ದೇಶದ ಪ್ರತಿ ಮೂವರಲ್ಲಿ ಒಬ್ಬರು ಮಧುಮೇಹ ರೋಗಕ್ಕೆ ತುತ್ತಾಗುತ್ತಿದ್ದು, ವಿಶೇಷವಾಗಿ ಯುವ ಪೀಳಿಗೆಯಲ್ಲೂ ಮಧುಮೇಹ ಹೆಚ್ಚಾಗುತ್ತಿದೆ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜೂ.6) ದೇಶದ ಪ್ರತಿ ಮೂವರಲ್ಲಿ ಒಬ್ಬರು ಮಧುಮೇಹ ರೋಗಕ್ಕೆ ತುತ್ತಾಗುತ್ತಿದ್ದು, ವಿಶೇಷವಾಗಿ ಯುವ ಪೀಳಿಗೆಯಲ್ಲೂ ಮಧುಮೇಹ ಹೆಚ್ಚಾಗುತ್ತಿದೆ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌(Governor Thawar Chand Gehlot) ಕಳವಳ ವ್ಯಕ್ತಪಡಿಸಿದ್ದಾರೆ.

ಶ್ರದ್ಧಾ ಐ ಕೇರ್‌ ಟ್ರಸ್ಟ್‌ ಮತ್ತು ಡಯಾಬಿಟಿಸ್‌ ಕ್ಲಬ್‌ ನಗರದ ತಿಮ್ಮಯ್ಯ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ‘ಬೆಂಗಳೂರು ಮಧುಮೇಹ ಮತ್ತು ಕಣ್ಣಿನ ಆಸ್ಪತ್ರೆ’ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಮಧುಮೇಹದಿಂದ ಬಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಧುಮೇಹ ಕಣ್ಣು ಮತ್ತು ಕಿಡ್ನಿಯ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ, ಇದನ್ನು ನಿಯಂತ್ರಿಸುವುದು ಇಂದಿನ ಪರಿಸ್ಥಿತಿಗೆ ಅತ್ಯಗತ್ಯ. ಯುವಜನತೆ ಮಧುಮೇಹ ತಡೆಯಲು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.

ಮ್ಯಾಂಗೋ ಸೀಸನ್ ಶುರು, ಡಯಾಬಿಟಿಸ್ ಇರೋರು ಮಾವಿನ ಹಣ್ಣು ತಿನ್ಬೋದಾ?

ಶ್ರದ್ಧಾ ಐ ಕೇರ್‌ ಟ್ರಸ್ಟ್‌ನ ಮ್ಯಾನೇಜಿಂಗ್‌ ಟ್ರಸ್ಟಿಡಾ ಗಣೇಶ್‌ ಮಾತನಾಡಿ, 2005ರಿಂದ 3500 ಆರೋಗ್ಯ ಶಿಬಿರಗಳ ಮೂಲಕ ಸುಮಾರು 4.5 ಲಕ್ಷಕ್ಕೂ ಹೆಚ್ಚು ರೋಗಿಗಳಿಗೆ ವೈದ್ಯಕೀಯ ಸೇವೆ ಒದಗಿಸಲಾಗಿದೆ. ಸುಮಾರು 80 ಸಾವಿರಕ್ಕೂ ಹೆಚ್ಚು ಜನರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದರು.

ಟ್ರಸ್ಟ್‌ನ ಟ್ರಸ್ಟಿಯಾದ ಮಾಜಿ ಕ್ರಿಕೆಟಿಗ ಅನಿಲ್‌ ಕುಂಬ್ಳೆ, ಯಾರೊಬ್ಬರೂ ಮಧುಮೇಹದ ದುಷ್ಪರಿಣಾಮಗಳಿಗೆ ತುತ್ತಾಗಬಾರದು. ಮಧುಮೇಹ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಅಗತ್ಯವಿರುವ ಕಡೆಯಲ್ಲಿ ಚಿಕಿತ್ಸೆ ಕಲ್ಪಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಈ ಸಮಸ್ಯೆ ಇದೆ ಅಂದ್ರೆ ಬಾಳೆಹಣ್ಣನ್ನು ತಿನ್ನಲೇ ಬಾರದು!

ಪೊಲೀಸ್‌ ಆಯುಕ್ತ ಬಿ.ದಯಾನಂದ, ಶ್ರದ್ಧಾ ಐ ಕೇರ್‌ ಟ್ರಸ್ಟ್‌ನ ಸಂಸ್ಥಾಪಕ ಟ್ರಸ್ಟಿಡಾ ಸುಮನ್‌, ಟ್ರಸ್ಟಿಗಳಾದ ದಿಲೀಪ್‌ ಸುರಾನಾ, ಕೆ.ಜಿ.ರಾಘವನ್‌ ಮತ್ತು ಡಯಾಬಿಟೀಸ್‌ ಕ್ಲಬ್‌ ಅಧ್ಯಕ್ಷ ಡಾ

ಅನಿಲ್‌ ಕುಮಾರ್‌, ಕಾರ್ಯದರ್ಶಿ ಡಾ ಕಾರ್ತಿಕ್‌ ಮುನಿಚೂಡಪ್ಪ ಉಪಸ್ಥಿತರಿದ್ದರು.