userpic
user icon
0 Min read

ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ಜಾವಿದ್ ಬಂಧನ

india pakistan tension: Derogatory post against PM Modi in Mandya Accused Javid arrested rav

Synopsis

ಪ್ರಧಾನಿ ಮೋದಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಂಡ್ಯದ ವ್ಯಕ್ತಿಯನ್ನು ಬಂಧಿಸಲಾಗಿದೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಮೋದಿ ಶೂ ಧರಿಸುವಂತೆ ಎಡಿಟ್ ಮಾಡಿದ ಫೋಟೊವನ್ನು ಶೇರ್ ಮಾಡಿದ್ದ ಆರೋಪ. ಇದೇ ರೀತಿಯ ಘಟನೆ ಕೋಲಾರದಲ್ಲೂ ನಡೆದಿದ್ದು, ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಲ್ಲಿ ವಿಚಾರಣೆ ನಡೆಯುತ್ತಿದೆ.

ಮಂಡ್ಯ (ಮೇ.9): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವಿದ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಆರೋಪಿಯು ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೋದಿ ಶೂ ಧರಿಸುವಂತೆ ಎಡಿಟ್ ಮಾಡಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಆರೋಪಿ ವಿಕೃತಿ ಮೆರೆದಿದ್ದ ಆರೋಪ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಲ್ಲಿಕಾರ್ಜುನ ಬಾಲದಂಡಿ ಅವರು ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ: ಪಾಕಿಸ್ತಾನ ಸುಳ್ಳು ಸುದ್ದಿ ಹರಡುತ್ತಿದೆ: PIB ಎಚ್ಚರಿಕೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸಂಹಿತೆ (ಬಿಎನ್‌ಎಸ್) ಕಲಂ 152, 192, ಮತ್ತು 340 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕೋಲಾರದಲ್ಲೂ ಇದೇ ರೀತಿಯ ಪ್ರಕರಣ
ಇದೇ ರೀತಿಯ ಘಟನೆಯೊಂದು ಕೋಲಾರದಲ್ಲೂ ನಡೆದಿದೆ.ಕೋಲಾರದ ಕುಂಬಾರಪೇಟೆ ನಿವಾಸಿ ಮುನೀರ್ ಖಾನ್ ಖುರೇಷಿ ಎಂಬ ವ್ಯಕ್ತಿಯು ತನ್ನ ಯೂಟ್ಯೂಬ್ ಚಾನೆಲ್ ಮೂಲಕ 'ಪಹಲ್ಗಾಮ್ ದಾಳಿ ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ' ಎಂಬ ಆಧಾರ ರಹಿತ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದನೆಂಬ ಆರೋಪದಲ್ಲಿ  ಗಲ್‌ಪೇಟೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿ ವಿಚಾರಣೆ ನಡೆಸಿದ್ದಾರೆ. ಈ ಘಟನೆ ಬೆನ್ನಲ್ಲೇ ಮಂಡ್ಯದಲ್ಲಿ ಪ್ರಕರಣ ಮರುಕಳಿಸಿದೆ. ಎರಡೂ ಪ್ರಕರಣಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮತ್ತು ಪ್ರಚೋದನಕಾರಿ ಮಾಹಿತಿಯನ್ನು ಹರಡುವುದರಿಂದ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟಾಗಬಹುದು ಎಂಬ ಕಾರಣಕ್ಕೆ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ತನಿಖೆ ಮುಂದುವರಿದಿದೆ.

Latest Videos