ಬೆಂಗಳೂರು, (ಮಾ.23) : ರಾಜ್ಯದ ಅನೇಕ ಪ್ರಮುಖ ರಾಜಕಾರಣಿಗಳು ಕೊರೋನಾ ಲಸಿಕೆಯನ್ನು ಪಡೆದಿದ್ದಾರೆ. ಅದರಂತೆ ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಸಹ ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡರು.

ಇಂದು (ಮಂಗಳವಾರ) ಬೆಂಗಳೂರಿನ ಜಯದೇವ ಹೈದ್ರೋಗ ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿಯವರು, ಕೊರೋನಾ ಮೊದಲ ಡೋಸ್ ವ್ಯಾಕ್ಸಿನ್ ಪಡೆದರು.  ಈ ವೇಳೆ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಉಪಸ್ಥಿತರಿದ್ದರು.

ಕೊರೋನಾ ಲಸಿಕೆಯಿಂದ ಎಷ್ಟು ಸಮಯ ರಕ್ಷಣೆ? ಏಮ್ಸ್ ವೈದ್ಯರು ಕೊಟ್ಟ ಉತ್ತರವಿದು!

ಅಂದಹಾಗೇ ಇತ್ತೀಚೆಗಷ್ಟೇ ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಬಿಸಿ ಪಾಟೀಲ್, ಸುಧಾಕರ್ ಸೇರಿದಂತೆ ಅನೇಕ ಸಚಿವರು, ಶಾಸಕರು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದರು.

ಇನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಲಸಿಕೆ ಪಡೆದುಕೊಂಡಿದ್ದರು. ಈ ಮೂಲಕ ಎಲ್ಲರಿಗೂ ಕೊರೋನಾ ಲಸಿಕೆ ಪಡೆದುಕೊಳ್ಳಲು ಯಾವುದೇ ಭಯ ಬೇಡ ಎನ್ನುವ ಸಂದೇಶ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.

ಬಹುಮುಖ್ಯವಾಗಿ ದೇಶದಲ್ಲಿ ಕೊರೋನಾ 2ನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಏಪ್ರಿಲ್​ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ನಿರ್ಧರಿಸಿದೆ. ಇಂದು (ಮಂಗಳವಾರ) ಕ್ಯಾಬಿನೆಟ್​ ಸಭೆಯಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರವನ್ನ ಕೈಗೊಂಡಿದೆ.