Jana sahitya sammelana: ಹಾವೇರಿಗೆ ಪರ್ಯಾಯವಾಗಿ ಜ.8ಕ್ಕೆ ಬೆಂಗಳೂರಲ್ಲಿ ಜನ ಸಾಹಿತ್ಯ ಸಮ್ಮೇಳನ
ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಪರಂಪರೆ ಹಾಗೂ ಅಲ್ಪಸಂಖ್ಯಾತರ ಅವಗಣನೆಯ ಉದ್ದೇಶ ಹೊಂದಿದೆ ಎಂದು ಆರೋಪಿಸಿ, ಪರ್ಯಾಯವಾಗಿ ಸಮಾನ ಮನಸ್ಕ ಸಾಹಿತಿಗಳು ಮತ್ತು ಕನ್ನಡ ಪರ ಹೋರಾಟಗಾರರಿಂದ ಜ.8ರಂದು ನಗರದ ಕೆ.ಆರ್.ವೃತ್ತದಲ್ಲಿರುವ ಅಲುಮ್ನಿ ಅಸೋಸಿಯೇಷನ್ ಆವರಣದಲ್ಲಿ ‘ಜನ ಸಾಹಿತ್ಯ ಸಮ್ಮೇಳನ’ ಆಯೋಜಿಸಲಾಗಿದೆ.
ಬೆಂಗಳೂರು (ಜ.6) : ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಪರಂಪರೆ ಹಾಗೂ ಅಲ್ಪಸಂಖ್ಯಾತರ ಅವಗಣನೆಯ ಉದ್ದೇಶ ಹೊಂದಿದೆ ಎಂದು ಆರೋಪಿಸಿ, ಪರ್ಯಾಯವಾಗಿ ಸಮಾನ ಮನಸ್ಕ ಸಾಹಿತಿಗಳು ಮತ್ತು ಕನ್ನಡ ಪರ ಹೋರಾಟಗಾರರಿಂದ ಜ.8ರಂದು ನಗರದ ಕೆ.ಆರ್.ವೃತ್ತದಲ್ಲಿರುವ ಅಲುಮ್ನಿ ಅಸೋಸಿಯೇಷನ್ ಆವರಣದಲ್ಲಿ ‘ಜನ ಸಾಹಿತ್ಯ ಸಮ್ಮೇಳನ’ ಆಯೋಜಿಸಲಾಗಿದೆ.
ಸಂತ ಶಿಶುನಾಳ ಶರೀಫ ಮತ್ತು ಗುರು ಗೋವಿಂದಭಟ್ಟಸಭಾಂಗಣದಲ್ಲಿ ಬೆಳಗ್ಗೆ 9ಕ್ಕೆ ಕನ್ನಡ ಧ್ವಜಾರೋಹಣ ನೆರವೇರಲಿದ್ದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್, ಶಿವರಾಮೇಗೌಡ, ಬಿ.ಎ.ಜಗದೀಶ್ ಉಪಸ್ಥಿತರಿರುವರು. 9.30ಕ್ಕೆ ಬಂಡಾಯದ ಗೆರೆಗಳು: ವ್ಯಂಗ್ಯಚಿತ್ರ ಮತ್ತು ಪೋಸ್ಟರ್‌ಗಳ ಪ್ರದರ್ಶನ ನಡೆಯಿದ್ದು, ರಘುನಂದನ ಉದ್ಘಾಟಿಸುವರು.
Haveri: ಧ್ವಜಾರೋಹಣದ ಮೂಲಕ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ‘ಚಂಪಾ’ ವೇದಿಕೆಯಲ್ಲಿ ಜನಸಾಹಿತ್ಯ ಸಮ್ಮೇಳನದ ಉದ್ಘಾಟನೆ ನಡೆಯಲಿದ್ದು, ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಉದ್ಘಾಟಿಸುವರು. ಬಾನು ಮುಶ್ತಾಕ್ ಅಧ್ಯಕ್ಷತೆ ವಹಿಸುವರು. ಪುರುಷೋತ್ತಮ ಬಿಳಿಮಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜಾಣಗೆರೆ ವೆಂಕಟರಾಮಯ್ಯ, ಅಗ್ನಿ ಶ್ರೀಧರ್, ಜೆನ್ನಿ, ಅಕ್ಕೈಪದ್ಮಸಾಲಿ, ವಡ್ಡಗೆರೆ ನಾಗರಾಜಯ್ಯ ಉಪಸ್ಥಿತರಿರುವರು.
ಮಧ್ಯಾಹ್ನ 12.30ಕ್ಕೆ ‘ಸಾಹಿತ್ಯ, ಪ್ರಭುತ್ವ ಮತ್ತು ಬಹುತ್ವ ’ವಿಷಯ ಕುರಿತು ವಿಚಾರಗೋಷ್ಠಿ ನಡೆಯಲಿದೆ. ಡಾ.ಮಹಮ್ಮದ್ ಮುಸ್ತಾಫಾ ವಿಷಯ ಮಂಡನೆ ಮಾಡಲಿದ್ದಾರೆ. ಕನ್ನಡ ನಾಡು, ನುಡಿ-ಟಿಪ್ಪು ಕೊಡುಗೆಗಳು ಕುರಿತು ಟಿ.ಗುರುರಾಜ್ ವಿಷಯ ಮಂಡಿಸುವರು. ಲಿಂಗದೇವರು ಹಳೆಮನೆ ಸಂಪಾದಕತ್ವದ ಧೀರಟಿಪ್ಪು ಲಾವಣಿಗಳು ಮತ್ತು ಟಿ.ಗುರುರಾಜ್ ಬರೆದಿರುವ ‘ನಮ್ಮ ಟಿಪ್ಪು-ವದಂತಿ ಮತ್ತು ಸತ್ಯ ಸಂಗತಿ’ ಪುಸ್ತಕ ಬಿಡುಗಡೆ ನೆರವೇರಲಿದೆ.
Kannada Sahitya Sammelana: ಹಾವೇರಿ ಪುಣ್ಯಭೂಮಿ, ತಫೋಭೂಮಿ: ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ
ಮಧ್ಯಾಹ್ನ 1.30ಕ್ಕೆ ಆಹಾರ ಗೋಷ್ಠಿ ನಡೆಯಲಿದ್ದು ಆಹಾರದ ಮೇಲಿನ ರಾಜಕಾರಣ ಮತ್ತು ದೌರ್ಜನ್ಯ ಕುರಿತು ರಂಗನಾಥ ಕಂಟನಕುಂಟೆ, ಪಲ್ಲವಿ ಇಡೂರ್ ವಿಷಯ ಮಂಡಿಸುವರು. ಮಧ್ಯಾಹ್ನ 2ಕ್ಕೆ ನಡೆಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಬಂಜಗೆರೆ ಜಯಪ್ರಕಾಶ್ ವಹಿಸುವರು. ಮಧ್ಯಾಹ್ನ 3ಕ್ಕೆ ‘ಸೌಹಾರ್ದತೆ ಮತ್ತು ಕನ್ನಡತನ’ ಕುರಿತು ರಾಜೇಂದ್ರಚೆನ್ನಿ, ‘ಅಲ್ಪಸಂಖ್ಯಾತರು ಮತ್ತು ದಲಿತರ ಮೇಲಿನ ದಾಳಿ’ ಬಗ್ಗೆ ಮಾವಳ್ಳಿ ಶಂಕರ್, ‘ಸಾಹಿತ್ಯ ಲೋಕದ ಜವಾಬ್ದಾರಿಗಳ’ಕುರಿತು ಮುನೀರ್ ಕಾಟಿಪಾಳ್ಯ, ‘ಕನ್ನಡವನ್ನು ಬೆಳಗಿಸಿದ ಕ್ರೈಸ್ತ ಮಿಷನರಿಗಳು’ ಕುರಿತು ಡಾ.ಕುಮಾರಸ್ವಾಮಿ ವಿಷಯ ಮಂಡಿಸುವರು. ಸಂಜೆ 5ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಡಾ.ಜಿ.ರಾಮಕೃಷ್ಣ ಅಧ್ಯಕ್ಷತೆ ವಹಿಸುವರು. ಡಾ.ಕೆ.ಮರುಳಸಿದ್ದಪ್ಪ ಸಮಾರೋಪ ಭಾಷಣ ಮಾಡಲಿದ್ದಾರೆ.