Asianet Suvarna News Asianet Suvarna News

ಎಸ್‌ಸಿ ಎಸ್‌ಟಿ ಮೀಸಲಾತಿ ಹೆಚ್ಚಳ: ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ಪ್ರಸ್ತಾವನೆ ಸಲ್ಲಿಕೆ

ಎಸ್‌ಸಿ, ಎಸ್‌ಟಿ ಮೀಸಲು ಪ್ರಮಾಣ ಹೆಚ್ಚಳ ಮಾಡಿರುವ ನಿಯಮವನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಅಧಿಕೃತ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದೆ.

Increase in SC ST reservation Proposal submitted for inclusion in 9th Schedule of Constitution sat
Author
First Published Mar 23, 2023, 11:16 PM IST

ಬೆಂಗಳೂರು: (ಮಾ.23): ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮೀಸಲು ಪ್ರಮಾಣ ಹೆಚ್ಚಳ ಮಾಡಿರುವ ಕಾನೂನನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ಇಂದು ರಾಜ್ಯ ಸರ್ಕಾರ ಅಧಿಕೃತ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು, ಮೀಸಲಾತಿ ಹೆಚ್ಚಳವನ್ನು ಸಂವಿಧಾನದ ಪರಿಚ್ಛೇದ 9ರಡಿ ಸೇರಿಸಲು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಿತ್ ಕುಮಾರ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಈಗಾಗಲೇ ರಾಜ್ಯದ ಶಾಸನ ಸಭೆಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕಸಂಸ್ಥೆಗಳಲ್ಲಿನ ಹಾಗೂ ರಾಜ್ಯಾಧೀನ ಸೇವೆಗಳಲ್ಲಿನ ನೇಮಕ ಅಥವಾ ಹುದ್ದೆ ಗಳಲ್ಲಿ ಮೀಸಲಾತಿ) ಅಧಿನಿಯಮ 2022 ಅನುಮೋದನೆಗೊಂಡು ರಾಜ್ಯ ಪಾಲರಿಂದಲೂ ಅಂಕಿತ ಸಿಕ್ಕಿದೆ. ಕೇಂದ್ರದ ಸಂವಿಧಾನದಡಿ ಸೇರಿಸಿ ಅನುಕೂಲ ಕಲ್ಪಿಸಬೇಕು ಎಂದು ರಾಜ್ಯಪತ್ರದ ಪ್ರತಿ ಹಾಗೂ ರಾಜ್ಯಪಾಲರ ಅಂಕಿತವಿರುವ ಪ್ರತಿಯನ್ನು ಲಗತ್ತಿಸಿ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದಾರೆ. 

ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್, ಕ್ಯಾಬಿನೆಟ್‌ನಲ್ಲಿ ಮೀಸಲು ಪ್ರಮಾಣ ಘೋಷಣೆ?

ಪರಿಶಿಷ್ಟ ಪಂಗಡ ಮೀಸಲು ಶೇ.3ರಿಂದ ಶೇ.7ಕ್ಕೆ ಏರಿಕೆ: ರಾಜ್ಯದ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿನ ಹಾಗೂ ರಾಜ್ಯದ ಅಧೀನ ಸೇವೆಗಳಲ್ಲಿನ ನೇಮಕ ಅಥವಾ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇ.15 ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಸೂಕ್ತ ಕಾನೂನು ರೂಪಿಸಿ, ನಿಯಮವನ್ನು ಜಾರಿಗೊಳಿಸಿತ್ತು. ಆದರೆ, ಕೇಂದ್ರ ಸರ್ಕಾರದಿಂದ ಸಂವಿಧಾನದ ಪರಿಚ್ಛೇದ 9ರಡಿ ಈ ನಿಯಮವನ್ನು ಅಳಡಿಕೆ ಮಾಡದಿದ್ದರೆ ಕಾನೂನಾತ್ಮಕವಾಗಿ ಮೀಸಲಾತಿಯನ್ನು ಜಾರಿಗೆ ತರಲು ಹಾಗೂ ಅದನ್ನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು. ಜೊತೆಗೆ, ಸಂವಿಧಾನದ ಪರಿಚ್ಛೇದ 9ರಡಿ ಸೇರಿಸಲಿ ಕೇಂದ್ರಕ್ಕೆ ಯಾವುದೇ ಪ್ರಸ್ತಾವನೆಯೂ ಸಲ್ಲಿಕೆ ಆಗಿಲ್ಲ ಎಂಬುದನ್ನು ಕಾಂಗ್ರೆಸ್‌ ನಾಯಕರು ತಿಳಿಸಿದ್ದರು. ಈ ಬೆನ್ನಲ್ಲೇ ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ.

ಸಂವಿಧಾನಿಕ ರಕ್ಷಣೆಗೆ 9ನೇ ಶೆಡ್ಯೂಲ್‌ ಸೇರ್ಪಡೆ: ಇನ್ನು ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಅತಿ ಹೆಚ್ಚಿನ ಜಾತಿಗಳು ಮತ್ತು ಉಪಜಾತಿಗಳು ಬರುತ್ತಿದ್ದು, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ತೀವ್ರ ಕಡಿಮೆಯಿದೆ. ಹೀಗಾಗಿ, ಒಳಮೀಸಲಾತಿ ನೀಡುವಂತೆ ಹಾಗೂ ಮೀಸಲಾತಿ ಹೆಚ್ಚಳ ಮಾಡುವಂತೆ ನಿರಂತರ ಪ್ರತಿಭಟನೆಗಳನ್ನು ಮಾಡಲಾಗುತ್ತಿತ್ತು. ಆಯಾ ಸಮುದಾಯಗಳ ಮೀಸಲಾತಿ ಹೋರಾಟಕ್ಕೆ ಮಣಿದಿದ್ದ ರಾಜ್ಯ ಸರ್ಕಾರ ಇತ್ತೀಚೆಗೆ ಎಸ್‌ಸಿ, ಎಸ್‌ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿತ್ತು. ಆದರೆ, ಸರ್ಕಾರದ ಈ ತೀರ್ಮಾನಕ್ಕೆ ಸಾಂವಿಧಾನಿಕ ರಕ್ಷಣೆ ಸಿಗದೇ ಹೋದರೆ ಕೈಗೊಂಡ ತೀರ್ಮಾನಕ್ಕೆ ಬೆಲೆಬರುವುದಿಲ್ಲ ಎಂಬುದನ್ನು ಅರಿತ ರಾಜ್ಯ ಸರ್ಕಾರ ಕೇಂದ್ರಕ್ಕೆ ಇಂದು ಪ್ರಸ್ತಾವನೆಯಲ್ಲಿ ಸಲ್ಲಕೆ ಮಾಡಿದೆ. 

ಎಸ್ಸಿ ಎಸ್ಟಿ ಮೀಸಲು ಹೆಚ್ಚಳ ಕಾಯ್ದೆ ಬೋಗಸ್‌: ಸುರ್ಜೇವಾಲಾ ಆರೋಪ

ವಾಲ್ಮೀಕಿ ಸಮುದಾಯದಿಂದ ನಿರಂತರ ಹೋರಾಟಕ್ಕೆ ಸಿಕ್ಕ ಫಲ: ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ನಿರಂತರವಾಗಿ ಆಮರಣಾಂತ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು. ಮೀಸಲು ಪರಿಷ್ಕರಣೆ ಸಂಬಂಧ ನಾಗಮೋಹನ್ ದಾಸ್ ಸಮಿತಿ ವರದಿಯನ್ನು ಅನುಷ್ಠಾನ ಮಾಡುವಂತೆಯೂ ಆಗ್ರಹಿಸಿದ್ದರು. ತೀವ್ರ ಹೋರಾಟಕ್ಕೆ ಮಣಿದ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ವರದಿಯನ್ನು ಅವಲೋಕಿಸಿ, ರಾಜ್ಯಕ್ಕೆ ಶಿಫಾರಸು ಮಾಡಲು ನ್ಯಾ .ಸುಭಾಷ್ ಅಡಿ ಸಮಿತಿಯನ್ನು ಕೂಡ ರಚಿಸಿತ್ತು . ಈ ಸಮಿತಿ ಎಸ್ಸಿ ಎಸ್ಟಿ ಮೀಸಲು ಪರಿಷ್ಕರಣೆ ಸಂಬಂಧ ತನ್ನ ಅಭಿಪ್ರಾಯ ದಾಖಲಿಸಿ, ಕೇಂದ್ರ ಸರ್ಕಾರಿ ಉದ್ಯೋಗ ಹಾಗೂ ರಾಜ್ಯ ಸರ್ಕಾರಿ ಉದ್ಯೋಗದಲ್ಲಿ ಬುಡಕಟ್ಟು ಪಂಗಡಗಳ ಮೀಸಲಾತಿಯನ್ನು ಹೋಲಿಸಿದಲ್ಲಿ ಬುಡಕಟ್ಟು ಮೀಸಲಾತಿ ಕೊರತೆಯನ್ನು ಗುರುತಿಸಿತ್ತು. ಈ ಅಂಶವನ್ನು ಪರಿಗಣಿಸಿ ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿತ್ತು.

Follow Us:
Download App:
  • android
  • ios