ತನಿಖೆಯನ್ನು ಯಾವ ರೀತಿಯಲ್ಲಿ ನಡೆಸಬೇಕು ಎಂಬುದರ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ವರದಿಗಳನ್ನು ಅಧ್ಯಯನ ನಡೆಸಿದ ಬಳಿಕ ತನಿಖೆಗೆ ವಹಿಸಲಾಗುವುದು. ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌. 

ವಿಧಾನಸಭೆ(ಜು.19): ಕೋವಿಡ್‌ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವ ಅಗತ್ಯ ಇದೆ. ಹೀಗಾಗಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಆಶ್ವಾಸನೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳವಾರ ಕಾಂಗ್ರೆಸ್‌ ಸದಸ್ಯ ಈಶ್ವರ್‌ ಪ್ರದೀಪ್‌, ಕೋವಿಡ್‌ ಅವ್ಯವಹಾರ ಕುರಿತು ಗಮನ ಸೆಳೆದ ವಿಚಾರಕ್ಕೆ ಉತ್ತರ ನೀಡಿದ ಅವರು, ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು. ಕೋವಿಡ್‌ ಉಪಕರಣ ಖರೀದಿ ಸೇರಿದಂತೆ ಇತರೆ ವಿಚಾರಗಳಲ್ಲಿ ಅಕ್ರಮ ನಡೆದಿರುವ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ. ಅಲ್ಲದೇ, ಕೆಲವು ಆರ್‌ಟಿಐ ಕಾರ್ಯಕರ್ತರು ಸಹ ಹಲವು ಮಾಹಿತಿಗಳನ್ನು ಇಲಾಖೆಗೆ ಒದಗಿಸಿದ್ದಾರೆ. ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯೂ ವರದಿಯೂ ಸಹ ನಮ್ಮ ಮುಂದಿದೆ. ಈ ಹಿನ್ನೆಲೆಯಲ್ಲಿ ಕೋವಿಡ್‌ ಅವ್ಯವಹಾರಗಳ ಬಗ್ಗೆ ತನಿಖೆಯ ಅಗತ್ಯ ಇದೆ ಎಂದು ಹೇಳಿದರು.

ಬಿಜೆಪಿಯಲ್ಲಿ ಜೆಡಿಎಸ್‌ ವಿಲೀನ ಮಾಡಲಿ: ಸಚಿವ ದಿನೇಶ್‌ ಗುಂಡೂರಾವ್‌

ತನಿಖೆಯನ್ನು ಯಾವ ರೀತಿಯಲ್ಲಿ ನಡೆಸಬೇಕು ಎಂಬುದರ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ವರದಿಗಳನ್ನು ಅಧ್ಯಯನ ನಡೆಸಿದ ಬಳಿಕ ತನಿಖೆಗೆ ವಹಿಸಲಾಗುವುದು. ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.