Asianet Suvarna News Asianet Suvarna News

ಸಂಸದ ಅನಂತಕುಮಾರ್ ಹೆಗಡೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಘೋಷಿಸಿ ಸೈಲೆಂಟ್ ಆದ NSUI!

ಕೇಂದ್ರ ಸರ್ಕಾರದಿಂದ ನ್ಯಾಯಯುತವಾಗಿ ಕೊಡಬೇಕಾದ ತೆರಿಗೆ ಸಿಗದೆ ರಾಜ್ಯಕ್ಕೆ ಅನ್ಯಾಯವಾಗಿದೆ ಕರ್ನಾಟಕದ ಮೇಲೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ನೀತಿ ವಿರೋಧಿಸಿ ಸಂಸದ ಅನಂತ ಕುಮಾರ್ ಹೆಗಡೆ ನಿವಾಸಕ್ಕೆ ಬೆಳಗ್ಗೆ 10 ಗಂಟೆಗೆ ಮುತ್ತಿಗೆ ಹಾಕುವುದಾಗಿ ಎನ್‌ಎಸ್‌ಯುಐ ಸಂಘಟನೆ ಕಾರ್ಯಕರ್ತರು ಘೋಷಿಸಿದ್ದರು.

Justice for Karnataka NSUI protest against Central Govt  at sirsi uttara kannada rav
Author
First Published Feb 10, 2024, 1:47 PM IST | Last Updated Feb 10, 2024, 1:47 PM IST

ಕಾರವಾರ ಉತ್ತರ ಕನ್ನಡ (ಫೆ.10): ಕೇಂದ್ರ ಸರ್ಕಾರದಿಂದ ನ್ಯಾಯಯುತವಾಗಿ ಕೊಡಬೇಕಾದ ತೆರಿಗೆ ಸಿಗದೆ ರಾಜ್ಯಕ್ಕೆ ಅನ್ಯಾಯವಾಗಿದೆ ಕರ್ನಾಟಕದ ಮೇಲೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ನೀತಿ ವಿರೋಧಿಸಿ ಸಂಸದ ಅನಂತ ಕುಮಾರ್ ಹೆಗಡೆ ನಿವಾಸಕ್ಕೆ ಬೆಳಗ್ಗೆ 10 ಗಂಟೆಗೆ ಮುತ್ತಿಗೆ ಹಾಕುವುದಾಗಿ ಎನ್‌ಎಸ್‌ಯುಐ ಸಂಘಟನೆ ಕಾರ್ಯಕರ್ತರು ಘೋಷಿಸಿದ್ದರು.

ಉತ್ತರ ಕನ್ನಡ ಜಿಲ್ಲೆ ಶಿರಸಿ ನಗರದಲ್ಲಿರುವ ಸಂಸದ ಅನಂತ ಕುಮಾರ್ ಹೆಗಡೆ ಕಚೇರಿ. ಎನ್‌ಎಸ್‌ಯುಐ ಕಾರ್ಯಕರ್ತರು ಮುತ್ತಿಗೆ ಹಾಕುವ ಘೊಷಣೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಂಸದ ನಿವಾಸಕ್ಕೆ ಭಾರೀ ಬಿಗಿ ಭದ್ರತೆ ಒದಗಿಸಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಕಾರ್ಯಕರ್ತರು ಘೊಷಣೆ ಮಾಡಿದಂತೆ ಇಂದು ಬೆಳಗ್ಗೆ 10 ಗಂಟೆಗೆ ಮುತ್ತಿಗೆ ಹಾಕಬೇಕಿತ್ತು. ಆದರೆ ಸಮಯ ಮಧ್ಯಾಹ್ನ 1 ಗಂಟೆಯಾದರೂ ಯಾವುದೇ ಕಾರ್ಯಕರ್ತರು ಪ್ರತಿಭಟನೆ ಇಲ್ಲದೆ ಸೈಲಂಟಾಗಿರುವ ಕಾರ್ಯಕರ್ತರು. ಇತ್ತ ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆ ಬೆಳಗ್ಗೆಯಿಂದ ಸಂಸದರ ಮನೆ ಮುಂದೆ ಕಾದುಕಾದು ಸುಸ್ತಾದ ಶಿರಸಿ ಪೊಲೀಸರು. 

ನಾನು ಹೇಳಿದ್ದು ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಿ ಅಂತಾ, ಡಿಕೆ ಸುರೇಶ್‌ ಅಲ್ಲ:ಕೆಎಸ್ ಈಶ್ವರಪ್ಪ

ಕರ್ನಾಟಕ ಮತ್ತು ಕನ್ನಡಿಗರ ಮೇಲೆ ಕೇಂದ್ರ ಸರಕಾರ ಆಡಳಿತ ದೌರ್ಜನ್ಯ ನಡೆಸಿದೆ ಎಂದು ಆರೋಪಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ ಅದರಂತೆ ಶಿರಸಿಯಲ್ಲೂ ಪ್ರತಿಭಟನೆ ನಡೆಸಿ ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಘೋಷಣೆ ಮಾಡಿತ್ತು. ಸಾಕಷ್ಟು ಹೊತ್ತು ಕಳೆದರೂ ಅನಂತ ಕುಮಾರ ಹೆಗಡೆ ವಿರುದ್ಧ ಪ್ರತಿಭಟನೆಗೆ ಬಾರದ NSUI ಕಾರ್ಯಕರ್ತರು ಸೈಲಂಟಾಗಿರೋದ್ಯಾಕೆ ಎಂಬುದು ಪ್ರಶ್ನೆಯಾಗಿದೆ.

'ನಿಮ್ಮ ಮುಂದೆ ನಾನೇ ಬರುತ್ತೇನೆ ಗುಂಡಿಕ್ಕಿ ಕೊಲ್ಲಿ': ಈಶ್ವರಪ್ಪ ಹೇಳಿಕೆಗೆ ಡಿಕೆ ಸುರೇಶ್ ತೀಕ್ಷ್ಣ ಪ್ರತಿಕ್ರಿಯೆ

Latest Videos
Follow Us:
Download App:
  • android
  • ios