ಬೆಂಗಳೂರು, (ಮೇ.02): ಸಚಿವ ಎಸ್‌.ಟಿ.ಸೋಮಶೇಖರ್ ಅವರ ಮನವಿಗೆ ಸ್ಪಂದಿಸಿದ ಅಮೆರಿಕಾದ ಫಿನಿಕ್ಸ್‌ನಗರದಲ್ಲಿರುವ ಭಾರತೀಯರೊಬ್ಬರು ಮೈಸೂರು ಮೃಗಾಲಯಕ್ಕೆ ದೇಣಿಗೆ ನೀಡಿದ್ದಾರೆ.

 ಸಚಿವರ ವಾಟ್ಸಪ್ ಸಂದೇಶದ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ ಅವರು, ಪ್ರಾಣಿ-ಪಕ್ಷಿಗಳ ನಿರ್ವಹಣೆಗೋಸ್ಕರ ತಮ್ಮದೂ ಒಂದು ಕೊಡುಗೆ ಇರಬೇಕು ಎಂದು ಚಿಂತಿಸಿ ತಕ್ಷಣ ತಮ್ಮ ಪುತ್ರಿ ಪ್ರಿಶಾ ಹೆಸರಿನಲ್ಲಿ 25,000 ರೂಪಾಯಿ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮೈಸೂರು ಮೃಗಾಲಯ ಸಂಕಷ್ಟಕ್ಕೆ ನೆರವಾದ ಖಾಸಗಿ ಕಾಲೇಜಿನ ಪ್ರಾಂಶುಪಾಲೆ

ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯ ನಿರ್ವಹಣೆಗೋಸ್ಕರ ನಾಗರಿಕರು ದೇಣಿಗೆ ನೀಡಿ ಸಹಕರಿಸುವಂತೆ ವಾಟ್ಸಪ್ ಮೂಲಕ ಮಾಡಿದ ಮನವಿಗೆ ಸ್ಪಂದಿಸಿದ ಅಮೆರಿಕದ ಫೀನಿಕ್ಸ್ ನ ಜ್ಯೋತಿ ವಿಕಾಸ್ ಎಂಬುವರು ತಮ್ಮ ಮಗಳ ಹೆಸರಿನಲ್ಲಿ 25,000 ರೂಪಾಯಿ ದೇಣಿಗೆ ನೀಡಿದ್ದಾರೆ.

ವಾಟ್ಸಪ್ ಸಂದೇಶದ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ ಅವರು, ಪ್ರಾಣಿ-ಪಕ್ಷಿಗಳ ನಿರ್ವಹಣೆಗೋಸ್ಕರ ತಮ್ಮದೂ ಒಂದು ಕೊಡುಗೆ ಇರಬೇಕು ಎಂದು ಅನ್ನಿಸಿ ತಕ್ಷಣ ತಮ್ಮ ಪುತ್ರಿ ಪ್ರಿಶಾ ಹೆಸರಿನಲ್ಲಿ 25,000 ರೂಪಾಯಿ ದೇಣಿಗೆ ನೀಡಿ .ನೆರವಾಗಿದ್ದಾರೆ.

ಮೊದಲ ಬಾರಿ ಜನರ ನೆರವು ಕೇಳಿದ ಮೈಸೂರು ಮೃಗಾಲಯ..!

ಈ ಬಗ್ಗೆ ಪ್ರತಿಕ್ರಿಯಿಸಿರುವ ಜ್ಯೋತಿ ವಿಕಾಸ್ ಅವರು, "ಪ್ರಿಶಾ ನಮ್ಮ ಒಂದು ವರ್ಷದ ಮಗಳಾಗಿದ್ದು, ಆಕೆಯ ಹೆಸರಿನಲ್ಲಿ 2 ತಿಂಗಳ ಅವಧಿಗೆ ಆನೆಯೊಂದನ್ನು ದತ್ತು ತೆಗೆದುಕೊಂಡಿದ್ದೇವೆ. ಸಚಿವರು ಮಾಡಿದ ಮನವಿಯನ್ನು ಮಾಧ್ಯಮಗಳ ಮೂಲಕ ಗಮನಿಸಿ ದತ್ತು ತೆಗೆದುಕೊಳ್ಳುವ ನಿರ್ಧಾರ ಮಾಡಿದೆವು. ಜೊತೆಗೆ ಇಲ್ಲಿನ ದಾನಿಗಳಿಂದ ಪ್ರಾಣಿಗಳಿಗೆ ಸಹಾಯಧನವನ್ನು ಸಂಗ್ರಹಿಸಲು ನಮ್ಮ ಬಳಗ ನಿರ್ಧರಿಸಿದೆ ಎಂದರು.

ಯಶವಂತಪುರ ವಿಧಾನಸಭಾ ಕ್ಷೇತ್ರದ ಜನರಿಂದ ಸಹಾಯ
, ಸಚಿವ ಎಸ್‌.ಟಿ.ಸೋಮಶೇಖರ್ ಅವರ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ದಿನಾಂಕ 02-05-2020ರವರೆಗೆ ಸಂಗ್ರಹಿಸಿದ ಒಟ್ಟು 1 ಕೋಟಿ 18 ಲಕ್ಷ 90 ಸಾವಿರ ರೂಪಾಯಿ ಚೆಕ್ ಅನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ರವರಿಗೆ ಹಸ್ತಾಂತರ ಮಾಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸೋಮಶೇಖರ್, ಆಹಾರ ಸಚಿವರಾದ ಗೋಪಾಲಯ್ಯ ಅವರಿಗೆ ಮೈಸೂರು ಮೃಗಾಲಯದ ಸ್ಥಿತಿಗತಿ ಬಗ್ಗೆ ವಿವರಣೆ ನೀಡಿ ಸಹಾಯ ಮಾಡುವಂತೆ ಕೋರಿದೆ, ಅವರು ತಕ್ಷಣ ಸ್ಪಂದಿಸಿ 8 ಲಕ್ಷ ರೂಪಾಯಿ ದೇಣಿಗೆ ಹಾಗೂ ಮೃಗಾಲಯದ 300 ಮಂದಿ ಸಿಬ್ಬಂದಿಗೆ ತಲಾ 25 ಕೆ.ಜಿ. ಅಕ್ಕಿಯನ್ನು ವೈಯುಕ್ತಿಕವಾಗಿ ನೀಡಿದ್ದಾರೆ. ಹೀಗಾಗಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಹಾಗೂ ಸರ್ಕಾರದ ವತಿಯಿಂದ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು.