಠ ಸಿಎಂ ಸಿದ್ದರಾಮಯ್ಯ: ಮಾಜಿ ಶಾಸಕ ಎನ್.ಮಹೇಶ್

ಅದೇ ರೀತಿ ದೊಡ್ಡಬಳ್ಳಾಪುರ ತಾಲೂಕಿನ ಎಸ್ಎಸ್ ಘಾಟಿ ಸುಬ್ರಮಣ್ಯ ದೇವಸ್ಥಾನ ಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾದಿಗಳು ಬರುವುದರಿಂದ ಬಸ್ ವ್ಯವಸ್ಥೆಗಳು ಹಾಗೂ ಅನ್ನ ದಾಸೋಹ ಭವನವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಿಗೆ ಮನವಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆ ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ, ಮುಖ್ಯ ಕಾರ್ಯನಿರ್ವಾಹಕ ಸಾತ್ಯಕಿ ರಘುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್, ವಿಮಾನ ನಿಲ್ದಾಣದ ಸಿಬ್ಬಂದಿ ಹಾಗೂ ಸಾರಿಗೆ ಇಲಾಖೆ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow Us:
Download App:
  • android
  • ios