ಬಾಗಲಕೋಟೆ ಜಿಲ್ಲೆಯ ಕರಡಿ ಗ್ರಾಮದ ಆರ್‌ಸಿಬಿ ಅಭಿಮಾನಿಗಳು ತಮ್ಮ ತಂಡದ ಗೆಲುವಿಗಾಗಿ ಬಸವಣ್ಣ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. 101 ತೆಂಗಿನಕಾಯಿ ಒಡೆದು 'ಈ ಬಾರಿ ಕಪ್ ನಮ್ದೇ' ಎಂಬ ಘೋಷಣೆಯೊಂದಿಗೆ ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರು (ಜೂ.3): ಇಂದು ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಹೈವೋಲ್ಟೇಜ್ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ, ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲ್ಲೂಕಿನ ಕರಡಿ ಗ್ರಾಮದ ಆರ್‌ಸಿಬಿ ಅಭಿಮಾನಿಗಳು ತಮ್ಮ ತಂಡದ ಗೆಲುವಿಗಾಗಿ ಬಸವಣ್ಣ ದೇವರ ಮೊರೆ ಹೋಗಿದ್ದಾರೆ.

ಅಭಿಮಾನಿಗಳು ದೇವರಿಗೆ 101 ತೆಂಗಿನಕಾಯಿಗಳನ್ನು ಒಡೆದು, ಆರ್‌ಸಿಬಿ ಕಪ್ ಎತ್ತಿ ಹಿಡಿಯಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. 'ಈ ಬಾರಿ ಕಪ್ ನಮ್ದೇ' ಎಂಬ ಘೋಷಣೆಯೊಂದಿಗೆ, ಗ್ರಾಮದ ಯುವಕರು ಮತ್ತು ಅಭಿಮಾನಿಗಳು ಒಟ್ಟಾಗಿ ಈ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ಪಂದ್ಯದ ಫಲಿತಾಂಶಕ್ಕಾಗಿ ಎಲ್ಲರ ಕಣ್ಣು ಟಿವಿ ಪರದೆಯತ್ತ!