ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯ, ಬಿಜೆಪಿ ಸಂಸದರು ಬಾಯಿ ಬಿಡ್ತಿಲ್ಲ: ಸಿದ್ದು ಗರಂ

ರಾಜ್ಯದ ಪ್ರಮುಖ ನೀರಾವರಿ ಯೋಜನೆ ಗಳಾದ ಮಹದಾಯಿ, ಮೇಕೆದಾಟುಗೆ ಕೇಂದ್ರ ಅನುಮತಿ ನೀಡುತ್ತಿಲ್ಲ. ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದ್ದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ಕಿಡಿ ಕಾರಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

injustice from Central Government to Karnataka Says CM Siddaramaiah grg

ನವದೆಹಲಿ(ನ.30):  ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದ್ದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ಮಣ್ಣಿನ ಮಗ ಅಂದುಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ?. ರಾಜ್ಯಸಭಾ ಸದಸ್ಯ ದೇವೇಗೌಡರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಬಾಯಿ ಬಿಡುತ್ತಿಲ್ಲ ಏಕೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. 

ದೆಹಲಿಯ ಕರ್ನಾಟಕ ಭವನದಲ್ಲಿ ಶುಕ್ರವಾರ ಸುದ್ದಿ ಗೋಷ್ಠಿ ನಡೆಸಿ ಅವರು ಮಾತನಾಡಿದರು. ರಾಜ್ಯದ ರೈತ ರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಕೇಂದ್ರ ಸರ್ಕಾರ ಶೇ.58ರಷ್ಟು ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲ ಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ. ರಾಜ್ಯದ ಪ್ರಮುಖ ನೀರಾವರಿ ಯೋಜನೆ ಗಳಾದ ಮಹದಾಯಿ, ಮೇಕೆದಾಟುಗೆ ಕೇಂದ್ರ ಅನುಮತಿ ನೀಡುತ್ತಿಲ್ಲ. ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದ್ದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ಕಿಡಿ ಕಾರಿದರು.

ಸಂಪುಟ ಪುನಾರಚನೆ ಸದ್ಯಕ್ಕಿಲ್ಲ: ಸಿದ್ದು, ಡಿಕೆಶಿ

ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ. ಇಡೀ ದೇಶದಲ್ಲಿ ಕಡಿತಗೊಳಿಸಲಾಗಿದೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಇದ ರಿಂದ ಇಡೀ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಿದೆ. ಇಡೀ ದೇಶದ ಕೃಷಿ ಉತ್ಪಾದನೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು. 

ನಬಾರ್ಡ್ 4.5% ಬಡ್ಡಿಗೆ ರೈತರಿಗೆ ಸಾಲದ ಹಣ ನೀಡುತ್ತಿತ್ತು. ನಾವು ರೈತರಿಗೆ ಬಡ್ಡಿ ರಹಿತವಾಗಿ ಸಾಲ ನೀಡಿ, ಈ 4.5% ಬಡ್ಡಿಯನ್ನು ಸರ್ಕಾರವೇ ಭರಿಸುತ್ತಿತ್ತು. ಈಗ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಿಂದ ಸಾಲ ಪಡೆಯುವಂತೆ ಕೇಂದ್ರ ಸರ್ಕಾರ ಹೇಳುತ್ತಿದೆ. 10% ಬಡ್ಡಿ ದರದಲ್ಲಿ ವಾಣಿಜ್ಯ ಬ್ಯಾಂಕ್ ಗಳು ಸಾಲ ನೀಡುತ್ತವೆ. ಇದರಿಂದ ಬ್ಯಾಂಕ್ ಗಳಿಗೆ ಲಾಭ ಆಗುತ್ತದೆಯೇ ಹೊರತು ರೈತರಿಗೆ ಅನುಕೂಲ ಇಲ್ಲ ಎಂದರು. 
15ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆಯಿತು. ಭದ್ರಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ಘೋಷಿಸಿ ಒಂದು ಪೈಸೆಯನ್ನೂ ಕೊಡಲಿಲ್ಲ. ಬೆಂಗಳೂರಿನ ಫೆರಿಫೆರಲ್‌ ರಿಂಗ್‌ ರಸ್ತೆಗೂ ಹಣ ಕೊಡಲಿಲ್ಲ. ಇವೆಲ್ಲದರಿಂದ 11,000 ಕೋಟಿ ರು. ರಾಜ್ಯಕ್ಕೆ ನಷ್ಟವಾಗಿದ್ದನ್ನೂ ಪ್ರಧಾನಿಗೆ ನೆನಪಿಸಿದ್ದೇವೆ. ಹೀಗಾಗಿ, ಈ ಬಾರಿ ಮತ್ತೆ ನಬಾರ್ಡ್ ಮೂಲಕ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮನವಿ ಮಾಡಿದ್ದೇವೆ ಎಂದರು. ಸಚಿವರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

ಕಾಂಗ್ರೆಸ್ ಶಾಸಕರಿಗೆ ತಲಾ 25 ಕೋಟಿ, ವಿಪಕ್ಷ ಶಾಸಕರಿಗೆ 10 ಕೋಟಿ ರೂ. ಅನುದಾನ ಹಂಚಿಕೆ; ಪರಮೇಶ್ವರ

ಪ್ರಧಾನಿ ಮೋದಿ ಭೇಟಿಯಾದ ಸಿದ್ದು: ನೀರಾವರಿ ಯೋಜನೆಗೆ ತುರ್ತು ಒಪ್ಪಿಗೆ ನೀಡಿ, ಸಿಎಂ

ನವದೆಹಲಿ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಸಮತೋಲನ ಜಲಾಶಯ ಮತ್ತು ಕಳಸಾ ಬಂಡೂರಿ ಯೋಜನೆಗಳಿಗೆ ತುರ್ತು ಅನುಮತಿ ನೀಡುವಂತೆ ಮನವಿ ಮಾಡಿದರು. ಅಲ್ಲದೆ, ನಬಾರ್ಡ್ ನೆರವು ಹೆಚ್ಚಳಕ್ಕೆ ಆಗ್ರಹಿಸಿದರು. 

ದೆಹಲಿಯ ಪಾರ್ಲಿಮೆಂಟ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಸಭೆಯಲ್ಲಿ ಕೃಷಿ, ಜಲಸಂಪನ್ಮೂಲ ಮತ್ತು ನಗರ ಮೂಲಸೌಕರ್ಯ ಸೇರಿದಂತೆ ನಿರ್ಣಾಯಕ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ ಹಲವಾರು ವಿಷಯಗಳಿಗೆ ಕೇಂದ್ರ ಸರ್ಕಾರ ತುರ್ತು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿಯನ್ನು ಅವರು ಒತ್ತಾಯಿಸಿದರು. ಉಪಮುಖ್ಯಮಂತ್ರಿ, ನೀರಾವರಿ ಸಚಿವ ಡಿ.ಕೆ.ಶಿವಕುಮಾರ್. ಇಂಧನ ಸಚಿವ ಕೆ.ಜೆ.ಜಾರ್ಜ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸಿಎಂ ಜತೆ ಹಾಜರಿದ್ದರು.

Latest Videos
Follow Us:
Download App:
  • android
  • ios