Asianet Suvarna News Asianet Suvarna News

Independence Day: ಬಿಜೆಪಿಯಿಂದ ದೇಶ ವಿಭಜನೆ ಕತೆ ಹೇಳುವ ಕಾರ‍್ಯಕ್ರಮ ಆಯೋಜನೆ

 ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಆ.14ರ ಮಧ್ಯರಾತ್ರಿ ದೇಶಕ್ಕೆ ಸ್ವಾತಂತ್ರ್ಯದ ಖುಷಿ, ಸಂತಸದ ಜೊತೆಗೆ ಅಷ್ಟೇ ಪ್ರಮಾಣದಲ್ಲಿ ದುಃಖವಾಗಿತ್ತು. ಭಾರತ ವಿಭಜನೆಯಾಗಿ ದೇಶ ಎರಡು ತುಂಡಾಯಿತು. ಈ ವಿಭಜನೆಯ ದುರಂತ ಕಥೆಯನ್ನು ತಿಳಿಸುವ ಉದ್ದೇಶದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ‘ಪ್ರದರ್ಶಿನಿ’ ಆಯೋಜಿಸಲಾಗಿದೆ.

indian independenceday a program  story telling of partition of the country by BJP rav
Author
First Published Aug 14, 2023, 5:52 AM IST

ಬೆಂಗಳೂರು (ಆ.14) :  ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಆ.14ರ ಮಧ್ಯರಾತ್ರಿ ದೇಶಕ್ಕೆ ಸ್ವಾತಂತ್ರ್ಯದ ಖುಷಿ, ಸಂತಸದ ಜೊತೆಗೆ ಅಷ್ಟೇ ಪ್ರಮಾಣದಲ್ಲಿ ದುಃಖವಾಗಿತ್ತು. ಭಾರತ ವಿಭಜನೆಯಾಗಿ ದೇಶ ಎರಡು ತುಂಡಾಯಿತು. ಈ ವಿಭಜನೆಯ ದುರಂತ ಕಥೆಯನ್ನು ತಿಳಿಸುವ ಉದ್ದೇಶದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ‘ಪ್ರದರ್ಶಿನಿ’ ಆಯೋಜಿಸಲಾಗಿದೆ.

ರಾಜ್ಯ ಬಿಜೆಪಿ ಕಾರ್ಯಾಲಯದ ಪ್ರದರ್ಶಿನಿಯನ್ನು ಮಾಜಿ ಸಚಿವ ಆರ್‌.ಆಶೋಕ್‌ ಉದ್ಘಾಟಿಸುವರು. ಸಂಸದ ಪಿ.ಸಿ.ಮೋಹನ್‌, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂಗಳೂರಿನ ಹಾಜಬ್ಬ ಅವರು ಭಾಗವಹಿಸುವರು ಎಂದು ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ತಿಳಿಸಿದ್ದಾರೆ.

ವಿಪಕ್ಷಗಳ ಕೂಟ ಹಳೇ ಬಾಟಲಿ, ಹಳೇ ಮದ್ಯ ಇದ್ದಂತೆ: ಅಮಿತ್‌ ಶಾ ವ್ಯಂಗ್ಯ

ಈ ಬಾರಿಯ ರಾಷ್ಟ್ರ ಧ್ವಜಾರೋಹಣವನ್ನು ವಿಶಿಷ್ಟರೀತಿಯಲ್ಲಿ ಆಚರಿಸಲಾಗುವುದು. ಮನೆ ಮನೆಯಲ್ಲೂ ತ್ರಿವರ್ಣ ಧ್ವಜದ ಮೂಲಕ ದೇಶಭಕ್ತಿ ಜ್ವಾಲೆ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿದ್ದು ಲಕ್ಷಾಂತರ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿ, ತಾಲೂಕು, ಜಿಲ್ಲೆಗಳಲ್ಲಿ ಕಾರ್ಯಕರ್ತರು ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ದೇಶ, ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ವೀರ ಯೋಧರು, ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಿಸುವ ಕಾರ್ಯವು ದೇಶ ಮತ್ತು ಕರ್ನಾಟಕದಲ್ಲಿ ಅಭೂತಪೂರ್ವವಾಗಿ ನಡೆಯಲಿದೆ. ಲಕ್ಷಾಂತರ ಕಾರ್ಯಕರ್ತರ ಮನೆಗಳಲ್ಲೂ ತ್ರಿವರ್ಣ ಧ್ವಜ ರಾರಾಜಿಸಲಿವೆ ಎಂದು ವಿವರಿಸಿದರು.

ಸೋಮವಾರ ಸಂಜೆ ಬೆಂಗಳೂರಿನಲ್ಲಿ ಪಂಜಿನ ಮೌನ ಮೆರವಣಿಗೆ ನಡೆಸಲಾಗುವುದು. ಆ.15ರಂದು ಬೆಳಿಗ್ಗೆ ಬೆಂಗಳೂರಿನಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯ ಸೇನಾನಿಗಳ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಜಿಲ್ಲೆ, ಮಂಡಲಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಶಾಸಕರು, ಸಂಸದರು, ಪದಾಧಿಕಾರಿಗಳು ಪಾಲ್ಗೊಳ್ಳುವರು ಎಂದರು.

ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರನಿಗೆ ಗೋಲ್ಡನ್‌ ಟೆಂಪಲ್!

6 ಲಕ್ಷ ಪಂಚಾಯ್ತಿಯಿಂದ ಮಣ್ಣು ಸಂಗ್ರಹಿಸಿ ದಿಲ್ಲಿಗೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಭಾರತವನ್ನು ಪ್ರಪಂಚದಲ್ಲಿ ನಂ.1 ಮಾಡಲು ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ನೀಡಿದ್ದಾರೆ. 6 ಲಕ್ಷ ಪಂಚಾಯ್ತಿ, ಕಿತ್ತೂರು, ಮೈಸೂರು, ಬೆಂಗಳೂರು ಸೇರಿ 7,500 ಐತಿಹಾಸಿಕ ಸ್ಥಳಗಳಿಂದ ಮಣ್ಣು ಸಂಗ್ರಹಿಸಿ ಅಮೃತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ದೆಹಲಿ ಕರ್ತವ್ಯ ಪಥದ ವಾಟಿಕಾ ಪಾರ್ಕ್ನಲ್ಲಿ ಹಾಕಿ ಉದ್ಯಾನ ನಿರ್ಮಿಸಲಾಗುತ್ತದೆ. ಆ.30ಕ್ಕೆ ಮೋದಿ ಈ ಕಾರ್ಯಕ್ರಮ ನೆರವೇರಿಸಲಿದ್ದಾರೆ ಎಂದು ವಿವರಿಸಿದರು.

Follow Us:
Download App:
  • android
  • ios