ಭಾರತ - ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಿಸಿದ್ದರೂ ಉಗ್ರರನ್ನು ಮಟ್ಟ ಹಾಕುವ ಕೆಲಸ ಮುಂದುವರಿಸಬೇಕು ಪಾಕಿಸ್ತಾನದ ವಿರುದ್ದದ ಯಾವುದೇ ಕ್ರಮಕ್ಕೆ ನಮ್ಮ ಬೆಂಬಲವಿದೆ ಎಂದು ಚಾಮರಾಜನಗರ ಮಠಾಧೀಶರು ಹೇಳಿದರು.
ವರದಿ - ಪುಟ್ಟರಾಜು. ಆರ್. ಸಿ ಏಷಿಯಾನೆಟ್ ಸುವರ್ಣ ನ್ಯೂಸ್ , ಚಾಮರಾಜನಗರ.
ಚಾಮರಾಜನಗರ (ಮೇ.12) ಭಾರತ - ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಿಸಿದ್ದರೂ ಉಗ್ರರನ್ನು ಮಟ್ಟ ಹಾಕುವ ಕೆಲಸ ಮುಂದುವರಿಸಬೇಕು ಪಾಕಿಸ್ತಾನದ ವಿರುದ್ದದ ಯಾವುದೇ ಕ್ರಮಕ್ಕೆ ನಮ್ಮ ಬೆಂಬಲವಿದೆ ಎಂದು ಚಾಮರಾಜನಗರ ಮಠಾಧೀಶರು ಹೇಳಿದರು.
ಚಾಮರಾಜನಗರದ ಸಿದ್ದ ಮಲ್ಲೇಶ್ವರ ಮಠದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಮರಿಯಾಲ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಗಳು ಹಾಗು ಚಾಮರಾಜನಗರದ ಚನ್ನಬಸವಸ್ವಾಮೀಜಿ. ಸಿದ್ದ ಮಲ್ಲೇಶ್ವರ ಮಠ, ಹಂಡ್ರಕಳ್ಳಿ ಮಠ, ಕೊತ್ತಲವಾಡಿ ಮಠ, ಉಗೇನದಹುಂಡಿ ಮಠಾಧೀಶರು, ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಾಗಿರಬೇಕು ಎಂದರು.
ಭಾರತ ಶಾಂತಿಪ್ರಿಯ ದೇಶವಾಗಿದ್ದು ಪ್ರಧಾನಿ ನರೇಂದ್ರಮೋದಿ ದಕ್ಷ ಹಾಗು ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ ಮೋದಿಯವರಿಗೆ ನಮ್ಮ ಆಶೀರ್ವಾದ, ಬೆಂಬಲ ಸದಾ ಇರುತ್ತದೆ. ಪಾಕಿಸ್ತಾನ ರೋಗಗ್ರಸ್ತ ದೇಶವಾಗಿದ್ದು ಧರ್ಮದ ನೆಪದಲ್ಲಿ ಮುಗ್ಧ ಭಾರತೀಯರನ್ನು ಹತ್ಯೆ ಮಾಡಿದೆ, ಉಗ್ರ ರನ್ನು ಸದೆಬಡಿಯುವ ಕ್ರಮ ಆಗಬೇಕು ಎಂದು ಅವರು ಹೇಳಿದರು. ಉಗ್ರರನ್ನು ಮಟ್ಡ ಹಾಕುವ ವಿಚಾರದಲ್ಲಿ ಮೋದಿಯವರು ಯಾವುದೆ ಕ್ರಮ ಕೈಗೊಂಡರು ಮೋದಿಯವರಿಗೆ ನಮ್ಮ ಬೆಂಬಲ ಎಂದರು.
ಇದನ್ನೂ ಓದಿ: ಸಾಗರದಲ್ಲಿ ಸುನಾಮಿ ಎಬ್ಬಿಸಬಲ್ಲ ಶಸ್ತ್ರಾಸ್ತ್ರಗಳಿವು! ವಿಶ್ವದ ಈ 2 ದೇಶಗಳು ಮಾತ್ರ ಹೊಂದಿವೆ!...
ಹಿನ್ನೆಲೆ:
ಏಪ್ರಿಲ್ 22, 2025ರಂದು ಭಾರತದ ಮುಕುಟಮಣಿ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಬ್ಬರು ಕನ್ನಡಿಗರು ಸೇರಿ 26 ಹಿಂದೂಗಳನ್ನು ಬಲಿ ಪಡೆದ ಪ್ರತೀಕಾರವಾಗಿ ಭಾರತ ಶತ್ರು ದೇಶಕ್ಕೆ ಆಪರೇಷನ್ ಸಿಂದೂರದ ಮೂಲಕ ಮೇ 7, 2025ರಂದು ತಕ್ಕ ಉತ್ತರ ನೀಡಿದೆ. ನಾಗರಿಕರಿಗೆ ಯಾವುದೇ ಅಪಾಯವಾಗದಂತೆ ಪಾಕ್ ಉಗ್ರರ ಅಡಗು ತಾಣಗಳ ಮೇಲೆ ಭಾರತ ದಾಳಿ ನಡೆಸಿದ್ದು, 9 ಉಗ್ರ ತಾಣಗಳನ್ನು ನಾಶ ಪಡಿಸಿದೆ. ಅಷ್ಟೇ ಅಲ್ಲ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ಕ.ಸೋಫಿಯಾ ಖುರೇಷಿ ಮೂಲಕ ಭಾರತೀಯ ಮಹಿಳೆಯ ಸಿಂಧೂರ ಕಿತ್ತು ಕೊಂಡಿದ್ದಕ್ಕೆ ಪ್ರತೀಕಾರವಾಗಿ ತೆಗೆದುಕೊಂಡ ಕ್ರಮಕ್ಕೆ ಇಡೀ ಜಗತ್ತಿಗೆ ಮಹಿಳೆಯರ ನೇತೃತ್ವದಲ್ಲಿಯೇ ಪ್ರತೀಕಾರ ತೀರಿಸಿಕೊಂಡಿದ್ದು, ಅದನ್ನು ಇಡೀ ಜಗತ್ತಿಗೆ ಅವರಿಂದಲೇ ಪತ್ರಿಕಾ ಗೋಷ್ಠಿ ಮಾಡಿಸಿ ಹೇಳಿದ್ದು ದೇಶದ ನಾರಿ ಶಕ್ತಿ ಸಾಮರ್ಥ್ಯವನ್ನು ಸಾರಿ ಸಾರಿ ಹೇಳಿದಂತಾಗಿದೆ. ಅಷ್ಟೇ ಅಲ್ಲ ಹಿಂದೂ ಎನ್ನುವ ಕಾರಣಕ್ಕೆ 26 ಅಮಾಯಕ ನಾಗರಿಕರನ್ನು ಕೊಂದಿದ್ದಕ್ಕೆ ಪ್ರತೀಕಾರವಾಗಿ ಹಿಂದು-ಮುಸ್ಲಿಂ ಜಂಟಿಯಾಗಿಯೇ ನಡೆದ ಕಾರ್ಯಾಚರಣೆ ಬಗ್ಗೆ ಪತ್ರಿಕಾ ಗೋಷ್ಠಿಯಲ್ಲಿ ವಿವರಣೆ ನೀಡಿ, ದೇಶದ ಭದ್ರತಾ ವಿಷಯವಾಗಿ ಬಂದಾಗ ಭಾರತದಲ್ಲಿ ಮಹಿಳೆಯರೊಡಗೂಡಿ ಹಿಂದೂ-ಮುಸ್ಲಿಂ ಎಂದೆಂದಿಗೂ ಒಟ್ಟಾಗಿಯೇ ಇರುತ್ತಾರೆಂದು ಜಗತ್ತಿಗೆ ಸಾರಿ ಹೇಳಿದ ಭಾರತದ ಕ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಇದನ್ನೂ ಓದಿ: ಗರ್ಭಿಣಿಯಾಗಿದ್ದರೂ, ಎರಡು ವರ್ಷದ ಮಗುವಿನ ತಾಯಿಯಾಗಿ ಕಾರ್ಗಿಲ್ ಯುದ್ಧದಲ್ಲಿ ಗನ್ ಹಿಡಿದ ಈ ದೈರ್ಯಶಾಲಿ ಮಹಿಳೆ ಯಾರು?
ಭಾರತ ಅಳವಡಿಸಿಕೊಂಡಿರುವ ರಷ್ಯಾದ ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ಸ್ ಪಾಕಿಸ್ತಾನದ ಪಾಲಿಗೆ ದುಸ್ವಪ್ನವಾಗಿ ಕಾಡುತ್ತಿದೆ. ಭಾರತದ 15 ನಗರಗಳ ಮಿಲಿಟರಿ ಮತ್ತು ರೇಡಾರ್ ವ್ಯವಸ್ಥೆಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದರೂ ಅವುಗಳನ್ನೆಲ್ಲ ಆಗಸದಲ್ಲೇ ಕರಾರುವಕ್ಕಾಗಿ ಹೊಡೆದುರುಳಿಸುವಲ್ಲಿ ಈ ರಕ್ಷಣಾ ವ್ಯವಸ್ಥೆ ಯಶಸ್ವಿಯಾಗಿದೆ. ಇದು ಪಾಕಿಸ್ತಾನಕ್ಕೆ ತೀವ್ರ ಮುಖಭಂಗವನ್ನುಂಟುಮಾಡಿದೆ. 'ಸುದರ್ಶನ ಚಕ್ರ' ಎಂದೇ ಕರೆಯಲ್ಪಡುವ ಈ ಏರ್ ಡಿಫೆನ್ಸ್ ಸಿಸ್ಟಮ್ ಭಾರತದ ಪಾಲಿನ ರಕ್ಷಾ ಕವಚವಾಗಿದೆ. ವಿಶ್ವದಲ್ಲೇ ಅತ್ಯಾಧುನಿಕ ಎನ್ನಲಾದ ಈ ರಕ್ಷಣಾ ವ್ಯವಸ್ಥೆ 600 ಕಿ.ಮೀ.ದೂರದಿಂದಲೇ ತನ್ನನ್ನ ಬರುವ ಗುರಿಯನ್ನು ಗುರುತಿಸಿ, 400 ಕಿ.ಮೀ.ದ ದೂರದಲ್ಲೇ ಅವುಗಳನ್ನು ಹೊಡೆದುರುಳಿಸಬಲ್ಲದು. ಭಾರತ ಇಂಥ ನಾಲ್ಕು ಎಸ್-400 ಡಿಫೆನ್ಸ್ ಸಿಸ್ಟಮ್ ಅನ್ನು ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್‌ನ ರಕ್ಷಣೆಗಾಗಿ ನಿಯೋಜಿಸಿದೆ.
ಭಾರತ-ಫಾಕಿಸ್ತಾನ ಸಂಘರ್ಷದ ಪ್ರತಿ ಕ್ಷಣದ ಮಾಹಿತಿಗಾಗಿ ಸುವರ್ಣ ನ್ಯೂಸ್‌ಗೆ ಟ್ಯೂನ್ ಆಗಿರಿ.


