ಆ್ಯಂಬಿಡೆಂಟ್ ಅವ್ಯವಹಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಚಿವ ಗಣಿ ದಣಿ ಜನಾರ್ದನ ರೆಡ್ಡಿ ಬಳಿ ಕೋಟಿ ಕೋಟಿ ಮೌಲ್ಯದ ಆಸ್ತಿ ಇದ್ದು ಇದನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಯತ್ನವನ್ನು ಸರ್ಕಾರ ಮಾಡಬೇಕು ಎಂದು ಎಸ್ ಆರ್ ಹಿರೇಮಠ್ ಹೇಳಿದ್ದಾರೆ. 

ನವದೆಹಲಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆಯಿಂದ 40,000 ಕೋಟಿ ರು. ಮೌಲ್ಯದ ಆಸ್ತಿ ಸಂಪಾದಿಸಿದ್ದು, ಈ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಧೈರ್ಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪ್ರದರ್ಶಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌.ಹಿರೇಮಠ ಆಗ್ರಹಿಸಿದ್ದಾರೆ. 

ದೆಹಲಿಯ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಓಬುಳಾಪುರಂ ಮೈನಿಂಗ್‌ ಕಂಪನಿ (ಓಎಂಸಿ), ಅಸೋಸಿಯೇಟೆಡ್‌ ಮೈನಿಂಗ್‌ ಕಂಪನಿ (ಎಎಂಸಿ)ಗಳ ಮೂಲಕ ಅಕ್ರಮ ಗಣಿಗಾರಿಕೆ, ಬೇಲೆಕೇರಿ ಅಕ್ರಮ ಅದಿರು ಸಾಗಣೆ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಪ್ರಮುಖ ಆರೋಪಿಯಾಗಿದ್ದಾರೆ. 

ಇದೀಗ ಆ್ಯಂಬಿಡೇಟ್‌ ಕಂಪನಿಗೆ ಸಂಬಂಧಿಸಿದ ಜಾರಿ ನಿರ್ದೇಶನಾಲಯ ಡೀಲ್ ಪ್ರಕರಣದಲ್ಲಿಯೂ ಅವರ ಹೆಸರು ಕೇಳಿಬಂದಿದೆ. ರೆಡ್ಡಿ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.