ನಾಲ್ವರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್, ಮಹಿಳೆ ಮೇಲೆ ಹಲ್ಲೆ ಕೊಲೆ ಬೆದರಿಕೆ ಕೇಸ್ ಸಂಬಂಧ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತೀರ್ಪು ಪ್ರಕಟಿಸಿದೆ. ಏನಿದು ಪ್ರಕರಣ?

ಶಿವಮೊಗ್ಗ (ಏ.17) ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ ಯೋಗೇಶ್ ಗೌಡ ಕೊಲೆ ಪ್ರಕರಣ ಹಾಗೂ ವಿನಯ್ ಕುಲಕರ್ಣಿ ಶಿಕ್ಷೆ ಕೇಸ್ ನಡುವೆ ಇದೀಗ ಶಿವಮೊಗ್ಗದ ಅಂತರಗಂಗೆಯಲ್ಲಿ ನಡೆದಿದ್ದ ಹಲ್ಲೆ ಹಾಗೂ ಕೊಲೆ ಪ್ರಕರಣದ ತೀರ್ಪು ಹೊರಬಿದ್ದಿದೆ. ಭದ್ರಾವತಿ ತಾಲೂಕಿನ ಅಂತರಗಂಗೆಯಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ నిందిసి, ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಧಲ್ಲಿ ಅಪರಾಧಿಗಳಿಗೆ 2 ವರ್ಷ ಜೈಲು ಶಿಕ್ಷೆ ಜೊತೆಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು

2023ರಲ್ಲಿ ನಡೆದ ಈ ಪ್ರಕರಣ ಸಂಬಂಧ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. ಐವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ. ಅಂತರಗಂಗೆಯ ನವೀನ್ (25), ಮನು (31), ಕೆ ಸಂತೋಷ್(31), ಅಭಿಷೇಕ್ (24), ವಿ.ಮಂಜುನಾಥ‌ಗೆ(33) ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

ಏನಿದು ಪ್ರಕರಣ

2023 ರ ಜೂನ್ 6 ರಂದು ರಾತ್ರಿ 11:45 ಸುಮಾರಿಗೆ ಅದೇ ಗ್ರಾಮದ ರಾಧಾ(35) ಎಂಬುವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಹಲ್ಲೆ ಮಾಡಿದ್ದಲ್ಲದೆ, ಜಾತಿ 'ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದರು. ರಾಧಾ ನೀಡಿದ ದೂರಿನ ಮೇರೆಗೆ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿ ಎಎಸ್‌ಪಿ ಜಿತೇಂದ್ರಕುಮಾರ ದಯಾಮ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆರೋಪ ಸಾಬೀತಾಗಿದ್ದರಿಂದ ಐವರಿಗೂ ಕಾರಾವಾಸ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಪಿ.ರತ್ನಮ್ಮ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಯೋಗೇಶ್ ಗೌಡ ಪ್ರಕರಣ

ಧಾರವಾಡ ಜಿಲ್ಲಾಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಲಯ 17 ಆರೋಪಿಗಳನ್ನು ದೋಷಿ ಎಂದು ತೀರ್ಪು ನೀಡಿದೆ. ಈ ಪೈಕಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದ್ದಾರೆ. ಇಂದು (ಏ.17) ಕೋರ್ಟ್ ಎಲ್ಲಾ ಆರೋಪಿಗಳ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಈ ಪ್ರಕರಣ ರಾಜ್ಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದೆ. ಈ ತೀರ್ಪಿನ ನಡುವೆ ಭದ್ರಾವತಿ ಕೋರ್ಟ್ ನೀಡಿದ ತೀರ್ಪು ಮಹತ್ವ ಪಡೆದುಕೊಂಡಿದೆ.