ಬೆಂಗ್ಳೂರಲ್ಲಿ ಐಟಿ ಅಧಿಕಾರಿಗಳ ರಾತ್ರಿ ಕಾರ್ಯಾಚರಣೆ: ಬಾಕ್ಸ್‌ಗಳಲ್ಲಿ ಕಂತೆ ಕಂತೆ ಹಣ ಪತ್ತೆ..!
ಏಕಕಾಲದಲ್ಲಿ ಆರ್ ಟಿ ನಗರದ ಎರಡು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಆತ್ಮಾನಂದ ಕಾಲೋನಿಯ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಲಾಗಿದೆ. ಫ್ಯಾಟ್‌ನಲ್ಲಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆ.

ಬೆಂಗಳೂರು(ಅ.13): ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ವೇಳೆ ಫ್ಲ್ಯಾಟ್‌ವೊಂದರಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ. ಹೌದು, ಒಂದಲ್ಲಾ.. ಎರಡಲ್ಲಾ.. ಬರೋಬ್ಬರಿ 25 ಬಾಕ್ಸ್ ಗಳಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಐನೂರು ಮುಖಬೆಲೆಯ ಕಂತೆ ಕಂತೆ ಹಣ ಪತ್ತೆಯಾಗಿದೆ.
ಭ್ರಷ್ಟರು ಕಾರಿನಲ್ಲಿ ಹಣ ಸಾಗಾಟ ಮಾಡಲು ತಯಾರಿ ನಡೆಸಿದ್ದರು ಎಂದು ತಿಳಿದು ಬಂದಿದೆ. ವಿಷಯ ಅರಿತ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ(ಗುರುವಾರ) ಸಂಜೆ 6ಗಂಟೆಗೆ ಪೊಲೀಸ್ ಸಿಬ್ಬಂದಿಗಳ ಭದ್ರತೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಆರ್ ಟಿ ನಗರದ ಎರಡು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಆತ್ಮಾನಂದ ಕಾಲೋನಿಯ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಲಾಗಿದೆ. ಫ್ಯಾಟ್‌ನಲ್ಲಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದೆ.
ಬೆಂಗಳೂರಿನ 15ಕ್ಕೂ ಹೆಚ್ಚು ಕಡೆ ಐಟಿ ದಾಳಿಗೂ, ರಾಜಸ್ತಾನ ಚುನಾವಣೆಗೂ ಲಿಂಕ್!
ಪತ್ತೆಯಾದ ಹಣದ ಒಟ್ಟಾರೆ ಮೊತ್ತವನ್ನ ಐಟಿ ಅಧಿಕಾರಿಗಳು ಎಣಿಕೆ ಮಾಡಿದ್ದಾರೆ ಅಂತ ತಿಳಿದು ಬಂದಿದೆ. ಎಷ್ಟು ಹಣ ಪತ್ತೆಯಾಗಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ. ಇದೇ ವೇಳೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ನಿವಾಸದ ಮೇಲೂ ಐಟಿ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.