ರಾಜ್ಯದಲ್ಲಿ ಹೊಸ ರೀತಿಯ ಕೃಷಿ ಪದ್ಧತಿ ಜಾರಿ

ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ಮುಂದಿನ ತಿಂಗಳು ಜಾರಿಗೊಳಿಸಲು ಕೃಷಿ ಇಲಾಖೆ ರೂಪರೇಷೆ ಸಿದ್ಧಪಡಿಸಿಕೊಂಡಿದೆ ಎಂದು ಕೃಷಿ ಸಚಿವ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದ್ದಾರೆ. 

Israel Model Farming System Begins From Next Month In Karnataka

ಬೆಂಗಳೂರು :  ರೈತರಿಗೆ ಪ್ರಯೋಜನವಾಗುವ ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ಮುಂದಿನ ತಿಂಗಳು ಜಾರಿಗೊಳಿಸಲು ಕೃಷಿ ಇಲಾಖೆ ರೂಪರೇಷೆ ಸಿದ್ಧಪಡಿಸಿಕೊಂಡಿದೆ ಎಂದು ಕೃಷಿ ಸಚಿವ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿನ ತಮ್ಮ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಸ್ರೇಲ್ ಮಾದರಿಯ ಕೃಷಿ ಪದ್ಧತಿ ಜಾರಿಗೊಳಿಸುವ ಸಂಬಂಧ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. 

ಇದಕ್ಕೆ ಪೂರಕವಾಗಿ ಕೃಷಿ ಇಲಾಖೆಯು  ಕಾರ್ಯನಿರತವಾಗಿದ್ದು, ಎಲ್ಲಾ ರೀತಿಯ ರೂಪರೇಷೆಗಳೊಂ ದಿಗೆ ವರದಿ ಸಿದ್ಧಪಡಿಸಲಾಗಿದೆ. ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ವರದಿಯನ್ನು 3 - 4 ದಿನದಲ್ಲಿ ಮಂಡಿಸಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿರುವ ಕೃಷಿ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರದ ಅಧೀನದಲ್ಲಿರುವ ಕೃಷಿ ಫಾರಂಗಳಲ್ಲಿ ಇಸ್ರೇಲ್ ಮಾದರಿಯ ವೈಜ್ಞಾನಿಕ ಕೃಷಿ ಪದ್ಧತಿ ಮತ್ತು
ಸಲಕರಣೆಗಳನ್ನು ಅಳವಡಿಸಲಾಗುವುದು. 

ಇದರ ಜತೆಗೆ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶನ ಮಾಡಿ ರೈತರಿಗೆ ಅಗತ್ಯ ಇರುವ ಮಾಹಿತಿಯನ್ನು ಒದಗಿಸಲಾಗುವುದು. ಇಸ್ರೇಲ್ ಮಾದರಿ ಕೃಷಿ ಪದ್ಧತಿಯು ಪರಿಣಾಮಕಾರಿ ಮತ್ತು ಲಾಭದಾಯಕ ಕೃಷಿ ಎಂದು ಪ್ರಖ್ಯಾತಿ ಪಡೆದಿದೆ. ರಾಜ್ಯ ಸರ್ಕಾರವು ನಾಲ್ಕು ಮಾದರಿಗಳನ್ನು ಆಯ್ಕೆ ಮಾಡಿಕೊಂಡು ಪ್ರಾಯೋಗಿಕವಾಗಿ ಜಾರಿಗೆ ತರಲು ಮುಂದಾಗಿದೆ ಎಂದರು.

ರಾಜ್ಯದ ರಿಂದ 300 ರೈತರನ್ನು ಗುಂಪುಗೂಡಿಸಿ ಅವರ ಜಮೀನಿನಲ್ಲಿ ಒಂದೇ ರೀತಿಯ ಬೆಳೆ ಬೆಳೆಯುವ ಪ್ರಸ್ತಾವನೆ ಇದೆ. ಇದರಿಂದ ಕೀಟಬಾಧೆ, ಪೋಷಕಾಂಶ ನಿರ್ವಹಣೆ, ಮಾರುಕಟ್ಟೆ ವ್ಯವಸ್ಥೆ ಸೇರಿದಂತೆ ಹಲವು ಸಮಸ್ಯೆಗಳು ಬಗೆಹರಿಯಲಿವೆ. ಕೆರೆ ಅಚ್ಚುಕಟ್ಟು ಪ್ರ ದೇಶದಲ್ಲಿ ರೈತರು ಬೆಳೆ ಬೆಳೆಯುತ್ತಿದ್ದಾರೆ. ಅಲ್ಲಿ ನೀರಿನ ಮಿತವ್ಯಯದ ಬಗ್ಗೆ ವೈಜ್ಞಾನಿಕ ಮಾಹಿತಿ ನೀಡಲಾಗುವುದು ಎಂದು ವಿವರಿಸಿದರು.

Latest Videos
Follow Us:
Download App:
  • android
  • ios