ಬೆಂಗಳೂರು (ಸೆ.04): ನಾಲ್ವರು ಐಪಿಎಸ್‌ ಹಾಗೂ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

 ಆ್ಯಂಬಿಡೆಂಟ್‌ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿದ್ದ ಎಸ್‌.ಗಿರೀಶ್‌ ಅವರನ್ನು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. 

ಉಳಿದಂತೆ ಸಿ.ಕೆ.ಬಾಬಾ ಬೆಂಗಳೂರು ಈಶಾನ್ಯ ಡಿಸಿಪಿ, ಡಾ.ಭೀಮಾಶಂಕರ್‌ ಎಸ್‌.ಗುಳೇದ್‌ ಬೆಂಗಳೂರು ಸಿಐಡಿ ಬೆಂಗಳೂರು ಎಸ್‌ಪಿ ಹಾಗೂ ಡಾ.ಅನೂಪ್‌ ಶೆಟ್ಟಿಅವರನ್ನು ಕೆಎಸ್‌ಆರ್‌ಪಿ ಕಮಾಂಡೆಂಟ್‌ ಆಗಿ ವರ್ಗಾವಣೆ ಮಾಡಲಾಗಿದೆ. 

ಆರೋಪದ ಮಧ್ಯೆ 13 ಐಎಎಸ್ ಅಧಿಕಾರಿಗಳ ಎತ್ತಂಗಡಿ .

ಐಎಎಸ್‌ ಅಧಿಕಾರಿ ಆರ್‌. ಸ್ನೇಹಲ್‌ ಅವರನ್ನು ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರಾಗಿ, ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರನ್ನು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಲಾಗಿದೆ.