'ಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ, ಇದು ಬಹುತ್ವದ ದೇಶ' : ಸಿಎಂ
ನಮ್ಮ ದೇಶ ಕೇವಲ ಹಿಂದೂಗಳ ರಾಷ್ಟ್ರ ಅಲ್ಲ, ಇದು ಬಹುತ್ವದ ದೇಶವಾಗಿದೆ. ಕೇವಲ ಹಿಂದೂ ರಾಷ್ಟ್ರವನ್ನು ಮಾಡಲು ಆಗುವುದಿಲ್ಲ. ಈ ದೇಶ ಹಿಂದೂ ರಾಷ್ಟ್ರ ಆಗಬೇಕೆಂಬುದು ಬಿಜೆಪಿಯವರ ಸಿದ್ಧಾಂತವಷ್ಟೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗದಗ (ಡಿ.18): ನಮ್ಮ ದೇಶ ಕೇವಲ ಹಿಂದೂಗಳ ರಾಷ್ಟ್ರ ಅಲ್ಲ, ಇದು ಬಹುತ್ವದ ದೇಶವಾಗಿದೆ. ಕೇವಲ ಹಿಂದೂ ರಾಷ್ಟ್ರವನ್ನು ಮಾಡಲು ಆಗುವುದಿಲ್ಲ. ಈ ದೇಶ ಹಿಂದೂ ರಾಷ್ಟ್ರ ಆಗಬೇಕೆಂಬುದು ಬಿಜೆಪಿಯವರ ಸಿದ್ಧಾಂತವಷ್ಟೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶ್ರೀರಾಮಮಂದಿರ ಉಳಿಯಬೇಕಾದರೆ ಹಿಂದೂ ರಾಷ್ಟ್ರ ಆಗಬೇಕು’ ಎಂಬ ಉಡುಪಿ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಇಂದು ಗದಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿಗಳ ಹೇಳಿಕೆಗೆ ಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಮ್ಮ ದೇಶದಲ್ಲಿ ಕ್ರಿಶ್ಚಿಯನ್, ಮುಸ್ಲಿಂ, ಬೌದ್ಧ, ಜೈನರು ಸಹ ಇದ್ದಾರೆ. 1950ರಲ್ಲಿ ಜನಸಂಘ ಸ್ಥಾಪಿಸಿ ಹಿಂದೂ ರಾಷ್ಟ್ರ ಮಾಡುತ್ತೇವೆ ಅಂದರು. 1925ರಲ್ಲಿ ಹೆಡ್ಗೇವಾರ್ ಆರ್ಎಸ್ಎಸ್ ಸ್ಥಾಪನೆ ಮಾಡಿದ್ದರು. ಈ ಬಗ್ಗೆ ಬಿಜೆಪಿಯವರನ್ನು ಕೇಳಿ, ಅವರಿಗೆ ಇವೆಲ್ಲವೂ ಗೊತ್ತೇ ಇಲ್ಲ. ಬಿಜೆಪಿಯವರು ಸುಮ್ಮನೆ ಬುರುಡೆ ಬಿಡುತ್ತಾರೆ ಎಂದು ಎಂದರು.
ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೆಚ್. ಡಿ. ದೇವೇಗೌಡರಿಗೆ ಆಹ್ವಾನ
ಪೊಲೀಸರಿಂದ ತನಿಖೆ: ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸುವ ವಿಚಾರವಾಗಿ ಕೇಳಿದಾಗ, ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಸಾಕ್ಷ್ಯ ಸಂಗ್ರಹಿಸಿ ಶಿಕ್ಷೆ ಕೊಡಿಸಲು ಪೊಲೀಸರೇ ತಯಾರಾಗಿದ್ದಾರೆ ಎಂದಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕ್ರಮ: ಗದಗ ಸಾರಿಗೆ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು, ತಪ್ಪಿತಸ್ಥರು ಯಾರೇ ಇದ್ದರೂ ನಾವು ಕ್ರಮ ಕೈಗೊಳ್ಳುತ್ತೇವೆ. ಭ್ರಷ್ಟಾಚಾರ ಪ್ರಕರಣವಿದ್ದರೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ಈ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆಗೆ ಒಳಪಡಿಸುತ್ತೇವೆ. ಹೊಸ ಬಸ್ ಖರೀದಿಸಿ ಅಗತ್ಯವಿರುವ ಕಡೆ ಬಿಡಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಅಯೋಧ್ಯ ರಾಮಮಂದಿರ ಉದ್ಘಾಟನೆ: ಮಂತ್ರಾಲಯ ಶ್ರೀಗಳಿಗೆ ಆಹ್ವಾನ
ರಾಜ್ಯದ ಅತಿಥಿ ಉಪನ್ಯಾಸಕರ ಬೇಡಿಕೆಗಳ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಒಂದು ಸೂತ್ರ ಕಂಡು ಹಿಡಿಯುತ್ತಿದ್ದಾರೆ. ಸಭೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ತ್ವರಿತವಾಗಿ ವರದಿ ಸಲ್ಲಿಸಲು ಸೂಚಿಸಿದ್ದೇನೆ ಎಂದರು.