ಬೆಂಗಳೂರು [ಡಿ.11]:  ಆದಾಯ ತೆರಿಗೆ ಇಲಾಖೆ ದಾಳಿ ಪ್ರಕರಣ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಿದ್ದು, ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಡಿ.20ಕ್ಕೆ ಮುಂದೂಡಿದೆ.

ಪ್ರಕರಣದಿಂದ ಕೈ ಬಿಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಪ್ರಕರಣದ ಇತರೆ ಆರೋಪಿಗಳಾದ ಆಂಜನೇಯ ಮತ್ತು ಹನುಮಂತಯ್ಯ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವುದನ್ನು ನ್ಯಾಯಾಲಯಕ್ಕೆ ಗಮನಕ್ಕೆ ತರಲಾಯಿತು. ಮುಂದಿನ ವಾರ ವಿಚಾರಣೆ ಇರುವ ಕಾರಣ ಒಂದು ತಿಂಗಳ ವಿನಾಯಿತಿ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಯಿತು.

ಬಿಜೆಪಿ ಸರ್ಕಾರ ಸೇಫ್: BSY ಛಲದ ಬಗ್ಗೆ ಡಿಕೆಶಿ ಮೆಚ್ಚುಗೆ ಮಾತುಗಳು ವೈರಲ್..

ಒಂದು ತಿಂಗಳ ಕಾಲ ಕಾಲಾವಕಾಶ ಕೋರಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಾಲಯವು ಅಷ್ಟೊಂದು ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿ ವಿಚಾರಣೆಯನ್ನು ಡಿ.20ಕ್ಕೆ ಮುಂದೂಡಲಾಯಿತು. ಡಿ.20ರಂದು ಸಾಕ್ಷಿಗಳ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.