Asianet Suvarna News Asianet Suvarna News

ಮಕ್ಕಳಲ್ಲಿ ಹೆಚ್ಚುತ್ತಿರುವ ಮೆದುಳು ಜ್ವರ: 10 ಜಿಲ್ಲೆಗಳಲ್ಲಿ ಜಪಾನೀಸ್‌ ಎನ್‌ಸೆಫಲೈಟಿಸ್‌ ಲಸಿಕೆ ಅಭಿಯಾನ

ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ರಾಮನಗರ, ತುಮಕೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಈ ಜೆಇ ಲಸಿಕೆ ಅಭಿಯಾನ 

Japanese Encephalitis Vaccination Campaign in 10 Districts in Karnataka grg
Author
First Published Nov 30, 2022, 12:00 PM IST

ಬೆಂಗಳೂರು(ನ.30):  ಜಪಾನೀಸ್‌ ಎನ್‌ಸೆಫಲೈಟಿಸ್‌ (ಜೆಇ) ಲಸಿಕಾ ಅಭಿಯಾನವನ್ನು ಇದೇ ಡಿಸೆಂಬರ್‌ನಿಂದ ಮೂರು ವಾರಗಳ ಕಾಲ 10 ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌ ತಿಳಿಸಿದರು. ಅವರು ಸೋಮವಾರ ವಿಕಾಸಸೌಧದಲ್ಲಿ ಈ ಲಸಿಕೆ ಅಭಿಯಾನ ಕುರಿತು ಹಮ್ಮಿಕೊಳ್ಳಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು.

ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ರಾಮನಗರ, ತುಮಕೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಈ ಜೆಇ ಲಸಿಕೆ ಅಭಿಯಾನವನ್ನು 1 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಹಮ್ಮಿಕೊಳ್ಳಲಾಗಿದೆ.

ಕೋಲಾರ ಜಿಲ್ಲೆಯಲ್ಲಿ ಮೆದುಳು ಜ್ವರ ಪತ್ತೆ: ಆತಂಕದಲ್ಲಿ ಜನತೆ..!

ಈ ಅಭಿಯಾನದಲ್ಲಿ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ನಗರಾಭಿವೃದ್ಧಿ, ಕಾರ್ಮಿಕ, ವೈದ್ಯಕೀಯ ಶಿಕ್ಷಣ, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಇವುಗಳು ಸಮನ್ವಯ ಸಾಧಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.
 

Follow Us:
Download App:
  • android
  • ios