Asianet Suvarna News Asianet Suvarna News

karnataka govt scheme ಮನೆ ಬಾಗಿಲಿಗೆ ಕಂದಾಯ ದಾಖಲೆ: 12ಕ್ಕೆ ಜಿಲ್ಲೆಯಲ್ಲಿ ಸಿಎಂ ಚಾಲನೆ!

  • ಪಹಣಿ, ಅಟ್ಲಾಸ್‌, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮನೆ ಬಾಗಿಲಿಗೆ
  • ಗುಂಗಿರ್ಲಹಳ್ಳಿ ಗ್ರಾಮದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ
  • ಡೀಸಿ, ಎಸ್ಪಿ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲನೆ
Income certificate to Revenue Documents CM Bommai to Launch Door steps programme in Karnataka ckm
Author
Bengaluru, First Published Mar 8, 2022, 4:32 AM IST | Last Updated Mar 8, 2022, 4:32 AM IST

ಚಿಕ್ಕಬಳ್ಳಾಪುರ(ಮಾ.08): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಂದಾಯ ದಾಖಲೆ ಮನೆ ಬಾಗಿಲಿಗೆ ತಲುಪಿಸುವ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಹೋಬಳಿಯ ಪೋಶೆಟ್ಟಹಳ್ಳಿ ಗ್ರಾಪಂ ವ್ಯಾಪ್ತಿಯ ಗುಂಗಿರ್ಲಹಳ್ಳಿ ಗ್ರಾಮದಿಂದ ಮಾಚ್‌ರ್‍ 12 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ಸಿಎಂ ಕಾರ್ಯಕ್ರಮ ಜಿಲ್ಲೆಯಲ್ಲಿ ನಿಗದಿಯಾಗುತ್ತಿದ್ದಂತೆ ಸೋಮವಾರ ಗುಂಗಿರ್ಲಹಳ್ಳಿ ಗ್ರಾಮಕ್ಕೆ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಆರ್‌.ಲತಾ, ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌ ಭೇಟಿ ನೀಡಿ ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ ಚಾಲನೆ ನೀಡುವ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಸ್ಥಳ ಪರಿಶೀಲನೆ ನಡೆಸಿದರು.

Women's Day 'ಮಹಿಳಾ ದಿನ'ದ ವಿಶೇಷ: `ಅಸ್ಮಿತೆ’ ವ್ಯಾಪಾರ ಮೇಳಕ್ಕೆ ಸಿಎಂ ಚಾಲನೆ

ಚಿಕ್ಕಬಳ್ಳಾಪುರ ತಾಲೂಕಿನ ಗುಂಗಿರ್ಲಹಳ್ಳಿ(ಮಜರೆ) ಗ್ರಾಮದಲ್ಲಿ 171 ಕುಟುಂಬಗಳಿದ್ದು, 977 ಜನರು ವಾಸವಿದ್ದಾರೆ. ಈ ಪೈಕಿ 157 ಖಾತೆದಾರರಿದ್ದಾರೆ. 977 ಜನಸಂಖ್ಯೆ ಯುಳ್ಳ ಈ ಕುಗ್ರಾಮಕ್ಕೆ ಮುಖ್ಯಮಂತ್ರಿಗಳು ಆಗಮಿಸಿ ಪಹಣಿ, ಅಟ್ಲಾಸ್‌, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಹಾಗೂ ಇತರೆ ದಾಖಲೆಗಳನ್ನು ಖುದ್ದಾಗಿ ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸುವ ಮೂಲಕ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈ ಗ್ರಾಮದಲ್ಲಿ ವಾಸವಿರುವ 171 ಕುಟುಂಬಗಳಿಗೆ ಸಂಬಂಧಿಸಿದ ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ ದಾಖಲೆಗಳನ್ನು ಭೂಮಿ ಮತ್ತು ಮೋಜಣಿ ತಂತ್ರಾಂಶಗಳಿಂದ ಸಂಗ್ರಹಿಸಿ ಮುದ್ರಿಸಿಟ್ಟುಕೊಳ್ಳಲಾಗಿದೆ. ಸದರಿ ದಾಖಲೆಗಳನ್ನು ಸಿಎಂ ಅಂದು ಉಚಿತವಾಗಿ ವಿತರಿಸಿ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ನಡೆಯುವ ವೇದಿಕೆ ಕಾರ್ಯಕ್ರಮದ ಸ್ಥಳವನ್ನು ಗ್ರಾಮದಲ್ಲಿ ಗುರುತಿಸಿ ವೇದಿಕೆ ಸಿದ್ಧತೆಗಾಗಿ ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಈ ವೇಳೆ ಅವರು ಸ್ಥಳೀಯ ಜನಪ್ರತಿನಿಧಿಗಳನ್ನು ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡುವಂತೆ ಸೂಚಿಸಿದರು.

Kalasa Banduri Project: ಕಳಸಾ-ಬಂಡೂರಿ ಶೀಘ್ರ ಆರಂಭ: ಬೊಮ್ಮಾಯಿ ವಿಶ್ವಾಸ

ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಗುಂಗಿರ್ಲಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಿದ ದಿನದಿಂದ ಜಿಲ್ಲೆಯ ರೈತರ ಹಾಗೂ ಫಲಾನುಭವಿಗಳ ಮನೆ ಬಾಗಿಲಿಗೆ ಕಂದಾಯ ಮತ್ತು ಇತರ ಇಲಾಖೆಗಳ ಅಧಿಕಾರಿಗಳು ತೆರಳಿ ಪಹಣಿ, ಅಟ್ಲಾಸ್‌ ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಉಚಿತವಾಗಿ ತಲುಪಿಸಲಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಇದೇ ವೇಳೆ ತಿಳಿಸಿದರು.

ಈ ಸಂದರ್ಭದಲ್ಲಿ ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌, ಎಸ್ಪಿ ಡಾ.ಸಂತೋಷ್‌ ಕುಮಾರ್‌, ತಾಲೂಕಿನ ತಹಸೀಲ್ದಾರ್‌ ಗಣಪತಿ ಶಾಸ್ತ್ರಿ, ತಾಪಂ ಇಒ ಮಂಜುನಾಥ…, ಪಿಡಿಒ ಮಂಜುನಾಥ…, ಸ್ಥಳೀಯ ಪ್ರತಿನಿಧಿಗಳು, ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ಕಂದಾಯ ದಾಖಲೆ ಮನೆ ಬಾಗಿಲಿಗೆ
ರೈತರ ಹಕ್ಕಿನ ಅರ್ಹತೆಯನ್ನು ನಿರ್ಧರಿಸುವ ಮೂಲ ಕಂದಾಯ ದಾಖಲೆಗಳಾದ ಪಹಣಿ ಮತ್ತು ಅಟ್ಲಾಸ್ಗಳು ಭೂಮಿ ಮತ್ತು ಮೋಜಣಿ ತಂತ್ರಾಂಶಗಳಲ್ಲಿ ಲಭ್ಯವಿದ್ದು ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು ಇ-ಕ್ಷಣ ತಂತ್ರಾಂಶದಲ್ಲಿ ಲಭ್ಯವಿದ್ದು, ಸದರಿ ತಂತ್ರಾಂಶಗಳಿಂದ ಪಹಣಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಕುಟುಂಬವಾರು ಪಡೆದು ಸದರಿ ದಾಖಲೆಗಳನ್ನು ಲಕೋಟೆಯಲ್ಲಿರಿಸಿ ಕಂದಾಯ ಇಲಾಖೆ ವತಿಯಿಂದ ರಾಜ್ಯದ ಪ್ರತೀ ರೈತ ಕುಟುಂಬದ ಮನೆ ಬಾಗಿಲಿಗೆ ಹಾಗೂ ಫಲಾನುಭವಿಗಳಿಗೆ ಉಚಿತವಾಗಿ ತಲುಪಿಸುವುದು ೕ ಕಾರ್ಯಕ್ರಮದ ಉದ್ದೇಶವಾಗಿದೆ.

Latest Videos
Follow Us:
Download App:
  • android
  • ios