ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಮಾದಕ ದ್ರವ್ಯ ಸಾಗಣಿಕೆ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. 120ಕ್ಕೂ ಹೆಚ್ಚು ನಿಷೇಧಿತ ಎನ್ ರೆಕ್ಸ್ ಬಾಟಲ್‌ಗಳನ್ನು ಸಾಗಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದಾರೆ. ಈ ಘಟನೆ ಕಲಬುರಗಿ ಭಾರೀ ಸಂಚಲನ ಮೂಡಿಸಿದೆ.
ಕಲಬುರಗಿ (ಜುಲೈ.14): ಮಾದಕ ದ್ರವ್ಯ ಸಾಗಾಣಿಕೆ ಪ್ರಕರಣದಲ್ಲಿ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಆಪ್ತ ಎಂದು ಗುರುತಿಸಲ್ಪಟ್ಟಿರುವ ಲಿಂಗರಾಜ್ ಕಣ್ಣಿ, ನಿಷೇಧಿತ 120ಕ್ಕೂ ಹೆಚ್ಚು ಎನ್ ರೆಕ್ಸ್ ಬಾಟಲ್‌ಗಳನ್ನು ಸಾಗಿಸುತ್ತಿದ್ದ ವೇಳೆ ಬಜಾರ್ ಪೇಠ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಇದನ್ನೂ ಓದಿ: ಉಡುಪಿ ಮೂಲಕ ನಡೀತಿದ್ದ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: 8 ಮಂದಿ ಸೆರೆ
ಈ ಪ್ರಕರಣದಲ್ಲಿ ತೌಸಿಫ್ ಆಸಿಫ್ ತುರವೇ ಪ್ರಮುಖ ಆರೋಪಿಯಾಗಿದ್ದು, ಲಿಂಗರಾಜ್ ಕಣ್ಣಿ (A2) ಮತ್ತು ಕಲಬುರಗಿಯ ಸಯ್ಯದ್ ಇರ್ಫಾನ್ (A3) ಸಹ ಬಂಧನಕ್ಕೊಳಗಾಗಿದ್ದಾರೆ. ಮುಂಬೈನ ಬಜಾರ್ ಪೇಠ ಪೊಲೀಸರು ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಘಟನೆ ಕಲಬುರಗಿ ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ.ಹೆಚ್ಚಿನ ತನಿಖೆ ನಡೆಯುತ್ತಿದ್ದು, ಈ ಪ್ರಕರಣದ ಕುರಿತು ಮುಂಬೈ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
