ಗೃಹ ಸಚಿವ ಡಾ. ಪರಮೇಶ್ವರ್ ಅವರು ಪೊಲೀಸ್ ಕಾನ್‌ಸ್ಟೆಬಲ್ ಅಭ್ಯರ್ಥಿಗಳ ವಯೋಮಿತಿಯನ್ನು 33 ವರ್ಷಕ್ಕೆ ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಠಾಣೆಗಳಲ್ಲಿನ ಸಿಬ್ಬಂದಿ ಕೊರತೆ ನೀಗಿಸಲು ಹಾಗೂ ಪ್ರಾರ್ಥನಾ ಮಂದಿರಗಳ ಸುರಕ್ಷತೆಗಾಗಿ ಸಿಸಿಟಿವಿ ಅಳವಡಿಸಲು ಸಲಹೆ ನೀಡಿದ್ದಾರೆ.

ಕುಂದಾಪುರ (ಜೂ.15): ಅನ್ಯ ರಾಜ್ಯಗಳಲ್ಲಿನ ವಿವರ ಪಡೆದು ಪೊಲೀಸ್ ಕಾನ್‌ಸ್ಟೆಬಲ್‌ ಅಭ್ಯರ್ಥಿಗಳ ವಯೋಮಿತಿ 33 ವರ್ಷಕ್ಕೆ ಏರಿಕೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ.ಪರಮೇಶ್ವರ್ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅವರು ಶನಿವಾರ ಕೋಟ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಬ್ಬಂದಿ ಕೊರತೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಇದನ್ನೂ ಓದಿ: ತ್ಯಾಗದ ಬಗ್ಗೆ ಮಾತಾಡಿದ್ದ ಡಿಕೆಶಿಗೆ ಪರಂ ಕೌಂಟರ್ | Parameshwar on DK | Political Updates | Suvarna

ಪ್ರತಿಯೊಂದು ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಎಲ್ಲ ಜಾತಿ, ಸಮುದಾಯದ ಸಣ್ಣ, ದೊಡ್ಡ ಪ್ರಾರ್ಥನಾ ಮಂದಿರಗಳಿಗೆ ರಾತ್ರಿ ಬೆಳಕಿನ ಸೌಲಭ್ಯ ಹಾಗೂ ಸಿಸಿಟಿವಿ ಅಳವಡಿಸಿ, ಅದರ ಮಾಹಿತಿ ಪ್ರತಿದಿನ ಠಾಣಾ ವ್ಯಾಪ್ತಿಯಲ್ಲಿ ಬರುವಂತೆಯೂ ಗೃಹಸಚಿವರು ಸಲಹೆ ನೀಡಿದರು.