Asianet Suvarna News Asianet Suvarna News

ಪತ್ರಕರ್ತರಿಗೆ ತಲಾ 10 ಸಾವಿರ : ಸಿಎಂಗೆ ಸಂಘ ಮನವಿ

  • ಕೊರೋನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೆರವಾಗಲು ಮನವಿ
  • ಪ್ಯಾಕೇಜ್‌ನಲ್ಲಿ ಸೇರಿಸಿ ತಲಾ 10 ಸಾವಿರ ರು. ನೆರವು ನೀಡಬೇಕೆಂದು ಸಿಎಂಗೆ ಮನವಿ
  • ಪತ್ರಿಕಾ ವಿತರಕರು ಮತ್ತು ಕೇಬಲ್‌ ಟಿವಿ ಆಪರೇಟರ್ಸ್‌ಗಳಿಗೆ ಕೋವಿಡ್‌ ಲಸಿಕೆಗೆ ಆಗ್ರಹ
Journalists Association Demands CM to Provide Special Package snr
Author
Bengaluru, First Published May 27, 2021, 7:33 AM IST

ಬೆಂಗಳೂರು(ಮೇ.27): ಕೊರೋನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಪತ್ರಕರ್ತರನ್ನು ಪ್ಯಾಕೇಜ್‌ನಲ್ಲಿ ಸೇರಿಸಿ ತಲಾ 10 ಸಾವಿರ ರು. ನೆರವು ನೀಡಬೇಕು. ಕೊರೋನಾ ಸೋಂಕಿನಿಂದ ಮೃತಪಟ್ಟಪತ್ರಕರ್ತ ಕುಟುಂಬಕ್ಕೆ ತಲಾ 5 ಲಕ್ಷ ರು. ನೆರವು ನೀಡಬೇಕು ಎಂದು ಮನವಿ ಮಾಡಲಾಗಿದೆ. 

ಪತ್ರಿಕಾ ವಿತರಕರು ಮತ್ತು ಕೇಬಲ್‌ ಟಿವಿ ಆಪರೇಟರ್ಸ್‌ಗಳಿಗೆ ಕೋವಿಡ್‌ ಲಸಿಕೆ ನೀಡಬೇಕು. ಪತ್ರಕರ್ತರ ಕುಟುಂಬ ಸದಸ್ಯರಿಗೂ ಆದ್ಯತೆ ಮೇಲೆ ಲಸಿಕೆ ಕೊಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮನವಿ ಸಲ್ಲಿಸಿದೆ.

ರಾಜ್ಯದಲ್ಲಿ ಮತ್ತೆ ಸೋಂಕು ಏರಿಕೆ, ರೈತರ ನೆರವಿಗೆ ಬರಬೇಕಿದೆ ಸರ್ಕಾರ

ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ಸಿಎಂ ಯಡಿಯೂರಪ್ಪ ಅವರು ನೀಡಿದ್ದಾರೆ ಎಂದು ಸಂಘದ ಅಧಿಕಾರಿಗಳು ತಿಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios