ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಸಿಬಿಐಗೆ ವಹಿಸಿ: ರಾಜ್ಯಪಾಲರಿಗೆ ಜೆಡಿಎಸ್ ಮೊರೆ
ರಾಜ್ಯಪಾಲರು ಸಾಂವಿಧಾನಿಕ ಹುದ್ದೆಯಲ್ಲಿರುವುದರಿಂದ ರಾಜ್ಯ ಸರ್ಕಾರಕ್ಕೆ ಕೆಲವು ಸಂದರ್ಭದಲ್ಲಿ ಸೂಕ್ತ ನಿರ್ದೇಶನಗಳನ್ನು ನೀಡುವ ಅಧಿಕಾರ ಇದೆ. ಅಲ್ಲದೆ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತಾಗಿ ರಾಷ್ಟ್ರಪತಿಗಳಿಗೆ ವರದಿ ನೀಡುವ ಅಧಿಕಾರವಿದೆ: ಜೆಡಿಎಸ್
ಬೆಂಗಳೂರು(ಮೇ.10): ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನಿಯೋಜಿಸಿರುವ ಎಸ್ ಐಟಿ ಪಾರದರ್ಶಕವಾಗಿ ತನಿಖೆ ನಡೆಸದ ಕಾರಣ ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾಗೊಳಿಸು ವಂತೆ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಬೇಕು ಎಂದು ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿದೆ. ಈ ಸಂಬಂಧ ಗುರುವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಮುಖಂಡರ ನಿಯೋಗವು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತು.
ರಾಜ್ಯಪಾಲರು ಸಾಂವಿಧಾನಿಕ ಹುದ್ದೆಯಲ್ಲಿರುವುದರಿಂದ ರಾಜ್ಯ ಸರ್ಕಾರಕ್ಕೆ ಕೆಲವು ಸಂದರ್ಭದಲ್ಲಿ ಸೂಕ್ತ ನಿರ್ದೇಶನಗಳನ್ನು ನೀಡುವ ಅಧಿಕಾರ ಇದೆ. ಅಲ್ಲದೆ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತಾಗಿ ರಾಷ್ಟ್ರಪತಿಗಳಿಗೆ ವರದಿ ನೀಡುವ ಅಧಿಕಾರವಿದೆ. ಲೋಕಸಭೆ ಚುನಾವಣೆಯ ವೇಳೆಯಲ್ಲಿಯೇ ಹಾಸನದಲ್ಲಿ ಸಂಸದ ಪ್ರಜ್ವಲ್‌ಗೆ ಸಂಬಂಧಿಸಿದ್ದು ಎನ್ನಲಾಗಿರುವ ವಿಡಿಯೋಗಳನ್ನು ಹರಿಯಬಿಡಲಾಗಿತ್ತು.
ಪೆನ್ ಡ್ರೈವ್ ಕೇಸಲ್ಲಿ ಎಚ್ಚಿಕೆ ಹೋರಾಡಲಿ: ಡಿ.ಕೆ.ಶಿವಕುಮಾರ್
ಇವುಗಳು ಮಹಿಳೆಯರ ಘನತೆಗೆ ಕುಂದು ಉಂಟು ಮಾಡುವ ವಿಡಿಯೋಗಳಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಈ ಬಗ್ಗೆ ವಿಶೇಷ ತನಿಖಾ ತಂಡ ರಚನೆ ಮಾಡುವಂತೆ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಯಿತು. ಈ ವರದಿ ಆಧರಿಸಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ ಎಂದು ಉಲ್ಲೇಖಿಸಲಾಗಿದೆ.
ಎಸ್‌ಐಟಿ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಪ್ರಜ್ವಲ್ ಅವರ ಕಾರು ಚಾಲಕನಾಗಿದ್ದ ಕಾರ್ತಿಕ್ ಎನ್ನುವ ವ್ಯಕ್ತಿ ವಿಡಿಯೋ ಹಾಗೂ ಚಿತ್ರಗಳನ್ನು ಪ್ರಜ್ವಲ್ ಅವರ ಮೊಬೈಲ್ ಕದ್ದು ಸೋರಿಕೆ ಮಾಡಿದ್ದಾರೆ. ಕಾರ್ತಿಕ್ ಮತ್ತು ಡಿ.ಕೆ.ಶಿವಕುಮಾರ್ ಸಂಚು ರೂಪಿಸಿದ್ದರು. ಆದರೆ, ಕಾರ್ತಿಕ್‌ನನ್ನು ಬಂಧಿಸಿಲ್ಲ ಎಂದು ದೂರಲಾಗಿದೆ. ಅಶ್ಲೀಲ ವಿಡಿಯೋಗಳಿರುವ ಸುಮಾರು 25 ಸಾವಿರಕ್ಕೂ ಹೆಚ್ಚು ಪೆನ್‌ಡ್ರೈವ್‌ಗಳ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರ ನೇರ ಪಾತ್ರವಿದೆ. ವಕೀಲ ದೇವರಾಜ್ ಗೌಡ ಹಾಗೂ ಶಿವಕುಮಾರ್ ನಡುವೆ ನಡೆದಿರುವ ಮೊಬೈಲ್ ಸಂಭಾಷಣೆಯಲ್ಲಿಪೆನ್‌ಡ್ರೈವ್ ಸಂಚುಬಹಿರಂಗವಾಗಿದೆ. ದೇವೇಗೌಡ, ಕುಮಾರಸ್ವಾಮಿ, ಜೆಡಿಎಸ್ ವರ್ಚಸ್ಸು ಹಾಳು ಮಾಡಲು ಎಸ್‌ಐಟಿಯನ್ನು ಬಳಕೆ ಮಾಡಿಕೊಳ್ಳ ಲಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.