Basavaraj Bommai: ರಾಷ್ಟ್ರೀಯ ಹೆದ್ದಾರಿ ಪಕ್ಕ ‘ಜಲಶಕ್ತಿ’ ಜಾರಿ

ರಾಜ್ಯದ ಎಲ್ಲ ರಾಷ್ಟ್ರೀಯ ಹೆದ್ದಾರಿಗಳ ಪಕ್ಕದಲ್ಲಿ ಜಲಶಕ್ತಿ ಯೋಜನೆ ಜಾರಿಗೊಳಿಸುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ಒದಗಿಸಲಾಗುವುದು. ಬೆಳಗಾವಿ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.

Jala Shakti Yojan alongside National Highway from Kittur to Belagavi CM Basavaraj Bommai gvd

ಬೆಳಗಾವಿ (ಮಾ.01): ರಾಜ್ಯದ ಎಲ್ಲ ರಾಷ್ಟ್ರೀಯ ಹೆದ್ದಾರಿಗಳ (National Highway) ಪಕ್ಕದಲ್ಲಿ ಜಲಶಕ್ತಿ ಯೋಜನೆ (Jala Shakti Yojan) ಜಾರಿಗೊಳಿಸುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ಒದಗಿಸಲಾಗುವುದು. ಬೆಳಗಾವಿ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು ಇದರಡಿ ಕಿತ್ತೂರಿನಿಂದ (Kittur) ಬೆಳಗಾವಿ (Belagavi) ಮೂಲಕ ಮಹಾರಾಷ್ಟ್ರ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸಂಪೂರ್ಣವಾಗಿ ಜಲಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಒಟ್ಟು .3972 ಕೋಟಿ ವೆಚ್ಚದ 238 ಕಿಮೀ ಉದ್ದದ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆಯಿಂದ ಆರಂಭಿಸಲಾಗುವ ಈ ಯೋಜನೆಯನ್ನು ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು. 

ಮಹಾರಾಷ್ಟ್ರದ ಧಾರ್ಮಿಕ ಸ್ಥಳಗಳಾದ ಪಂಢರಾಪುರ, ಶಿರಡಿ ಮತ್ತಿತರ ಧಾರ್ಮಿಕ ಸ್ಥಳಗಳನ್ನು ಕರ್ನಾಟಕ ರಾಜ್ಯದ ಧಾರ್ಮಿಕ ಸ್ಥಳಗಳ ಜತೆ ಜೋಡಿಸಲು ವಿನೂತನ ಯೋಜನೆಯನ್ನು ನಿತಿನ್‌ ಗಡ್ಕರಿ ಅವರು ರೂಪಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

Pulse Polio Drive in Karnataka: ಮಗುವಿಗೆ ಲಸಿಕೆ ಹಾಕಿ ಪೋಲಿಯೋ ಅಭಿಯಾನಕ್ಕೆ ಸಿಎಂ ಚಾಲನೆ

ಜಿಎಸ್‌ಟಿ ವಿನಾಯಿತಿ: ರಾಜ್ಯದಲ್ಲಿರುವ ಹೆದ್ದಾರಿಗಳು ಮತ್ತು ರಿಂಗ್‌ ರಸ್ತೆಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ಜಿಎಸ್‌ಟಿ ವಿನಾಯಿತಿ, ಭೂಸ್ವಾಧೀನ ಮತ್ತಿತರ ಸಹಕಾರವನ್ನು ರಾಜ್ಯ ಸರ್ಕಾರ ನೀಡಲಿದೆ. ರಸ್ತೆಗಳು ಅಭಿವೃದ್ಧಿ ಮಾತ್ರವಲ್ಲ ದೇಶದ ಭಾವೈಕ್ಯತೆಗೆ ಬೆಸುಗೆಯಾಗುವೆ ಎಂದರು.

ಏನಿದು ಜಲಶಕ್ತಿ ಯೋಜನೆ?: ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಬರುವ ನದಿ, ಹಳ್ಳ ಕೊಳ್ಳಗಳನ್ನು ಬಳಸಿಕೊಂಡು, ರಸ್ತೆ ಸಮೀಪದ ಹೊಲಗಳಿಗೆ ಕಾಲುವೆ, ಪೈಪ್‌ ಮೂಲಕ ನೀರು ಪೂರೈಸುವ ಯೋಜನೆ ಇದು. ಹನಿ ನೀರಾವರಿ, ಹೊಂಡಗಳನ್ನು ನಿರ್ಮಿಸಿ ಕೃಷಿಗೆ ನೀರು ಪೂರೈಸುವುದು ಸೇರಿದಂತೆ ಇನ್ನಿತರೆ ಯೋಜನೆಗಳನ್ನು ಜಾರಿಗೆ ತಂದು ರೈತರ ಆದಾಯವನ್ನು ಹೆಚಿಸಲಾಗುತ್ತದೆ.

ಅಲ್ಪಸಂಖ್ಯಾತರ ಅಭಿವೃದ್ಧಿಗೆ ವಿಶೇಷ ಕಾರ‍್ಯಕ್ರಮ: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಸಾಮಾಜಿಕ ನ್ಯಾಯದ ಜತೆ ಸಾಮಾಜಿಕ ಅಭಿವೃದ್ಧಿಯ ಗುರಿ ಸಾಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್‌ ಮೂಲಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಅಬುಲ್‌ ಕಲಾಂ ಅಜಾದ್‌ ಭವನವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಅಲ್ಪಸಂಖ್ಯಾತರ ಕೆಲ ಸಮುದಾಯಗಳು ಕಡು ಬಡತನದಲ್ಲಿದ್ದು, ಅವರ ಅಭಿವೃದ್ಧಿಗೆ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

Ambareesh ಸ್ಮಾರಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ!

ಬದಲಾವಣೆಯ ಯುಗದಲ್ಲಿ ಬದಲಾವಣೆಯ ವೇಗವನ್ನು ಅಳವಡಿಸಿಕೊಂಡು ಅಲ್ಪಸಂಖ್ಯಾತರು ಗುರಿಯನ್ನು ಸಾಧಿಸಬೇಕು ಮತ್ತು ಸಮಾಜದ ಮುಖ್ಯವಾಹಿನಿಗೆ ಬರಬೇಕು. 21ನೇ ಶತಮಾನ ಜ್ಞಾನದ ಶತಮಾನವಾಗಿದ್ದು, ಜಗತ್ತು ಬದಲಾವಣೆಯ ರೀತಿಯನ್ನು ಗ್ರಹಿಸಿ, ಮಕ್ಕಳನ್ನು ಸಿದ್ಧಪಡಿಸಬೇಕು. ಈ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರ ಮತ್ತು ಸಮಾಜ ಮಕ್ಕಳಿಗೆ ಸೂಕ್ತ ಅವಕಾಶಗಳನ್ನು ಮತ್ತು ಸವಲತ್ತುಗಳನ್ನು ಕಲ್ಪಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಸಹಕರಿಸಬೇಕು ಎಂದರು. 

ಮಕ್ಕಳ ವಿದ್ಯಾರ್ಜನೆ ವಿಚಾರದಲ್ಲಿ ಬಹಳ ಮುಕ್ತ ವಾತಾವರಣ ನಿರ್ಮಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಅವಕಾಶ ಕಲ್ಪಿಸುತ್ತದೆ. ಪ್ರಧಾನಿಯವರ ನೇತೃತ್ವದಲ್ಲಿ ನವಭಾರತದ ನಿರ್ಮಾಣಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬಹಳಷ್ಟುಅಧ್ಯಯನ ಮಾಡಿ ಜಾರಿಗೆ ತರಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಲಾಭವನ್ನು ಅಲ್ಪಸಂಖ್ಯಾತರು ಪಡೆಯಬೇಕು ಎಂದು ನುಡಿದರು.

Latest Videos
Follow Us:
Download App:
  • android
  • ios