ರೋಹಿಣಿ ವಿರುದ್ಧ ಮತ್ತೆ ಜೆಡಿಎಸ್‌ ವರಾತ : ಮತ್ತಷ್ಟು ಆರೋಪ

  • ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಪ್ರಸ್ತಾವನೆ ಮಂಡಿಸಲು ಮನವಿ
  •  ಹಕ್ಕುಚ್ಯುತಿ ಪ್ರಸ್ತಾವನೆ ಮಂಡಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್‌ನ ಸದಸ್ಯರು ಸದನದಲ್ಲಿ ಕೆಲಕಾಲ ಧರಣಿ 
JDS Protest against IAS rohini  sinduri snr

ವಿಧಾನಸಭೆ (ಸೆ.16): ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಪ್ರಸ್ತಾವನೆ ಮಂಡಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್‌ನ ಸದಸ್ಯರು ಸದನದಲ್ಲಿ ಕೆಲಕಾಲ ಧರಣಿ ನಡೆಸಿದರು. 

ಅಲ್ಲದೇ, ಶಾಸಕ ಸಾ.ರಾ.ಮಹೇಶ್‌ ಹಕ್ಕುಚ್ಯುತಿ ಪ್ರಸ್ತಾವನೆಗೆ ಅವಕಾಶ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದರು. ಬುಧವಾರ ಶೂನ್ಯವೇಳೆ ಬಳಿಕ ವಿಷಯ ಪ್ರಸ್ತಾಪಿಸಿದ ಸಾ.ರಾ.ಮಹೇಶ್‌, ಬ್ಯಾಗ್‌ ಖರೀದಿ ಸೇರಿದಂತೆ ಮೈಸೂರಿನ ಹಿಂದಿನ ಜಿಲ್ಲಾಧಿಕಾರಿಗಳು ದೊಡ್ಡಮಟ್ಟದಲ್ಲಿ ಹಣ ದುರುಪಯೋಗ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಿದ್ದಾರೆ. 

ಕೊಟ್ಯಂತರ ರು. ಹಗರಣ : ಸಿಂಧೂರಿ ವಿರುದ್ಧ ಸಾರಾ ಮತ್ತೊಂದು ಗಂಭೀರ ಆರೋಪ

ಎಲ್ಲವನ್ನೂ ಹೇಳಬೇಕಾಗಿದೆ. ದಾಖಲೆಗಳನ್ನು ತೆಗೆದುಕೊಂಡು ಬಂದಿದ್ದೇವೆ. ಈಗಲೇ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ ಅಥವಾ ಶುಕ್ರವಾರ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದರು.

 ಇದಕ್ಕೆ ಒಪ್ಪದ ಮಹೇಶ್‌ ಬಾವಿಗಿಳಿದು ಧರಣಿ ಆರಂಭಿಸಿದರು. ಅವಕಾಶ ನೀಡುವುದಾಗಿ ಹೇಳಿದ್ದರೂ ಜೆಡಿಎಸ್‌ ಸದಸ್ಯರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಸ್ಪೀಕರ್‌ ಹೇಳಿದ ಬಳಿಕ ಧರಣಿ ಕೈಬಿಟ್ಟರು.

Latest Videos
Follow Us:
Download App:
  • android
  • ios