ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ್ದ ‘ಟೆಲಿ ಆಪ್ತ ಸಮಾಲೋಚನೆ’ ಕಾರ್ಯಕ್ರಮದ ಕುರಿತು ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದ್ದು, ‘ಇ ಮನಸ್’ ಹೆಸರಿನಲ್ಲಿ ದೇಶಾದ್ಯಂತ ಜಾರಿ ಮಾಡುವುದಾಗಿ ಘೋಷಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಬೆಂಗಳೂರು (ಜು.23): ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ್ದ ‘ಟೆಲಿ ಆಪ್ತ ಸಮಾಲೋಚನೆ’ ಕಾರ್ಯಕ್ರಮದ ಕುರಿತು ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದ್ದು, ‘ಇ ಮನಸ್’ ಹೆಸರಿನಲ್ಲಿ ದೇಶಾದ್ಯಂತ ಜಾರಿ ಮಾಡುವುದಾಗಿ ಘೋಷಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
‘ವಿಶ್ವ ಮೆದುಳು ಆರೋಗ್ಯ ದಿನ’ ಅಂಗವಾಗಿ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಬ್ರೈನ್ ಹೆಲ್ತ್ ಕ್ಲಿನಿಕ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕೊರೋನಾ ಆರಂಭಿಕ ದಿನಗಳಲ್ಲಿ ರೋಗದಿಂದ ಸಾಯುವುದಕ್ಕಿಂತ ಭಯದಿಂದಲೇ ಕೆಲವರು ಸತ್ತಿದ್ದರು. ಹೀಗಾಗಿಯೇ, ನಿಮ್ಹಾನ್ಸ್ ಸಹಯೋಗದಲ್ಲಿ ಭಯದಲ್ಲಿರುವ ರೋಗಿಗಳಿಗೆ ದೂರವಾಣಿ ಮೂಲಕ ಆಪ್ತ ಸಮಾಲೋಚನೆ ಕಾರ್ಯಕ್ರವನ್ನು ಆರಂಭಿಸಲಾಯಿತು. ಜೊತೆಗೆ ಇದರಲ್ಲೇ ಇತರೆ ಆನ್‌ಲೈನ್ ಸೇವೆಯನ್ನೂ ಸೇರ್ಪಡೆ ಮಾಡಲಾಗಿತ್ತು.
ಅವರಪ್ಪನಾಣೆಗೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ: ಸಚಿವ ಕೆ.ಸುಧಾಕರ್
ಇದು ಯಶಸ್ವಿಯಾಗಿದ್ದು, ಒಂದೂವರೆ ವರ್ಷದಲ್ಲಿ 25 ಲಕ್ಷ ಜನರಿಗೆ ಆಪ್ತ ಸಮಾಲೋಚನೆ ಮಾಡಲಾಗಿದೆ. ದೇಶಾದ್ಯಂತ ಎಲ್ಲಾ ನಾಗರಿಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ‘ಟೆಲಿ ಮನಸ್’ ಹೆಸರಿನಲ್ಲಿ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಲ್ಲಿಯೂ ಜಾರಿಗೊಳಿಸಲು ನಿರ್ಧರಿಸಿದೆ’ ಎಂದರು. ಅಂತಾರಾಷ್ಟ್ರೀಯ ಕ್ರಿಕೆಟಿಗ ರಾಬಿನ್ ಉತ್ತಪ್ಪ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಉಪಸ್ಥಿತರಿದ್ದರು.
ಕನ್ಯಾಕುಮಾರಿದಿಂದ ಕಾಶ್ಮೀರವರೆಗಿನ ಜನರು ನಿಮ್ಹಾನ್ಸ್‌ಗೆ: ನಿಮ್ಹಾನ್ಸ್ ಭಾರತದಲ್ಲೇ ಪ್ರಸಿದ್ಧಿ ಪಡೆದಿದ್ದು, ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗಿನ ಜನರು ಕೂಡ ಇದೇ ಆಸ್ಪತ್ರೆಗೆ ಬರುತ್ತಿದ್ದಾರೆ. ಇಲ್ಲಿ ಟ್ರಾಮಾ ಸೆಂಟರ್ ಆರಂಭಿಸುವ ಕುರಿತು ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರ ಅನುಮತಿ ನೀಡಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ವೀರೇಂದ್ರ ಹೆಗ್ಗಡೆ ಮಾತನಾಡುವ ದೇವರು: ಸಚಿವ ಸುಧಾಕರ್
ನಿಮ್ಹಾನ್ಸ್ ತರಬೇತಿ: ಮಿದುಳಿನಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ, ಚಿಕಿತ್ಸೆಗೆ ಒಳಪಡಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರಿಗೆ ತರಬೇತಿ ನೀಡಲಾಗುತ್ತಿದೆ. ಸದ್ಯ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್ ಮಾಡಿದ ವೈದ್ಯರಿದ್ದಾರೆ. ಮಾನಸಿಕ ರೋಗಿಗಳು ಅವರ ಬಳಿ ಬಂದಾಗ ಚಿಕಿತ್ಸೆ ನೀಡಲು ನಿಮ್ಹಾನ್ಸ್‌ನಿಂದ ವಿಶೇಷ ತರಬೇತಿ ಕೊಡಿಸಲಾಗುತ್ತಿದೆ. ಪ್ರಾಯೋಗಿಕವಾಗಿ ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ನಿಮ್ಹಾನ್ಸ್‌ನ ತಜ್ಞರು 100 ವೈದ್ಯರಿಗೆ ತರಬೇತಿ ನೀಡಿದ್ದಾರೆ. ಈ ಮೂಲಕ ಮಾನಸಿಕ ರೋಗಿಗಳು ನೇರವಾಗಿ ನಿಮ್ಹಾನ್ಸ್‌ಗೆ ಬರದೇ ಸ್ಥಳೀಯ ಮಟ್ಟದಲ್ಲೇ ಸೇವೆ ಪಡೆಯಬಹುದು ಎಂದು ತಿಳಿಸಿದರು.
