4 ದಿನದಲ್ಲಿ ಜಾರಕಿಹೊಳಿ ಬಿಜೆಪಿಗೆ? ಎಷ್ಟು ಮಂದಿ ಶಾಸಕರಿದ್ದಾರೆ ಹಿಂದೆ?

https://static.asianetnews.com/images/authors/b348a094-0bef-5801-a1f6-61e57071185f.jpg
First Published 11, Sep 2018, 7:35 AM IST
Jarakiholi may join BJP in four days
Highlights

ರಾಜ್ಯ ರಾಜಕೀಯದಲ್ಲಿ ಏನೇನೋ ಆಗುತ್ತಿದೆ. ಕಾಂಗ್ರೆಸ್ ಒಳ ಜಗಳದಿಂದಲೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಉರುಳುವ ಭೀತಿ ಎದುರಾಗಿದ್ದು, ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ಜಾರಕಿಹೊಳಿ ಬ್ರದರ್ಸ್ ನಿರ್ಧಾರದ ಮೇಲೆ ರಾಜ್ಯ ರಾಜಕೀಯದ ಭವಿಷ್ಯ ನಿಂತಿದೆ.

ಬೆಂಗಳೂರು (ಸೆ.11): ಬರುವ ಮೂರ್ನಾಲ್ಕು ದಿನಗಳಲ್ಲಿ ಸರ್ಕಾರ ಬದಲಾವಣೆ ಸಂಬಂಧ ಮಹತ್ತರ ಬದಲಾವಣೆ ನಡೆಯಲಿದೆ ಎಂಬ ಗುಸುಗುಸು ಬಿಜೆಪಿ ಪಾಳೆಯದಲ್ಲಿ ತೀವ್ರವಾಗಿದೆ.

ಸಚಿವ ರಮೇಶ್ ಜಾರಕಿಹೊಳಿ ಅವರು ಸೋಮವಾರ ನಗರಕ್ಕೆ ಆಗಮಿಸಿದ್ದು, ತಮ್ಮ ಮುಂದಿನ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರೊಂದಿಗೆ ಚರ್ಚಿಸಿ ಪ್ರಮುಖ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಜಾರಕಿಹೊಳಿ ಬ್ರದರ್ಸ್‌ಗೆ ಕೆಪಿಸಿಸಿ ಪಟ್ಟ

ತಮ್ಮ ಬೆಂಬಲಿಗ ಶಾಸಕರೊಂದಿಗೆ ಕಾಂಗ್ರೆಸ್ ತೊರೆಯಲು ಮನಸ್ಸು ಮಾಡಿರುವ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ನಾಯಕರೊಂದಿಗೆ ನಡೆಸುವ ಮಾತುಕತೆ ಯಶಸ್ವಿಯಾದಲ್ಲಿ ತೀರ್ಮಾನ ಪ್ರಕಟಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ. ಇದಕ್ಕೆ ಪೂರಕವಾಗಿ ಜಾರಕಿಹೊಳಿ ಸಹೋದರರೊಂದಿಗೆ ಸಂಪರ್ಕದಲ್ಲಿರುವ ಬಿಜೆಪಿಯ ಹಿರಿಯ ಮುಖಂಡ ಬಿ.ಶ್ರೀರಾಮುಲು ಅವರು ಸೋಮವಾರ ಬೆಂಗಳೂರಿನಲ್ಲೇ ಇದ್ದರು. ಜೊತೆಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಇತರ ಪೂರ್ವನಿಗದಿತ ಕಾರ್ಯಕ್ರಮಗಳನ್ನು ಬದಿಗೊತ್ತಿ ನಗರದಲ್ಲೇ ವಾಸ್ತವ್ಯ ಮುಂದು ವರೆಸಿದ್ದು ಅನುಮಾನಕ್ಕೆ ಕಾರಣವಾಗಿದೆ. ಆದರೆ, ಈವರೆಗೂ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಬರುವುದು ಅಂತಿಮವಾಗಿಲ್ಲವಾದರೂ ವದಂತಿಯಂತೂ ದಟ್ಟವಾಗಿ ಹಬ್ಬಿದೆ. ಒಂದು ವೇಳೆ ರಮೇಶ್ ಬಿಜೆಪಿಗೆ ಆಗಮಿಸುವುದು ನಿರ್ಧಾರವಾದಲ್ಲಿ ಎಷ್ಟು ಜನ ಶಾಸಕರು ಅವರೊಂದಿಗೆ ಕೈಜೋಡಿಸುತ್ತಾರೆ ಎಂಬುದೂ ಕುತೂಹಲಕರವಾಗಿದೆ.

ಜಾರಕಿಹೊಳಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ತೆರಳಿದ್ದ ಯಡಿಯೂರಪ್ಪ ಅವರು ದಿಢೀರನೆ ಬೆಂಗಳೂರಿಗೆ ವಾಪಸಾಗಿದ್ದು ಮತ್ತು ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ಬಂದ್ ಆಚರಿಸಿದರೂ ಅದನ್ನು ಲೆಕ್ಕಿಸದೆ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ್ದು ನಾನಾ ತರಹದ ವದಂತಿಗಳಿಗೆ ಎಡೆ ಮಾಡಿಕೊಟ್ಟಿರುವುದಂತೂ ನಿಜ.

loader