ರೋಹಿಣಿ ಸಿಂಧೂರಿ ಬಳಿಕ ಡಿ.ರೂಪಾಗೂ ಹುದ್ದೆ ನೀಡಿದ ಸರ್ಕಾರ: ಯಾವ ವಿಭಾಗದಲ್ಲಿ ಗೊತ್ತಾ?
ವೈಯಕ್ತಿಕ ಆರೋಪ-ಪ್ರತ್ಯಾರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹುದ್ದೆ ಇಲ್ಲದೆ ಇದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನೀಡಿದ ಮರುದಿನವೇ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೂ ಹುದ್ದೆ ದಯಪಾಲಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು (ಸೆ.15): ವೈಯಕ್ತಿಕ ಆರೋಪ-ಪ್ರತ್ಯಾರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹುದ್ದೆ ಇಲ್ಲದೆ ಇದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನೀಡಿದ ಮರುದಿನವೇ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೂ ಹುದ್ದೆ ದಯಪಾಲಿಸಿ ಸರ್ಕಾರ ಆದೇಶ ಹೊರಡಿಸಿದೆ. ರೂಪಾ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಗುರುವಾರ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ರೂಪಾ ಅವರಿಗೆ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಐಜಿಪಿ ಹುದ್ದೆಗೆ ಸರ್ಕಾರ ನಿಯೋಜಿಸಿದೆ. ಇನ್ನುಳಿದಂತೆ ಮಂಗಳೂರು ಆಯುಕ್ತ ಹುದ್ದೆಯಿಂದ ವರ್ಗಗೊಂಡಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಬೆಂಗಳೂರಿನ ಪೂರ್ವ ವಿಭಾಗ (ಸಂಚಾರ) ಡಿಸಿಪಿಯಾಗಿ ನೇಮಿಸಿದ ಸರ್ಕಾರವು, ಶಿವಪ್ರಕಾಶ್ ದೇವರಾಜ್ ಅವರಿಗೆ ಬೆಂಗಳೂರಿನ ದಕ್ಷಿಣ ವಿಭಾಗ (ಸಂಚಾರ) ಹುದ್ದೆ ನೀಡಿದೆ. ಬೆಂಗಳೂರು ಲೋಕಾಯುಕ್ತ ಎಸ್ಪಿ ಹುದ್ದೆಗೆ ಡಾ.ಕೋನಾ ವಂಶಿ ಕೃಷ್ಣ ಅವರನ್ನು ಸರ್ಕಾರ ನಿಯೋಜಿಸಿದೆ.
ಚೈತ್ರಾ ಕುಂದಾಪುರ ಡೀಲ್ ಪ್ರಕರಣಕ್ಕೆ ಟ್ವಿಸ್ಟ್: ಸಲೂನ್ ಮಾಲೀಕನಿಗೆ ಬೆದರಿಕೆ ಕರೆ
ರೋಹಿಣಿ ಸಿಂಧೂರಿಗೆ 6 ತಿಂಗಳ ಬಳಿಕ ಹುದ್ದೆ: ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶಿಸಿರುವ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿ ಡಿ.ರೂಪ ಅವರೊಂದಿಗಿನ ವಿವಾದದ ಬಳಿಕ ಯಾವುದೇ ಹುದ್ದೆ ತೋರಿಸದೆ ವರ್ಗಾವಣೆ ಮಾಡಿದ್ದ ರೋಹಿಣಿ ಸಿಂಧೂರಿ ಅವರಿಗೆ ಆರು ತಿಂಗಳ ನಂತರ ಕಡೆಗೂ ಹುದ್ದೆ ಕಲ್ಪಿಸಿದೆ. ಡಿ. ರೂಪಾ ಮತ್ತು ರೋಹಿಣಿ ಸಿಂಧೂರಿ ಅವರ ನಡುವಿನ ಸಂಘರ್ಷ ತಾರಕ್ಕೇರಿದ ಪರಿಣಾಮ ಕಳೆದ ಫೆಬ್ರವರಿ 21ರಂದು ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಆದರೆ, ಅವರಿಗೆ ಯಾವುದೇ ಹುದ್ದೆ ತೋರಿಸಿರಲಿಲ್ಲ. ಸದ್ಯ ರೋಹಿಣಿ ಸಿಂಧೂರಿ ಅವರಿಗೆ ಕರ್ನಾಟಕ ಗೆಜೆಟಿಯರ್ ಇಲಾಖೆ ಮುಖ್ಯ ಸಂಪಾದಕ ಹುದ್ದೆ ನೀಡಲಾಗಿದೆ.
ಉತ್ತರ ಭಾರತದ ಪಪ್ಪು ರಾಹುಲ್ ಗಾಂಧಿ, ದಕ್ಷಿಣದ ಪಪ್ಪು ಉದಯನಿಧಿ ಸ್ಟಾಲಿನ್: ಶ್ರೀರಾಮುಲು
ಇತರರ ವರ್ಗ: ಇನ್ನು, ಹುದ್ದೆ ನಿರೀಕ್ಷೆಯಲ್ಲಿದ್ದ ಪ್ರದೀಪ್ ಪಿ. ಅವರನ್ನು ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕ (ಸೋಷಿಯಲ್ ಆಡಿಟ್) ಹುದ್ದೆಗೆ, ಲತಾ ಕುಮಾರಿ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ, ಸಿ.ಎನ್.ಶ್ರೀಧರ ಅವರನ್ನು ಜವಳಿ ಇಲಾಖೆ ಆಯುಕ್ತ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ನಿರ್ದೇಶಕ ಹುದ್ದೆಗೆ, ಸಂಗಪ್ಪ ಅವರನ್ನು ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿ.ನ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ನಿಯೋಜಿಸಲಾಗಿದೆ. ಕೆಪಿಎಸ್ಸಿ ಕಾರ್ಯದರ್ಶಿಯಾಗಿದ್ದ ಸುರಲ್ಕರ್ ವಿಕಾಸ್ ಕಿಶೋರ್ ಅವರನ್ನು ಬಿಬಿಎಂಪಿಯ ರಾಜರಾಜೇಶ್ವರಿ ನಗರ ವಲಯ ಆಯುಕ್ತರಾಗಿ, ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾಗಿದ್ದ ಶ್ರೀರೂಪಾ ಅವರನ್ನು ಕರ್ನಾಟಕ ರಾಜ್ಯ ಮಿನರಲ್ ಕಾರ್ಪೊರೇಷನ್ ಲಿ.ನ ಕಾರ್ಯಕಾರಿ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.