ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಬೊಮ್ಮಾಯಿಗೆ ಆಹ್ವಾನ
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಜ.6ರಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸುವಂತೆ ಅಧಿಕೃತವಾಗಿ ಆಹ್ವಾನ ನೀಡಿದರು.
ಬೆಂಗಳೂರು/ಹಾವೇರಿ (ಜ.02): ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಜ.6ರಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸುವಂತೆ ಅಧಿಕೃತವಾಗಿ ಆಹ್ವಾನ ನೀಡಿದರು. ಆಮಂತ್ರಣ ಸ್ವೀಕರಿಸಿ ಮಾತನಾಡಿದ ಸಿಎಂ, ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡದ ಹಾಗೂ ಕನ್ನಡಿಗರ ಅಸ್ಮಿತೆಯ ಹಬ್ಬವಾಗಬೇಕು.
ನಾಡಿನ ಎಲ್ಲ ಕನ್ನಡಿಗರು ಅಕ್ಷರ ಜಾತ್ರೆಯಲ್ಲಿ ಭಾಗವಹಿಸುವ ಮೂಲಕ ಸಮ್ಮೇಳನದ ರಂಗನ್ನು ಹೆಚ್ಚಿಸಬೇಕು ಎಂದು ಕರೆ ಕೊಟ್ಟರು. ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ -2022ನ್ನು ಮಂಡಿಸಲಾಗಿದ್ದು, ಈ ವಿಧೇಯಕ ಕುರಿತು ನಿರೀಕ್ಷಿತ ಮಟ್ಟದಲ್ಲಿ ಚರ್ಚೆಗೆ ಅವಕಾಶ ಸಿಕ್ಕಿಲ್ಲ. ಹಾಗಾಗಿ, ಪರಿಷತ್ತಿನ ಆಗ್ರಹದಂತೆ ಈ ವಿಧೇಯಕ ಜಾರಿ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಯತ್ನಿಸಲಾಗುವುದು ಎಂದರು.
ಪೊಲೀಸ್ ದಳಗಳ ನಡುವೆ ಸಮನ್ವಯ ಇರಲಿ: ಅಮಿತ್ ಶಾ
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಮಾತನಾಡಿ, ನಾಡಿನ ಸಮಸ್ತ ಕನ್ನಡಿಗರು ಹಾವೇರಿಯಲ್ಲಿ ನಡೆಯುವ ಅಕ್ಷರ ಜಾತ್ರೆಗೆ ಆಗಮಿಸಬೇಕು. ಅದರಂತೆ ಪರಿಷತ್ತಿನ ವತಿಯಿಂದ ನಾಡಿನ ಹಿರಿಯ ಸಾಹಿತಿಗಳು, ಲೇಖಕರು, ಹೋರಾಟಗಾರರು, ಸಂಘಟಕರು, ಜನಪದ ಹಾಗೂ ಸಾಂಸ್ಕೃತಿಕ ಲೋಕದ ದಿಗ್ಗಜರು, ರಾಜಕಾರಣಿಗಳು, ಜನಪ್ರತಿನಿಧಿಗಳು, ಎಲ್ಲ ಸಮಾಜದ ಮುಖಂಡರಿಗೆ ಗೌರವ ಪೂರ್ವಕವಾಗಿ ಆಹ್ವಾನ ನೀಡಲಾಗುತ್ತದೆ. ಸಮೇಳನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ತರಳಬಾಳು ಶ್ರೀಗಳಿಗೆ ಆಮಂತ್ರಣ: ಹಾವೇರಿಯಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜ. 6 ರಂದು ಗೋಷ್ಠಿ-1 ರ ಅಧ್ಯಕ್ಷತೆ ವಹಿಸಲಿರುವ ಸಿರಿಗೆರೆ ತರಳಬಾಳು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗೆ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಸಮ್ಮೇಳನದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ದಾವಣಗೆರೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎ.ಆರ್.ಉಜ್ಜನಪ್ಪ, ಜಿಲ್ಲಾ ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ, ರೇವಣಸಿದ್ಧಪ್ಪ ಅಂಗಡಿ, ಸಿ.ಜಿ.ಜಗದೀಶ್ ಕೂಲಂಬಿ, ಕೆ.ಸಿ.ಲಿಂಗರಾಜ್ ಆನೆಕೊಂಡ ಇದ್ದರು.
ರಾಜ್ಯಕ್ಕೆ ಅಮಿತ್ ಶಾ ಬಂದು ಹೋದ ಬೆನ್ನಲ್ಲೇ ಬೂತ್ ವಿಜಯ ಅಭಿಯಾನ ಘೋಷಿಸಿದ ಪ್ರಹ್ಲಾದ್ ಜೋಶಿ
ಕನ್ನಡ ರಥಕ್ಕೆ ಹೂ ಹಾರ ಹಾಕಿ ಪೂಜೆ, ಪುಷ್ಪ ನಮನ: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನಲೆಯಲ್ಲಿ ಪಟ್ಟಣಕ್ಕೆ ಆಗಮಿಸಿದ ಕನ್ನಡ ರಥವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು. ಪಟ್ಟಣಕ್ಕೆ ಆಗಮಿಸಿದ ಕನ್ನಡ ರಥದಲ್ಲಿನ ಕನ್ನಡತಾಯಿ ಭುವನೇಶ್ವರಿ ದೇವಿಗೆ ಹೂ ಹಾರ ಹಾಕಿ, ಪೂಜೆ ನೆರವೇರಿಸಿ, ಪುಷ್ಪ ನಮನ ಸಲ್ಲಿಸಿ ಸ್ವಾಗತಿಸಲಾಯಿತು. ನಂತರ ಪಟ್ಟಣದ ಮುಖ್ಯ ಬೀದಿಯಲ್ಲಿ ವಿವಿಧ ವಾಧ್ಯಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಯು.ಬಿ. ಬಣಕಾರ, ಹಾವೇರಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಪ್ರತಿ ಮನೆ ಮನೆಗಳಲ್ಲಿ ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸೋಣ, ಎಲ್ಲರೂ ನುಡಿ ಜಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ಕನ್ನಡ ಕಂಪನ್ನು ಮತ್ತಷ್ಟುಪಸರೊಸೋಣ ಎಂದರು.