Asianet Suvarna News Asianet Suvarna News

ಜಯಪ್ರಕಾಶ್ ಹೆಗ್ಡೆ, ಇಬ್ಬರು ಬಿಜೆಪಿ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ!

ಇತ್ತೀಚಿನವರೆಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕೆ ಜಯಪ್ರಕಾಶ್ ಹೆಗ್ಡೆ ಮತ್ತು ಇಬ್ಬರು ಮಾಜಿ ಶಾಸಕರಾದ ಬಿಎಂ ಸುಕುಮಾರ್ ಶೆಟ್ಟಿ ಮತ್ತು ಎಂಪಿ ಕುಮಾರಸ್ವಾಮಿ ಅವರು ಮಂಗಳವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು

Jayaprakash Hegde and two BJP former MLAs join Congress today rav
Author
First Published Mar 12, 2024, 11:19 PM IST

ಬೆಂಗಳೂರು (ಮಾ.12): ಇತ್ತೀಚಿನವರೆಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕೆ ಜಯಪ್ರಕಾಶ್ ಹೆಗ್ಡೆ ಮತ್ತು ಇಬ್ಬರು ಮಾಜಿ ಶಾಸಕರಾದ ಬಿಎಂ ಸುಕುಮಾರ್ ಶೆಟ್ಟಿ ಮತ್ತು ಎಂಪಿ ಕುಮಾರಸ್ವಾಮಿ ಅವರು ಮಂಗಳವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಮಾಜಿ ಶಾಸಕ, ಸಂಸದ ಮತ್ತು ಸಚಿವ ಜಯಪ್ರಕಾಶ್ ಹೆಗ್ಡೆ ಅವರು ಫೆಬ್ರವರಿ 29 ರಂದು "ಜಾತಿ ಗಣತಿ" ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದರು.

ಜಯಪ್ರಕಾಶ್ ಹೆಗ್ಡೆ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

ನಗರದಲ್ಲಿ ನೀರಿನ ಕೊರತೆ ಇಲ್ಲ ಎಂದ ಡಿಕೆಶಿ; ಇತ್ತ ಬೆಳಗಿನ ಟಾಯ್ಲೆಟ್‌ಗೂ ನೀರಿಲ್ಲದೆ ಬೆಂಗಳೂರು ತೊರೆಯುತ್ತಿದ್ದಾರೆ ಟೆಕ್ಕಿಗಳು!

ಹೆಗ್ಡೆ ಅವರು ಈ ಹಿಂದೆ ಬಿಜೆಪಿಯಲ್ಲಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈ ಹಿಂದೆ 2009 ಮತ್ತು 2014ರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು. ಉಡುಪಿ- ಚಿಕ್ಕಮಗಳೂರು ಸಂಸದರಾಗಿದ್ದ ಸದಾನಂದ ಗೌಡ ಅವರು ಅಚಾನಕ್ ಆಗಿ ಸಿಎಂ ಆದರು. ಈ ಸಂದರ್ಭದಲ್ಲಿ ಅವರು ರಾಜೀನಾಮೆ ನೀಡಿದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ನಿಂದ ಸಂಸದರಾಗಿ ಆಯ್ಕೆ ಆದರು. ಆ ಬಳಿಕ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅವರನ್ನು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಇನ್ನು ಬಿಜೆಪಿಯ ಇಬ್ಬರು ಮಾಜಿ ಶಾಸಕರಾದ ಬಿ ಎಂ ಸುಕುಮಾರ್ ಶೆಟ್ಟಿ ಮತ್ತು ಮೂರು ಬಾರಿ ಮೂಡಿಗೆರೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಎಂಪಿ ಕುಮಾರಸ್ವಾಮಿ ಅವರು ಸಹ ಇಂದು ಕಾಂಗ್ರೆಸ್ ಸೇರಿದ್ದಾರೆ.

News Hour:ಕರ್ನಾಟಕದ 19 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಫೈನಲ್‌!

2023ರ ವಿಧಾನಸಭಾ ಚುನಾವಣೆಯಲ್ಲಿ ಈ ಇಬ್ಬರಿಗೂ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಕುಮಾರಸ್ವಾಮಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮೂಡಿಗೆರೆಯಿಂದ ಜೆಡಿಎಸ್‌ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ, ಇಂಧನ ಸಚಿವ ಕೆ ಜೆ ಜಾರ್ಜ್ ಸಮ್ಮುಖದಲ್ಲಿ ಈ ಮೂವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

Follow Us:
Download App:
  • android
  • ios