ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದ ಮೂಲಕ ಹಿಂದಿ ಹೇರಿಕೆಗೆ ಮುಂದಾಗಿದೆ ಆರೋಪಿಸಿ ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತ್ರಿಭಾಷಾ ಸೂತ್ರವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. 

ಮಂಡ್ಯ (ಏ.23): ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದ ಮೂಲಕ ಹಿಂದಿ ಹೇರಿಕೆಗೆ ಮುಂದಾಗಿದೆ ಆರೋಪಿಸಿ ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತ್ರಿಭಾಷಾ ಸೂತ್ರವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಸಾಧ್ಯವೇ ಇಲ್ಲ ಎಂದು ಹೇಳುವ ಮೂಲಕ ಹಿಂದಿ ಹೇರಿಕೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ಸಮರ ಸಾರಿರುವುದು.

ಮಹಾರಾಷ್ಟ್ರದಲ್ಲಿ 1ರಿಂದ 5ನೇ ತರಗತಿವರೆಗೆ ಹಿಂದಿ ಕಡ್ಡಾಯ ಕಲಿಕೆಗೆ ಭಾರಿ ವಿರೋಧ ಬಂದ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರವು ಆದೇಶಕ್ಕೆ ತಡೆ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿರುವುದು ಭಾರೀ ಮಹತ್ವ ಪಡೆದುಕೊಂಡಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ದೊಡ್ಡಬಾಲ ಗ್ರಾಮದಲ್ಲಿ ಮಂಗಳವಾರ ನಡೆದ 14 ಕೂಟಗಳ ಬೀರದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಿದ್ದರಾಮಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಈಗ ದ್ವಿಭಾಷಾ ನೀತಿ ಜಾರಿಯಲ್ಲಿದೆ. ನಾವು ಮಾತೃ ಭಾಷೆ ಕನ್ನಡ ಮತ್ತು ಇಂಗ್ಲಿಷ್ ಮಾತ್ರ ಕಲಿಸುತ್ತೇವೆ. ಹಿಂದಿ ಹೇರಿಕೆಗೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇಲ್ಲ: ‘ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇಲ್ಲ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸುಳ್ಳು ಹೇಳುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲಪ್ರತಿ ಮುಖ್ಯಮಂತ್ರಿಯವರ ಬಳಿಯಿದೆ ಎಂಬ ಆರ್.ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅಶೋಕ್ ಅವರು ಯಾವತ್ತಾದರೂ ಸತ್ಯ ಹೇಳಿದ್ದಾರೆಯೇ?. 

ಡೈನಿಂಗ್‌ ಟೇಬಲ್‌ನಲ್ಲಿ ಕೂತು ಮೀನಿನೂಟ ಮಾಡುವಾಗ ಡಿಜಿಪಿಗೆ ಚಾಕು ಹಾಕಿದ್ದ ಪತ್ನಿ!

ಅವರು ಯಾವಾಗಲೂ ಸುಳ್ಳೇ ಹೇಳುವುದು. ಮೂಲಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಅಲ್ಲದೆ, ಈ ಸಂಬಂಧ ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ. ಆದರೆ, ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು. ಮುಸಲ್ಮಾನರು, ಹಿಂದುಳಿದವರಿಗೆ ಮಾತ್ರವಲ್ಲದೆ, ಎಲ್ಲಾ ಧರ್ಮ, ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು. ಅವರಿಗೆ ಸಾಮಾಜಿಕ, ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ. ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ ಎಂದರು.