ರಾಜ್ಯದಲ್ಲಿನ ಇಂದಿರಾ ಕ್ಯಾಂಟೀನ್‌ಗಳಿಗೆ ಹೊಸ ರೂಪ ನೀಡಿ ಮರು ಚಾಲನೆ ನೀಡಲಾಗುತ್ತಿದ್ದು, ಆಯಾ ಪ್ರಾದೇಶಿಕತೆಗೆ ತಕ್ಕಂತೆ ಕ್ಯಾಂಟೀನ್‌ಗಳಲ್ಲಿ ಆಹಾರ ಪೂರೈಸಲು ನಿರ್ಧರಿಸಲಾಗಿದೆ.
ಬೆಂಗಳೂರು (ಜೂ.12) ರಾಜ್ಯದಲ್ಲಿನ ಇಂದಿರಾ ಕ್ಯಾಂಟೀನ್‌ಗಳಿಗೆ ಹೊಸ ರೂಪ ನೀಡಿ ಮರು ಚಾಲನೆ ನೀಡಲಾಗುತ್ತಿದ್ದು, ಆಯಾ ಪ್ರಾದೇಶಿಕತೆಗೆ ತಕ್ಕಂತೆ ಕ್ಯಾಂಟೀನ್‌ಗಳಲ್ಲಿ ಆಹಾರ ಪೂರೈಸಲು ನಿರ್ಧರಿಸಲಾಗಿದೆ.
ಜನರಿಗೆ ಕಡಿಮೆ ದರದಲ್ಲಿ ಆಹಾರ ನೀಡಲು 2017ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಯೋಜನೆ(Indira canteen scheme) ಜಾರಿಗೊಳಿಸಿದ್ದರು. ಆದರೆ, ಕಳೆದ ಮೂರೂವರೆ ವರ್ಷಗಳಿಂದ ಕ್ಯಾಂಟೀನ್‌ಗಳು ನಿರ್ವಹಣೆ ಕೊರತೆಯಿಂದ ಜನರಿಗೆ ಸಮರ್ಪಕವಾಗಿ ಆಹಾರ ಪೂರೈಸುತ್ತಿಲ್ಲ. ಇದೀಗ ಇಂದಿರಾ ಕ್ಯಾಂಟೀನ್‌ಗಳನ್ನು ದುರಸ್ತಿಗೊಳಿಸಿ, ಹೊಸ ರೂಪದೊಂದಿಗೆ ಮತ್ತೆ ಆರಂಭಿಸಲಾಗುತ್ತಿದೆ. ಈ ಕುರಿತಂತೆ ಕ್ಯಾಂಟೀನ್‌ಗಳ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಇಂದಿರಾ ಕ್ಯಾಂಟೀನಲ್ಲಿ ಚಪಾತಿ, ಮುದ್ದೆ ಭಾಗ್ಯ?: ಹೊಸ ಆಹಾರದ ಮೆನು ಸಿದ್ಧಪಡಿಸುವಂತೆ ಸಿದ್ದು ಸೂಚನೆ
ಇಂದಿರಾ ಕ್ಯಾಂಟೀನ್‌ಗಳ ಮರು ಆರಂಭಕ್ಕೆ ಸಂಬಂಧಿಸಿದಂತೆ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳು ಸೇರಿದಂತೆ 170ಕ್ಕೂ ಹೆಚ್ಚಿನ ಇಂದಿರಾ ಕ್ಯಾಂಟೀನ್‌ಗಳಿವೆ. ಅವುಗಳಲ್ಲಿ ಬಹುತೇಕ ಕ್ಯಾಂಟೀನ್‌ಗಳು ನಿರ್ವಹಣೆ ಕೊರತೆಯಿಂದ ಸ್ಥಗಿತಗೊಂಡಿವೆ. ಇದೀಗ ಸ್ಥಗಿತಗೊಂಡಿರುವ ಕ್ಯಾಂಟೀನ್‌ಗಳ ಪಟ್ಟಿಮಾಡಿ ಅವುಗಳಲ್ಲಿ ಮತ್ತೆ ಆಹಾರ ಪೂರೈಕೆ ಆರಂಭಿಸಬೇಕು. ಕ್ಯಾಂಟೀನ್‌ಗಳಿಗೆ ಆಹಾರ ಪೂರೈಸಲು ಹೊಸದಾಗಿ ಗುತ್ತಿಗೆದಾರರನ್ನು ನೇಮಿಸಬೇಕು ಎಂದು ತಿಳಿಸಿದರು.
ಕ್ಯಾಂಟೀನ್‌ಗಳಲ್ಲಿ ಪೂರೈಸುವ ಆಹಾರ ಕ್ರಮವನ್ನು ಬದಲಿಸಬೇಕು. ಪ್ರಮುಖವಾಗಿ ಉತ್ತರ ಕರ್ನಾಟಕದ ಕ್ಯಾಂಟೀನ್‌ಗಳಲ್ಲಿ ಅಲ್ಲಿನ ಆಹಾರವನ್ನೇ ಪೂರೈಸಲು ಕ್ರಮ ಕೈಗೊಳ್ಳಬೇಕು. ಜತೆಗೆ ಕ್ಯಾಂಟೀನ್‌ಗಳಲ್ಲಿ ಸ್ವಚ್ಛತೆ, ಗುಣಮಟ್ಟಹಾಗೂ ಪ್ರಮಾಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಆಹಾರ ಪೂರೈಸಬೇಕು. ಜತೆಗೆ ಎಲ್ಲ ಕ್ಯಾಂಟೀನ್‌ಗಳಿಗೂ ಹೊಸದಾಗಿ ಮೆನು ಸಿದ್ಧಪಡಿಸಿ, ಅದನ್ನು ಪೂರೈಸಬೇಕು ಎಂದು ಸೂಚಿಸಿದರು.
ಕಂಪ್ಲಿ, ಕುರುಗೋಡಲ್ಲಿ ಇಂದಿರಾ ಕ್ಯಾಂಟೀನ್ ಇಲ್ಲ ಆರಂಭಿಸುವಂತೆ ಒತ್ತಾಯ
ಕ್ಯಾಂಟೀನ್‌ಗಳ ನಿರ್ವಹಣೆಗಾಗಿ ಬೆಂಗಳೂರು ಹೊರತುಪಡಿಸಿ ಇತರ ನಗರಗಳ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುವುದು. ಅದರಂತೆ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಮತ್ತು ನಿರ್ವಹಣೆಗಾಗಿ ರಾಜ್ಯ ಸರ್ಕಾರ ಶೇ. 70 ರಷ್ಟುಅನುದಾನ ನೀಡಿದರೆ, ಉಳಿದ ಶೇ. 30ರಷ್ಟನ್ನು ಸ್ಥಳೀಯ ಸಂಸ್ಥೆಗಳೇ ಭರಿಸಬೇಕು ಎಂದರು.
