ನಮ್ಮ ದೇಶ ಹಿಂದೂ ರಾಷ್ಟ್ರವಾದರೆ, ಪಾಕಿಸ್ತಾನ-ಅಪಘಾನಿಸ್ತಾನದಂತೆ ದಿವಾಳಿಯಾಗಲಿದೆ: ಯತೀಂದ್ರ ಸಿದ್ದರಾಮಯ್ಯ
ನಮ್ಮ ದೇಶವು ಹಿಂದೂ ರಾಷ್ಟ್ರವಾದರೆ ಧರ್ಮಾದ ಹೆಸರಿನಲ್ಲಿ ಸರ್ವಾಧಿಕಾರ ನಡೆಸಿ ದಿವಾಳಿಯಾಗಿರುವ ಪಾಕಿಸ್ತಾನ, ಅಪಘಾನಿಸ್ತಾನದಂತೆ ಭಾರತವೂ ದಿವಾಳಿಯಾಗಲಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ದಾವಣಗೆರೆ (ಜ.03): ನಮ್ಮ ದೇಶವನ್ನು ಹಿಂದು ರಾಷ್ಟ್ರಮಾಡಲಿಕ್ಕೆ ಹೊರಟಿದ್ದಾರೆ. ಆ ರೀತಿ ಹಿಂದೂ ರಾಷ್ಟ್ರ ಆದ್ರೆ ನಮ್ಮ ದೇಶವು ಪಾಕಿಸ್ಥಾನ ಆಪಘಾನಿಸ್ತಾನವಾಗುತ್ತದೆ. ಈಗಾಗಲೇ ಪಾಕಿಸ್ತಾನ ಮತ್ತು ಅಪಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಕಾರ ಮಾಡಿ ದಿವಾಳಿಯಾಗಿವೆ. ಅದೇ ರೀತಿ ದೇಶ ಜಾತ್ಯಾತೀತ ತತ್ವ ಬಿಟ್ಟು ಧರ್ಮದ ಹಿಂದೆ ಹೋದರೆ ಅಭಿವೃದ್ಧಿ ಕಾಣಲ್ಲ, ದಿವಾಳಿಯಾಗುತ್ತದೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆ ತಾಲೂಕಿನ ರುದ್ರನಕಟ್ಟೆ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಲವರು ನಮ್ಮ ದೇಶವನ್ನು ಹಿಂದು ರಾಷ್ಟ್ರಮಾಡಲಿಕ್ಕೆ ಹೊರಟಿದ್ದಾರೆ. ಆ ರೀತಿ ಹಿಂದೂ ರಾಷ್ಟ್ರ ಆದ್ರೆ ನಮ್ಮ ದೇಶವು ಪಾಕಿಸ್ತಾನ ಮತ್ತು ಅಪಘಾನಿಸ್ತಾನವಾಗುತ್ತದೆ. ಪಾಕಿಸ್ತಾನ ಮತ್ತು ಅಪಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಕಾರ ಮಾಡಿ ದಿವಾಳಿಯಾಗಿವೆ. ದೇಶ ಜಾತ್ಯಾತೀತ ತತ್ವ ಬಿಟ್ಟು ಧರ್ಮದ ಹಿಂದೆ ಹೋದರೆ ಅಭಿವೃದ್ಧಿ ಕಾಣಲ್ಲ. ಇವತ್ತು ಜಾತ್ಯಾತೀತ ತತ್ವಕ್ಕೆ ಅಪಾಯ ಬಂದಿದೆ. ಬಿಜೆಪಿ ಹಾಗೂ ಮಾತೃ ಸಂಸ್ಥೆ ಆರ್‌ಎಸ್ಎಸ್ ನಿಂದ ಜಾತ್ಯಾತೀತ ತತ್ವಕ್ಕೆ ಆಪಾಯ ಬಂದಿದೆ. ಧರ್ಮದ ಮೇಲೆ ರಾಜಕೀಯ ಮಾಡುವ ಪಕ್ಷಗಳ ಬಗ್ಗೆ ನಾವು ಹುಷಾರಾಗಿರಬೇಕು ಎಂದು ಹೇಳಿದರು.
ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ ಪೂಜಾರಿ ಸಮಾಜಘಾತುಕ ಶಕ್ತಿ: ಸಚಿವ ಈಶ್ವರ ಖಂಡ್ರೆ:
ಧರ್ಮದಿಂದ ಹಿಂದುಳಿದವರು ಮೇಲೇಳೋಕೆ ಸಾಧ್ಯವಾಗುತ್ತಿಲ್ಲ. ಇತಿಹಾಸವನ್ನ ನೋಡಿ ನಾವು ಪಾಠ ಕಲಿಯಬೇಕು. ಇತಿಹಾಸ ನೋಡಿ ನಾವು ದೇಶವನ್ನ ಕಟ್ಟಬೇಕು, ದೇಶಕ್ಕೆ ಉಜ್ವಲ ಭವಿಷ್ಯವಿದೆ. ಹೈ ಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಯಾರು ಹಿಂದುಳಿದವರು, ಅಲ್ಪಸಂಖ್ಯಾತ ನ್ಯಾಯಮೂರ್ತಿಗಳು ಎಷ್ಟು ಜನರಿದ್ದಾರೆ. ಮೇಲ್ವರ್ಗದವರೇ ಸಮಾಜವನ್ನ ನಿಯಂತ್ರಣ ಮಾಡುತ್ತಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ನಮಗೂ ಕೂಡ ಸಮಾಜದಲ್ಲಿ ಉನ್ನತ ಸ್ಥಾನಗಳು ಸಿಗಬೇಕು ಎಂದರು.
ಧರ್ಮಕ್ಕಾಗಿ ಇನ್ನೊಬ್ಬರ ಜೊತೆ ಹೋರಾಟ ಮಾಡೋಕೆ ಹೋದರೆ ನಮ್ಮ ಹಕ್ಕು ಕಳೆದುಕೊಳ್ಳಬೇಕಾಗುತ್ತದೆ. ಇದಕ್ಕಾಗಿ ನಾವು ಬದಲಾಗಬೇಕು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ನಾವು ಹೋರಾಟ ಮಾಡಬೇಕಿದೆ. ಈ ಮೂಲಕ ಯತೀಂದ್ರ ಅವರು ತಮ್ಮ ತಂದೆ ಸಿದ್ದರಾಮಯ್ಯ ಎರಡೂವರೆ ವರ್ಷ ಅಷ್ಟೆ ಮುಖ್ಯಮಂತ್ರಿ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರಬೇಕಂದರೆ ನಾವು ಒಗ್ಗಟ್ಟಾಗಬೇಕಿದೆ ಎಂದು ಪುನರುಚ್ಛರಿಸಿದರು.
ಕರ್ನಾಟಕದಲ್ಲಿ ಗೋಧ್ರಾ ರೀತಿ ದುರಂತಕ್ಕೆ ಹುನ್ನಾರ, ಮಾಹಿತಿ ಇದೆ: ಕಿಚ್ಚು ಹಚ್ಚಿದ ಬಿಕೆ ಹರಿಪ್ರಸಾದ್ ಹೇಳಿಕೆ
ಬೆಳಗ್ಗೆ ಬಿ.ಕೆ. ಹರಿಪ್ರಸಾದ್, ಮಧ್ಯಾಹ್ನ ಯತೀಂದ್ರ ಸಿದ್ದರಾಮಯ್ಯ ವಿವಾದ: ಅಯೋಧ್ಯೆ ಉದ್ಘಾಟನೆ ಕಾರ್ಯಕ್ರಮ ವಿಚಾರವಾಗಿ ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದು, ಇದೀಗ ಕರ್ನಾಟಕದಲ್ಲಿ ಗೋಧ್ರಾ ರೀತಿ ದುರಂತ ಸಂಭವಿಸಬಹುದು ಎನ್ನುವ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದರು. ರಾಮ ಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ರೆ ನಾವೆಲ್ಲರೂ ಹೋಗುತ್ತಿದ್ದೆವು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅದೇ ರೀತಿ ಧರ್ಮ ಗುರುಗಳು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಮೋದಿಯ ಧರ್ಮವೇ ಇನ್ನೂ ಯಾವುದು ಅಂತ ಗೊತ್ತಾಗಿಲ್ಲ. ಅಮಿತ್ ಶಾ ಧರ್ಮವೇ ಯಾವುದೂ ಅಂತ ಗೊತ್ತಾಗಿಲ್ಲ ಎಂದು ಹೇಳುವ ಮೂಲಕ ವಿವಾದವನ್ನು ಸೃಷ್ಟಿಸಿದ್ದಾರೆ. ಈಗ ಯತೀಂದ್ರ ಸಿದ್ದರಾಮಯ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.