Asianet Suvarna News Asianet Suvarna News

ಪಂಚಮಸಾಲಿಗೆ 2ಎಗೆ ಮೀಸಲು: ಹೈಕೋರ್ಟ್‌ಗೆ ಮಧ್ಯಂತರ ವರದಿ

ಮೊದಲು ಮಧ್ಯಂತರ ವರದಿಯನ್ನು ನ್ಯಾಯಾಲಯ ಪರಿಶೀಲಿಸಬೇಕಿದೆ. ಅಗತ್ಯಬಿದ್ದರೆ ಅದನ್ನು ನಿಮಗೆ ನೀಡಲು ಅನುಮತಿಸುತ್ತೇವೆ ಎಂದು ಮೌಖಿಕವಾಗಿ ತಿಳಿಸಿದ ಮುಖ್ಯ ನ್ಯಾಯಮೂರ್ತಿ ವರಾಳೆ. 

Interim Report to High Court of Reservation for Panchmasali grg
Author
First Published Feb 4, 2023, 12:30 AM IST

ಬೆಂಗಳೂರು(ಫೆ.04):  ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರ್ಪಡೆ ಮಾಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಶುಕ್ರವಾರ ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದೆ.

ಬೆಂಗಳೂರಿನ ಡಿ.ಜಿ. ರಾಘವೇಂದ್ರ ಅವರು ಹಿಂದುಳಿದ ವರ್ಗಗಳ ಪಟ್ಟಿ ಪರಿಷ್ಕರಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಅವರಿದ್ದ ಪೀಠಕ್ಕೆ ರಾಜ್ಯ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದರು.

ಬಿಜೆಪಿಗೆ ಶೇ.80 ರಷ್ಟು ಬೆಂಬಲ ನಮ್ಮ ಸಮುದಾಯವೇ ನೀಡಿದೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮಧ್ಯಂತರ ವರದಿಯನ್ನು ಒಪ್ಪಿಸಿದ ನಾವದಗಿ ಅವರು ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಪೀಠವನ್ನು ಕೋರಿದರು. ಇದನ್ನು ಪರಿಗಣಿಸಿದ ಪೀಠ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಲಾಗಿದೆ ಎಂದು ಆದೇಶದಲ್ಲಿ ದಾಖಲಿಸಿ, ವಿಚಾರಣೆ ಮುಂದೂಡಿತು.

ಈ ವೇಳೆ ಅರ್ಜಿದಾರರ ಪರ ವಕೀಲರು, ಆಯೋಗದ ಮಧ್ಯಂತರ ವರದಿಯನ್ನು ನೀಡುವಂತೆ ಕೋರಿದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿ ವರಾಳೆ ಅವರು ಮೊದಲು ಮಧ್ಯಂತರ ವರದಿಯನ್ನು ನ್ಯಾಯಾಲಯ ಪರಿಶೀಲಿಸಬೇಕಿದೆ. ಅಗತ್ಯಬಿದ್ದರೆ ಅದನ್ನು ನಿಮಗೆ ನೀಡಲು ಅನುಮತಿಸುತ್ತೇವೆ ಎಂದು ಮೌಖಿಕವಾಗಿ ತಿಳಿಸಿದರು.

Follow Us:
Download App:
  • android
  • ios