ಬೆಂಗಳೂರಿನ ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆ
ಬೆಂಗಳೂರಿನಲ್ಲಿ ಧಾರ್ಮಿಕ ವಿವಾದವನ್ನೇ ಸೃಷ್ಟಿಸಿದ್ದ ಚಾಮರಾಜಪೇಟೆ (ಈದ್ಗಾ) ಮೈದಾನದಲ್ಲಿ ಎರಡನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಯೋಜನೆ ಮಾಡಲಾಗುತ್ತಿದೆ.
ಬೆಂಗಳೂರು (ಆ.14): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧಾರ್ಮಿಕ ವಿವಾದವನ್ನೇ ಸೃಷ್ಟಿಸಿದ್ದ ಚಾಮರಾಜಪೇಟೆ (ಈದ್ಗಾ) ಮೈದಾನದಲ್ಲಿ ಎರಡನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಯೋಜನೆ ಮಾಡಲಾಗುತ್ತಿದೆ.
ರಾಜಧಾನಿಯ ವಿವಾದದ ಕೇಂದ್ರ ಬಿಂದುವಾದ ಚಾಮರಾಜಪೇಟೆ ಈದ್ಗಾ ಮೈದಾನಲ್ಲಿ ತ್ರಿವರ್ಣ ಧ್ವಜ ರಾರಾಜಿಸಲಿದೆ. ದೇಶದ 77ನೇ ಸ್ವತಂತ್ರ ದಿನಾಚರಣೆಯ ಧ್ವಜರೋಹಣಕ್ಕೆ ಜಿಲ್ಲಾಡಳಿತದಿಂದ ಸಿದ್ದತೆ ಮಾಡಿಕೊಳ್ಳಲಾಗಿದೆ. ಚಾಮರಾಜಪೇಟೆ ನಾಗರೀಕರ ಒಕ್ಕೂಟ ಸೇರಿ ವಿವಿಧ ಹಿಂದೂ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಒಗ್ಗಟ್ಟಿನಲ್ಲಿ ಹೋರಾಟ ಮಾಡಿದ ಫಲವಾಗಿ ಕಳೆದ ವರ್ಷದಿಂದ ಜಿಲ್ಲಾಡಳಿತದಿಂದ ಚಾಮರಾಜಪೇಟೆ ವಿವಾದಿತ ಮೈದಾನದಲ್ಲಿ ಬಿಗಿ ಭದ್ತೆಯ ನಡುವೆ ಸ್ವಾತಂತ್ರ್ಯೋತ್ಸವ ದಿನಾಚರಣೆ ಮಾಡಲಾಗಿತ್ತು. ಈ ಬಾರಿಯೂ ಜಿಲ್ಲಾಡಳಿತವು ಸ್ವಾತಂತ್ರ್ಯ ದಿನಾಚರಣೆ ಆಯೋಜನೆ ಮಾಡಲಾಗುತ್ತಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಬೆಂಗಳೂರು ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ: ದೇಶಭಕ್ತಿ ಸಾರಲಿದೆ ಬಿಎಂಆರ್‌ಸಿಎಲ್
ಕಂದಾಯ ಇಲಾಖೆಯಿಂದ ಅಗತ್ಯ ಸಿದ್ಧತೆ: ಇನ್ನು ಎರಡನೇ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡುತ್ತಿರುವ ಹೊನ್ನೆಲೆಯಲ್ಲಿ ಸರ್ಕಾರದಿಂದಲೇ ಧ್ವಜರೋಹಣ ಹಾಗೂ ಅದ್ಧೂರಿ ಕಾರ್ಯಕ್ರಮ ಮಾಡಲಾಗುತ್ತಿದೆ. ಆಗಸ್ಟ್ 15ರಂದು ಬೆಳಗ್ಗೆ ಧ್ವಜಾರೋಹಣ, ರಾಷ್ಟ್ರ ಗೀತೆ, ನಾಡಗೀತೆ ಜೊತೆಗೆ ಅದ್ಧೂರಿ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿಯೂ ಕಂದಾಯ ಇಲಾಖೆಯಿಂದ ಧ್ವಜಾರೋಹಣ ಮಾಡಲಾಗುತ್ತಿದೆ.
ಬೆಂಗಳೂರು ಉತ್ತರ ಎಸಿ ಧ್ವಜಾರೋಹಣ: ಚಾಮರಾಜಪೇಟೆಯ ಮೈದಾನದಲ್ಲಿ ಬೆಳಗ್ಗೆ 9 ಗಂಟೆಗೆ ಬೆಂಗಳೂರು ಉತ್ತರ ವಿಭಾಗದ ಎಸಿ (ಉಪ ವಿಭಾಗಾಧಿಕಾರಿ) ನೇತೃತ್ವದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ 500 ಶಾಲಾ ಮಕ್ಕಳು, ಸೇರಿದಂತೆ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಕಳೆದ ಬಾರಿ ಕಂದಾಯ ಸಚಿವ ಆರ್. ಅಶೋಕ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಬಾರಿ ಕಂದಾಯ ಸಚಿವ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿದ್ದು, ಈಗಾಗಲೇ ಧ್ವಜರೋಹಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇನ್ನು ಕಾರ್ಯಕ್ರಮ ಯಾಶಸ್ವಿಯಾಗಲು ಪೊಲೀಸ್ ಇಲಾಖೆಯಿಂದ ಭದ್ರತೆ ನೀಡಲಾಗಿದೆ.
ಬೆಂಗಳೂರು ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ: ಬೆಂಗಳೂರು (ಆ.14): ದೇಶದ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲು ಬೆಂಗಳೂರು ಮೆಟ್ರೋ ರೇಲ್ ಕಾರ್ಪೋರೇಷನ್ ಲಿ. (ಬಿಎಂಆರ್‌ಸಿಎಲ್) ವತಿಯಿಂದ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಒಂದು ವಾರಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಹೌದು, ದೇಶದ ಸ್ವಾತಂತ್ರ್ಯೋತ್ಸವ ದಿನಾಚರಣೆ ಮತ್ತು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿವರ್ಷ ವಿಭಿನ್ನವಾದ ಕಾರ್ಯಕ್ರಮಗಳನ್ನು ಬಿಎಂಆರ್‌ಸಿಎಲ್ ಆಯೋಜನೆ ಮಾಡುತ್ತಿದೆ.
ಈಗ ನಾಳೆ ನಡೆಯಲಿರುವ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಒಂದು ವಾರಗಳ ಕಾಲ ವಿವಿಧ ಮೆಟ್ರೋ ನಿಲ್ದಾಣಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಅದರಲ್ಲಿಯೂ ಪ್ರತಿನಿತ್ಯ ಒಂದೊಂದು ಮೆಟ್ರೋ ನಿಲ್ದಾಣಗಳಲ್ಲಿ ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ವಿವಿಧ ಮೆಟ್ರೋ ನಿಲ್ದಾಣಗಳಲ್ಲಿ ನಾಟಕ ಪ್ರದರ್ಶನ, ದೇಶಭಕ್ತಿ ಗೀತೆಗಳ ಗಾಯನ ಹಾಗೂ ಲಾವಣಿ ಪದಗಳನ್ನು ಹಾಡಲಾಗುತ್ತದೆ.
ಪೊಲೀಸರ ಕೈಗೆ ಸಿಗದ ಬುದ್ಧಿವಂತ ನಟ ಉಪೇಂದ್ರ: ನೋಟಿಸ್ ನೀಡಿದರೂ ವಿಚಾರಣೆಗೆ ಗೈರು
- ದಿನಾಂಕ ಮತ್ತು ಕಾರ್ಯಕ್ರಮ ನಡೆಯುವ ನಿಲ್ದಾಣಗಳು
- ಆ.15- ಯಶವಂತಪುರ ಮೆಟ್ರೋ ನಿಲ್ದಾಣ
- ಆ.16- ಕೆ.ಆರ್.ಪುರಂ ಮೆಟ್ರೋ ನಿಲ್ದಾಣ
- ಆ.17- ಬನಶಂಕರಿ ಮೆಟ್ರೋ ನಿಲ್ದಾಣ
- ಆ.18- ವಿಜಯನಗರ ಮೆಟ್ರೋ ನಿಲ್ದಾಣ
- ಆ.19 - ಮಹಾತ್ಮಗಾಂಧಿ (ಎಂ.ಜಿ.ರೋಡ್) ರಸ್ತೆ ಮೆಟ್ರೋ ನಿಲ್ದಾಣ
- ಆ.20- ಮೈಸಲಂದ್ರ ಮೆಟ್ರೋ ನಿಲ್ದಾಣ
- ಆ.21- ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್)