Asianet Suvarna News Asianet Suvarna News

ಇಸ್ರೇಲ್‌ನಲ್ಲಿ ಸಿಲುಕಿರುವ ಹಾಸನದ 25ಕ್ಕೂ ಜನರನ್ನು ಕರೆತರಲು ಎಚ್‌ಡಿ ದೇವೇಗೌಡ ಪ್ರಯತ್ನ

ಕಳೆದ ಶನಿವಾರ ಪ್ಯಾಲೆಸ್ತೀನ ಹಮಾಸ್ ಉಗ್ರರು ಇಸ್ರೇಲ್ ಮೇಲೆ ಏಕಾಏಕಿ 5000ಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದ್ದಾರೆ. ಇದಕ್ಕೆ ಹಮಾಸ್ ಮೇಲೆ ಪ್ರತಿದಾಳಿ ನಡೆಸುವ ಮೂಲಕ ಇಸ್ರೇಲ್ ಯುದ್ಧ ಘೋಷಣೆ ಮಾಡಿದೆ. ಇಸ್ರೇಲ್-ಪ್ಯಾಲೆಸ್ತೀನ್ ರಣರಂಗವಾಗಿ ಮಾರ್ಪಾಟ್ಟಿದೆ. ಸಾವಿರಾರು ಜನರು ಸಾವನ್ನಪ್ಪಿದ್ದಾರೆ, ಬಾಂಬ್ ದಾಳಿಗೆ ನೂರಾರು ಕಟ್ಟಡಗಳು ನೆಲಕ್ಕುರುಳಿವೆ. 

Israel Hamas War HD Deve Gowda came to the rescue of Kannadigas rav
Author
First Published Oct 9, 2023, 8:59 PM IST

ಹಾಸನ (ಅ.9): ಕಳೆದ ಶನಿವಾರ ಪ್ಯಾಲೆಸ್ತೀನ ಹಮಾಸ್ ಉಗ್ರರು ಇಸ್ರೇಲ್ ಮೇಲೆ ಏಕಾಏಕಿ 5000ಕ್ಕೂ ಅಧಿಕ ರಾಕೆಟ್ ದಾಳಿ ನಡೆಸಿದ್ದಾರೆ. ಇದಕ್ಕೆ ಹಮಾಸ್ ಮೇಲೆ ಪ್ರತಿದಾಳಿ ನಡೆಸುವ ಮೂಲಕ ಇಸ್ರೇಲ್ ಯುದ್ಧ ಘೋಷಣೆ ಮಾಡಿದೆ. ಇಸ್ರೇಲ್-ಪ್ಯಾಲೆಸ್ತೀನ್ ರಣರಂಗವಾಗಿ ಮಾರ್ಪಾಟ್ಟಿದೆ. ಸಾವಿರಾರು ಜನರು ಸಾವನ್ನಪ್ಪಿದ್ದಾರೆ, ಬಾಂಬ್ ದಾಳಿಗೆ ನೂರಾರು ಕಟ್ಟಡಗಳು ನೆಲಕ್ಕುರುಳಿವೆ. 

ಈ ನಡುವೆ ಉದ್ಯೋಗ, ಪ್ರವಾಸಕ್ಕಾಗಿ ಇಸ್ರೇಲ್‌ಗೆ ತೆರಳಿದ್ದ ಭಾರತೀಯರು ಯುದ್ಧಭೂಮಿಯಲ್ಲಿ ಸಿಲುಕಿಕೊಂಡಿದ್ದಾರೆ. ಅದರಲ್ಲೂ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಸನ ಜಿಲ್ಲೆಯ ಕೆಲವರು ಇಸ್ರೇಲ್‌ನಲ್ಲಿ ಸಿಲುಕಿರುವುದು ತಿಳಿದುಬಂದಿದೆ. ಈ ಬಗ್ಗೆ ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದರು.

ಯಹೂದಿಗಳ ಭೂಮಿ ಧ್ವಂಸ ಮಾಡಲು ಹೊರಟ ಹಮಾಸ್‌, 'ನಿರ್ನಾಮ ಮಾಡ್ತೀವಿ..' ಎಂದು ಪ್ರತಿಜ್ಞೆ ಮಾಡಿದ ಇಸ್ರೇಲ್‌!

ಇಸ್ರೇಲ್‌ನಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ, ಚನ್ನರಾಯಪಟ್ಟಣ, ಬೇಲೂರಿನ ಸುಮಾರು 25ಕ್ಕೂ ಅಧಿಕ ಜನರು ಸಿಲುಕಿರುವುದು ಮಾಹಿತಿ ಸಿಕ್ಕಿದೆ. ಚನ್ನರಾಯಪಟ್ಟಣ ತಾಲ್ಲೂಕಿನ, ಡಿಂಕ, ಸಕಲೇಶಪುರ ತಾಲ್ಲೂಕಿನ, ಲಕ್ಕುಂದ, ಅಂಕಿಹಳ್ಳಿ, ಬೆಳಗೊಡು ಗ್ರಾಮದವರಾದ 

ಜಾನ್ಸನ್, ನವೀನ್, ಡೀನಾ ಡಿಸೋಜಾ, ಎಲಿಜಾ ಪಿಂಟೋ, ಅಂತೋನಿ ಡಿಸೋಜಾ, ಕೃಷ್ಣೇಗೌಡ ನರ್ಸಿಂಗ್ ಹಾಗೂ ಇತರೆ ಉದ್ಯೋಗ ಮಾಡುತ್ತಿರುವ ಹಾಸನ ಮೂಲದ ಹಲವರು ಜೆರುಸರಲೆಮ್, ತಲೈಯಿಯಲ್ಲಿ ನೆಲಸಿರುವ ಬಗ್ಗೆ ಮಾಹಿತಿ ಬಂದಿದೆ. ಇನ್ನು ಕೃಷ್ಣೇಗೌಡ ಹಾಸನ ಮೂಲದ ಡಿಂಕ ಗ್ರಾಮದ ವರಾಗಿದ್ದು ಸುಮಾರು ಇಪ್ಪತ್ತು ವರ್ಷಗಳಿಂದ ಇಸ್ರೇಲ್‌ನಲ್ಲಿ ಹೋಟೆಲ್ ಕೆಲಸ ಮಾಡಿಕೊಂಡು ನಡೆಸಿದ್ದಾರೆ. ನಿನ್ನೆ ತನ್ನ ಸಹೋದರ ಮಹದೇವ ಅವರ ಜೊತೆ ಫೋನ್‌ನಲ್ಲಿ ಮಾತನಾಡಿರುವ ಕೃಷ್ಣೇಗೌಡ. 

ಅವರೆಲ್ಲರೂ ಸುರಕ್ಷಿತವಾಗಿದ್ದಾರೆ. ಯುದ್ಧಪೀಡಿತ ಇಸ್ರೇಲ್‌ನಿಂದ ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಸದ್ಯ ಅಲ್ಲಿ ಸಿಲುಕಿರುವವರ ಹೆಸರು, ನೆಲಸಿರುವ ಸ್ಥಳದ ಮಾಹಿತಿ ಕಲೆಹಾಕಲಾಗುತ್ತಿದೆ. ಎಲ್ಲ ಮಾಹಿತಿ ಪಡೆದುಕೊಂಡು ಅವರನ್ನು ಕರೆತರಲು ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರಿಗೆ ರಾಜ್ಯ ಸರ್ಕಾರದಿಂದ ಹೆಲ್ಪ್‌ಲೈನ್

Follow Us:
Download App:
  • android
  • ios