india us deal dಭಾರತ ಹಾಗೂ ಅಮೆರಿಕ ಒಪ್ಪಂದದಿಂದ ಯಾರಿಗೂ ಲಾಭವಿಲ್ಲ. ಈ ಮಧ್ಯೆಯೂ ಅಮೆರಿಕ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಒಪ್ಪುತ್ತಿದ್ದಾರೆ. ಆ ಮೂಲಕ ಅಮೆರಿಕ ಹೇಳಿದಂತೆ ನಾವು ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಕಿಡಿಕಾರಿದರು.

ಹುಬ್ಬಳ್ಳಿ (ಫೆ.8): ಭಾರತ ಹಾಗೂ ಅಮೆರಿಕ ಒಪ್ಪಂದದಿಂದ ಯಾರಿಗೂ ಲಾಭವಿಲ್ಲ. ಈ ಮಧ್ಯೆಯೂ ಅಮೆರಿಕ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಒಪ್ಪುತ್ತಿದ್ದಾರೆ. ಆ ಮೂಲಕ ಅಮೆರಿಕ ಹೇಳಿದಂತೆ ನಾವು ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಕಿಡಿಕಾರಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರೈತರಿಗೆ ತೊಂದರೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಮೆರಿಕದಿಂದ ಭಾರತಕ್ಕೆ ಬರುವ ಯಾವ ವಸ್ತುಗಳಿಗೂ ಟ್ಯಾಕ್ಸ್ ಇಲ್ಲ. ರೈತರ ಉತ್ಪನ್ನಗಳಿಗೆ ಜೀರೋ ಟ್ಯಾಕ್ಸ್ ಹಾಕುತ್ತಿದ್ದು, ರೈತರಿಗೆ ಇದರಿಂದ ತೊಂದರೆ ಆಗಲಿದೆ. ಇಂತಹ ವಿಚಾರಗಳ ಬಗ್ಗೆ ಪರಾಮರ್ಶೆ ಮಾಡಬೇಕಾದ ಬಿಜೆಪಿಗರು, ಪ್ರಧಾನಿಗಳ ನಡೆ ವಿರುದ್ಧ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: BIFFes Row: ಪ್ಯಾಲೆಸ್ಟೈನ್ ಸಿನಿಮಾ ಪ್ರದರ್ಶನಕ್ಕೆ ಸಚಿವ ಲಾಡ್ ಸಾಥ್; ಪ್ರಕಾಶ್ ರಾಜ್ ಪರ ಬ್ಯಾಟಿಂಗ್!

ನರವಣೆ ಅವರನ್ನು ದೇಶದ್ರೋಹಿ ಎಂದು ಕರೆದರೂ ಅಚ್ಚರಿಯಿಲ್ಲ

ಮಾಜಿ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅವರ ಅಪ್ರಕಟಿತ ಆತ್ಮಚರಿತ್ರೆಯ ಪುಸ್ತಕಕ್ಕೆ ಏಕೆ ಪರವಾನಗಿ ನೀಡಲಾಗುತ್ತಿಲ್ಲ. ಬಿಜೆಪಿಯವರು ಮುಂದಿನ ದಿನಗಳಲ್ಲಿ ನರವಣೆ ಅವರನ್ನು ದೇಶದ್ರೋಹಿ ಎಂದು ಕರೆಯುವುದರಲ್ಲಿ ಸಂದೇಹವಿಲ್ಲ ಎಂದರು. 

YouTube video player