ವಿಜಯಪುರ-ಮಂಗಳೂರು ರೈಲು ಯಲಿವಿಗಿಯಲ್ಲಿ ನಿಲುಗಡೆ

ವಿಜಯಪುರ - ಮಂಗಳೂರು ಎಕ್ಸ್‌ಪ್ರೆಸ್ ರೈಲು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಶ್ರೀ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಕ್ಷೇತ್ರಗಳಿಗೆ ಭೇಟಿ ನೀಡಲು ಹಾಗೂ ಮಂಗಳೂರಿಗೆ ನೇರ ಸಂಪರ್ಕ ಒದಗಲಿದೆ.

Indian Railway Vijayapura Mangalore train halts at Yalivigi sat

ಹಾವೇರಿ (ಜ.02): ವಿಜಯಪುರ - ಮಂಗಳೂರು ನಡುವೆ ಸಂಚರಿಸುವ ಮಂಗಳೂರು  ಎಕ್ಸ್ ಪ್ರೆಸ್ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿರುವ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ವಿಜಯಪುರ ಮಂಗಳೂರು  ರೈಲಿನ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಿರುವುದರಿಂದ ರಾಜ್ಯದ ಪ್ರಮುಖ ದೇವಸ್ಥಾನಗಳಾದ ಶ್ರೀ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಕ್ಷೇತ್ರಗಳಿಗೆ ಭೇಟಿ ನೀಡಲು ಅನುಕೂಲವಾಗಲಿದೆ ಹಾಗೂ  ಬಂದರು ನಗರಿ ಮಂಗಳೂರು ನಗರಕ್ಕೆ ಈ ರೈಲು ನೇರ ಸಂಪರ್ಕವನ್ನು ಒದಗಿಸಲಿದ್ದು ಇದರ ಸದುಪಯೋಗವನ್ನು ಪಡೆಯಬೇಕೆಂದು ಜನತೆಗೆ ಮನವಿ ಮಾಡಿದ್ದಾರೆ‌.

ನನ್ನ ಕೋರಿಕೆಗೆ ಸ್ಪಂದಿಸಿ ಯಲಿವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿದ ರೈಲ್ವೆ ಇಲಾಖೆಗೆ ಧನ್ಯವಾದಗಳು. ಯಲವಿಗಿ ರೈಲು ನಿಲ್ದಾಣದಲ್ಲಿ ವಿಜಯಪುರ - ಮಂಗಳೂರು ಎಕ್ಸ್ ಪ್ರೆಸ್ ರೈಲು ಪ್ರತಿದಿನ ರಾತ್ರಿ  9:49 ಗಂಟೆಗೆ ನಿಲುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಸಲಿ ಗಾಂಧಿ ಹೆಸರಲ್ಲಿ ನಕಲಿ ಕಾಂಗ್ರೆಸ್‌ ಸಮಾವೇಶ: ಬಸವರಾಜ ಬೊಮ್ಮಾಯಿ

Latest Videos
Follow Us:
Download App:
  • android
  • ios